HomeUncategorizedದ್ವೇಷ ಭಾಷಣ ಮಾಡುವಂತಿಲ್ಲ: ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್‌ನಿಂದ ಕಠಿಣ ಎಚ್ಚರಿಕೆ

ದ್ವೇಷ ಭಾಷಣ ಮಾಡುವಂತಿಲ್ಲ: ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್‌ನಿಂದ ಕಠಿಣ ಎಚ್ಚರಿಕೆ

- Advertisement -
- Advertisement -

ಬೆಂಗಳೂರು: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಮುಂದುವರಿಸಿದ್ದರೂ, ಇದೇ ವೇಳೆ ಕಠಿಣವಾದ ಷರತ್ತುಗಳನ್ನು ವಿಧಿಸಿದೆ. ಇನ್ನು ಮುಂದೆ ಯಾವುದೇ ದ್ವೇಷಪೂರಿತ ಭಾಷಣ ಮಾಡುವಂತಿಲ್ಲ ಅಥವಾ ಈ ಹಿಂದೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿನ ಅಪರಾಧಗಳನ್ನು ಪುನರಾವರ್ತಿಸುವಂತಿಲ್ಲ ಎಂದು ನ್ಯಾಯಾಲಯವು ಖಡಾಖಂಡಿತವಾಗಿ ಆದೇಶಿಸಿದೆ.

ಕೋಮು ಸೂಕ್ಷ್ಮ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಹರೀಶ್ ಪೂಂಜಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ಕೋರಿ ದೂರುದಾರರಾದ ಇಬ್ರಾಹಿಂ ಅವರು ಹಿರಿಯ ವಕೀಲ ಎಸ್.ಬಾಲನ್ ಮೂಲಕ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣಕುಮಾರ್ ಅವರ ಪೀಠವು ನಡೆಸಿತು. ವಿಚಾರಣೆ ವೇಳೆ, ಪೂಂಜಾ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿದರು. ಆದರೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಕೀಲ ಎಸ್.ಬಾಲನ್, “ಹರೀಶ್ ಪೂಂಜಾ ಅವರು ಪದೇ ಪದೇ ಅಪರಾಧ ಎಸಗುವ ಹಿನ್ನೆಲೆ ಹೊಂದಿದ್ದಾರೆ. ಅವರಿಗೆ ನೀಡಲಾದ ತಡೆಯಾಜ್ಞೆಯನ್ನು ದುರ್ಬಳಕೆ ಮಾಡಿಕೊಂಡು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸುವ ಕೃತ್ಯಗಳನ್ನು ಮುಂದುವರಿಸುತ್ತಿದ್ದಾರೆ. ಇಂತಹ ವ್ಯಕ್ತಿಗಳಿಗೆ ನ್ಯಾಯಾಲಯದ ರಕ್ಷಣೆ ಸಿಗಬಾರದು” ಎಂದು ಬಲವಾಗಿ ವಾದಿಸಿದರು.

“ಇಂತಹ ದ್ವೇಷ ಭಾಷಣಗಳು ಸಮಾಜದಲ್ಲಿ ಸಾಮೂಹಿಕ ಸನ್ನಿಗೆ ಕಾರಣವಾಗಿ, ಮಂಗಳೂರಿನಲ್ಲಿ ನಡೆದ ಹತ್ಯೆಗಳಂತಹ ಘೋರ ಕೃತ್ಯಗಳಿಗೆ ದಾರಿ ಮಾಡಿಕೊಡುತ್ತವೆ. ನ್ಯಾಯಾಲಯದ ತಡೆಯಾಜ್ಞೆಗಳು ಕೋಮುದ್ವೇಷ ಹರಡಲು ಅಸ್ತ್ರವಾಗಿ ಬಳಕೆಯಾಗುತ್ತಿವೆ” ಎಂದು ಅವರು ನ್ಯಾಯಪೀಠದ ಗಮನ ಸೆಳೆದರು.

ಪ್ರಕರಣದ ಹಿನ್ನೆಲೆ:

ಬೆಳ್ತಂಗಡಿಯ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹರೀಶ್ ಪೂಂಜಾ, ‘ಕಂತ್ರಿ ಮುಸ್ಲಿಮರನ್ನು ದೇವಸ್ಥಾನದ ಕಾರ್ಯಕ್ರಮಗಳಿಂದ ದೂರ ಇಡಬೇಕು’ ಮತ್ತು ‘ಮುಸ್ಲಿಮರೊಂದಿಗಿನ ಸೌಹಾರ್ದತೆಗಿಂತ ಹಿಂದೂಗಳ ನಡುವಿನ ಏಕತೆ ಮುಖ್ಯ’ ಎಂಬರ್ಥದ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ಅವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಎಫ್‌ಐಆರ್ ರದ್ದು ಕೋರಿ ಪೂಂಜಾ ಹೈಕೋರ್ಟ್‌ ಮೆಟ್ಟಿಲೇರಿದ್ದು, 2025ರ ಮೇ 22ರಂದು ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ಪಡೆದಿದ್ದರು.

ಶಾಸಕ ಪೂಂಜಾ ಅವರು ಸರಣಿ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂದು ವಾದಿಸಿದ ವಕೀಲ ಬಾಲನ್, ಅವರ ವಿರುದ್ಧ ಬೆಳ್ತಂಗಡಿ, ಧರ್ಮಸ್ಥಳ, ಬಂಟ್ವಾಳ ಮತ್ತು ಬಜ್ಪೆ ಪೊಲೀಸ್ ಠಾಣೆಗಳಲ್ಲಿ ಐಪಿಸಿ ಸೆಕ್ಷನ್ 153-A (ಕೋಮುದ್ವೇಷಕ್ಕೆ ಪ್ರಚೋದನೆ), 353 (ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 505(2) (ಸಮುದಾಯಗಳ ನಡುವೆ ದ್ವೇಷ ಸೃಷ್ಟಿಸುವ ಹೇಳಿಕೆ) ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿರುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಅಂತಿಮವಾಗಿ ತಡೆಯಾಜ್ಞೆಯನ್ನು ಆಗಸ್ಟ್ 7, 2025ರವರೆಗೆ ವಿಸ್ತರಿಸಿತು. ಆದರೆ, ಈ ಅವಧಿಯಲ್ಲಿ ಶಾಸಕರು ಯಾವುದೇ ಕಾರಣಕ್ಕೂ ದ್ವೇಷ ಭಾಷಣ ಮಾಡಬಾರದು ಮತ್ತು ಹಳೆಯ ಪ್ರಕರಣಗಳಲ್ಲಿನ ಅಪರಾಧಗಳನ್ನು ಪುನರಾವರ್ತಿಸಬಾರದು ಎಂದು ಕಟ್ಟುನಿಟ್ಟಿನ ಷರತ್ತು ವಿಧಿಸಿ ಆದೇಶ ಹೊರಡಿಸಿದೆ.

ಸೌಜನ್ಯ ಪರ ಧ್ವನಿ ಎತ್ತಿದ ಚಾನೆಲ್‌ಗಳು ಬ್ಲಾಕ್‌; ‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...