Homeಕರ್ನಾಟಕಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : 'ದುಡಿದು ಸಂಪಾದಿಸಿ' ಎಂದ ಹೈಕೋರ್ಟ್

ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್

- Advertisement -
- Advertisement -

ತನ್ನನ್ನು ತೊರೆದಿರುವ ಪತಿಯಿಂದ ಮಾಸಿಕ 6 ಲಕ್ಷ ರೂಪಾಯಿಗೂ ಅಧಿಕ ಜೀವನಾಂಶ ಕೋರಿದ ಮಹಿಳೆಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, “ಇಷ್ಟೊಂದು ಹಣವನ್ನು ಪ್ರತಿ ತಿಂಗಳೂ ಖರ್ಚು ಮಾಡುವ ಬಯಕೆಯಿದ್ದರೆ ನೀವೆ ದುಡಿಯಿರಿ”ಎಂದು ಕಿಡಿಕಾರಿದೆ.

ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಹಿಳೆ ಪರ ವಾದ ಮಂಡಿಸಿದ ವಕೀಲ ಆಕರ್ಷ ಸುಧಾಕರ ಕಾನಡೆ, “ಮಹಿಳೆಗೆ ಪೌಷ್ಠಿಕಾಂಶಯುಕ್ತ ಆಹಾರ ಬೇಕಿದೆ. ಪತಿ ಅವರನ್ನು ತೊರೆದ ಬಳಿಕ ಅವರು ಹೊರಗಡೆ ಊಟ ಮಾಡುವಂತಾಗಿದೆ. ಊಟದ ಖರ್ಚೇ ಪ್ರತಿ ತಿಂಗಳಿಗೆ 40 ಸಾವಿರದಷ್ಟಿದೆ. ಅವರನ್ನು ತೊರೆದಿರುವ ಪತಿ ಪ್ರತಿ ದಿನ ಬ್ರಾಂಡೆಡ್ ಬಟ್ಟೆಗಳನ್ನೇ ಧರಿಸುತ್ತಾರೆ. ಅವರ ಒಂದು ಶರ್ಟ್‌ ಬೆಲೆಯೇ ರೂ. 10 ಸಾವಿರದಷ್ಟಿರುತ್ತದೆ. ಇವರು ಮಾತ್ರ ಹಳೆಯ ಬಟ್ಟೆ ಧರಿಸಬೇಕಿದೆ. ಇವರ ಬಟ್ಟೆ, ಸೌಂದರ್ಯ ವರ್ಧಕ, ಔಷಧಿ ವೆಚ್ಚ ಮತ್ತು ಇತರ ವಸ್ತುಗಳ ಖರೀದಿ ಸೇರಿ ಪ್ರತಿ ತಿಂಗಳು ಒಟ್ಟು 60 ಸಾವಿರ ರೂ. ಬೇಕಿದೆ” ಎಂದಿದ್ದಾರೆ.

ಇದನ್ನು ಆಲಿಸಿದ ನ್ಯಾ. ಕನ್ನೆಘಂಟಿ ಅವರು “ದಾವೆದಾರರು ಚೌಕಾಸಿ ನಡೆಸಲು ನ್ಯಾಯಾಲಯ ಮಾರುಕಟ್ಟೆಯಲ್ಲ. ನಿಮ್ಮ ಕಕ್ಷಿದಾರರಿಗೆ ಅರ್ಥವಾಗುತ್ತಿಲ್ಲ. ನೀವು ಅರ್ಥ ಮಾಡಿಕೊಂಡು ಆಕೆಗೆ ಸಲಹೆ ನೀಡಬೇಕು. ಆಕೆಯ ವಾಸ್ತವಿಕ ಖರ್ಚುವೆಚ್ಚಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಯುತವಾಗಿ ನಡೆದುಕೊಳ್ಳಲು ನಿಮಗೆ ಕೊನೆಯ ಅವಕಾಶ ನೀಡಲಾಗುತ್ತಿದೆ” ಎಂದು ಮಹಿಳೆಯರ ಪರ ವಕೀಲರಿಗೆ ಹೇಳಿದ್ದಾರೆ.

ಮುಂದುವರಿದು, “ಅರ್ಜಿದಾರೆಯು ಆಕೆಯ ಮಗುವಿನ ಖರ್ಚಿಗೆ ವೆಚ್ಚವಾಗುವುದನ್ನು ಏನೂ ಹೇಳಿಲ್ಲ. ತನ್ನ ವೈಯಕ್ತಿಕ ಖರ್ಚಿಗೆ ಮಾಸಿಕ 6,16,300 ರೂ. ಬೇಕು ಎಂದು ಹೇಳಿದ್ದಾರೆ. ಪತಿ ಎಷ್ಟು ಸಂಪಾದನೆ ಮಾಡುತ್ತಿದ್ದಾರೆ ಎಂಬುವುದನ್ನು ಆಧರಿಸಿ ಪತ್ನಿಗೆ ಜೀವನಾಂಶ ನೀಡಲಾಗದು? ಪತಿ ಮಾಸಿಕ 10 ಕೋಟಿ ರೂ. ಸಂಪಾದಿಸಬಹುದು, ಹಾಗೆಂದ ಮಾತ್ರಕ್ಕೆ ನ್ಯಾಯಾಲಯ ಆಕೆಗೆ 5 ಕೋಟಿ ರೂ. ಕೊಡಲು ಆದೇಶಿಸಲಾಗುತ್ತದೆಯೇ? ಒಬ್ಬ ಮಹಿಳೆ ತನಗಾಗಿ ತಿಂಗಳಿಗೆ ಇಷ್ಟು ಖರ್ಚು ಮಾಡುತ್ತಾರೆಯೇ? ಹಾಗಾದರೆ ಅವರು ಸಂಪಾದಿಸಲಿ” ಎಂದು ಖಾರವಾಗಿ ನುಡಿದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ ಪರ ವಕೀಲ, ಜೀವನಾಂಶ ಕೋರಿಕೆಯು ಮಹಿಳೆಯ ವಾಸ್ತವಿಕ ಖರ್ಚು ವೆಚ್ಚವಲ್ಲ, ಅದು ನಿರೀಕ್ಷಾತ್ಮಕ ವೆಚ್ಚವಾಗಿದೆ ಎಂದಿದ್ದಾರೆ.

ಆಗ ಪೀಠವು, ನಿರೀಕ್ಷಾತ್ಮಕ ವೆಚ್ಚಗಳನ್ನು ಆಧರಿಸಿ ಜೀವನಾಂಶ ಕೋರಲು ಕಾನೂನಿನಲ್ಲಿ ಅವಕಾಶವಿಲ್ಲ. ಮಹಿಳೆ ತನ್ನ ಮಾಸಿಕ ಖರ್ಚು ವೆಚ್ಚ ಎಂದು ವೈಯಕ್ತಿಕ ಖರ್ಚಿನ ವಿವರ ನೀಡಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಇತರೆ ಹೊಣೆಗಾರಿಕೆ ವಿಚಾರ ಪ್ರಸ್ತಾಪಿಸಿಲ್ಲ. ವಾಸ್ತವಿಕ ವೆಚ್ಚಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಲು ಆಕೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದ್ದಾರೆ. ಮಹಿಳೆಯ ಪತಿ ಪರ ವಕೀಲ ಆದಿನಾಥ ನಾರದೆ ಹಾಜರಿದ್ದರು.

ಇದನ್ನೂ ಓದಿ : ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...