Homeಮುಖಪುಟಆರೋಪಿಗಳ "ಹೋರ್ಡಿಂಗ್‌ ಅಳವಡಿಕೆ" ವಿಚಾರಣೆ ಮುಂದೂಡಿಕೆ

ಆರೋಪಿಗಳ “ಹೋರ್ಡಿಂಗ್‌ ಅಳವಡಿಕೆ” ವಿಚಾರಣೆ ಮುಂದೂಡಿಕೆ

- Advertisement -
- Advertisement -

ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರದ ಆರೋಪದಲ್ಲಿ ಉತ್ತರ ಪ್ರದೇಶ ಸರ್ಕಾರವು ಅಳವಡಿಸಿರುವ ಹೋರ್ಡಿಂಗ್‌ಗಳ ವಿಚಾರಣೆಯನ್ನು ಉತ್ತರ ಪ್ರದೇಶ ಹೈಕೋರ್ಟ್ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.

ಪ್ರಕರಣದ ಆರಂಭಿಕ ವಿಚಾರಣೆಯನ್ನು ಬೆಳಿಗ್ಗೆ 10 ಗಂಟೆಗೆ ನಿಗದಿಪಡಿಸಲಾಗಿತ್ತು. ಆದರೆ ಯುಪಿ ಸರ್ಕಾರದ ಕೋರಿಕೆಯ ಮೇರೆಗೆ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಯವರೆಗೆ ಮುಂದೂಡಲಾಗಿದೆ. ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದ್ದರು. “ಸರಕಾರಕ್ಕೆ ನಾಗರಿಕರ ಖಾಸಗಿತನ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಹಕ್ಕಿಲ್ಲ, ವಿಚಾರಣೆ ಪ್ರಾರಂಭವಾಗುವ ಮೊದಲೇ ಅದನ್ನು ಸರಿಪಡಿಸುವ ಬಗ್ಗೆ ಭರವಸೆಯಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರ ಆರೋಪದ ಹೆಸರಿನಲ್ಲಿ ಉತ್ತರ ಪ್ರದೇಶ ಸರ್ಕಾರವು ಆರೋಪಿಗಳ ವಿಳಾಸ ಮತ್ತು ಫೋಟೋಗಳನ್ನು ಹೊತ್ತ ಹೋರ್ಡಿಂಗ್‌ಗಳನ್ನು ಲಕ್ನೋದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಿತ್ತು. ಆದಿತ್ಯವಾರ ರಜಾದಿನವಾದರು ಇದರ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಹೈಕೋರ್ಟ್ ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ಅವರ ನ್ಯಾಯಾಲಯವು ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ(ಸುಯೊ ಮೋಟೋ) ಕೈಗೆತ್ತಿಕೊಂಡಿತ್ತು.

ಅನೇಕ ಆರೋಪಿಗಳಿಗೆ ವೈಯಕ್ತಿಕ ಆಸ್ತಿ ಲಗತ್ತು ನೋಟಿಸ್‌ಗಳನ್ನು ಈಗಾಗಲೇ ಸರ್ಕಾರ ಕಳುಹಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ ಹೋರ್ಡಿಂಗ್‌ಗಳನ್ನು ಹಾಕಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...