Homeಕರ್ನಾಟಕನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

- Advertisement -
- Advertisement -

ರಾಜ್ಯದ ಎಲ್ಲಾ ನ್ಯಾಯಾಲಯಗಳ ಅಧೀಕೃತ ಕಾರ್ಯಕ್ರಮಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಇಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ನಿರ್ಧರಿಸಿದ್ದು, ಈ ಬಗ್ಗೆ ಹೈಕೋರ್ಟ್ ಶುಕ್ರವಾರದಂದು ಆದೇಶ ಹೊರಡಿಸಿದೆ.

ಕಳೆದ ಗಣರಾಜ್ಯೋತ್ಸವದ ಧ್ವಜಾರೋಹಣದ ಸಮಯದಲ್ಲಿ ರಾಯಚೂರಿನ ಜಿಲ್ಲಾ ನ್ಯಾಯಾಧೀಶರು, ನ್ಯಾಯಾಲಯದ ಅಧೀಕೃತ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಅವರ ಚಿತ್ರವನ್ನು ತೆಗೆಸಿರುವುದು ರಾಜ್ಯದಾದ್ಯಂತ ಭಾರಿ ವಿವಾದವೆಬ್ಬಿಸಿತ್ತು. ಇದನ್ನು ವಿರೋಧಿಸಿ ನ್ಯಾಯಾಧೀಶರ ವಿರುದ್ದ ಪ್ರತಿಭಟನೆಗಳು ಮತ್ತು ದೂರುಗಳು ಕೂಡಾ ದಾಖಲಾಗಿತ್ತು.

ಇದನ್ನೂ ಓದಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ನ್ಯಾಯಾಲಯ ಹೊರಡಿಸಿರುವ ಆದೇಶದಲ್ಲಿ, “ಬೆಂಗಳೂರಿನಲ್ಲಿ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯ ಪೀಠಗಳು ಮತ್ತು ರಾಜ್ಯದ ಜಿಲ್ಲಾ ಮತ್ತು ತಾಲೂಕಾ ನ್ಯಾಯಾಲಯಗಳಲ್ಲಿ ಭಾರತದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. B.R. ಅಂಬೇಡ್ಕರ್ ಅವರ ಭಾವಚಿತ್ರವನ್ನು ಜನವರಿ 26ರ ಗಣರಾಜ್ಯೋತ್ಸವ, ಆಗಸ್ಟ್‌ 15ರ ಸ್ವಾತಂತ್ರ್ಯೋತ್ಸವ, ನವೆಂಬರ್ 26 ರ ಸಂವಿಧಾನ ದಿನದಂತಹ ನ್ಯಾಯಾಲಯಗಳ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ಇರಿಸಲು ನಿರ್ಧರಿಸಿದೆ” ಎಂದು ಹೇಳಿದೆ.

ಆದ್ದರಿಂದ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್‌ಗಳು ಮತ್ತು ಜಿಲ್ಲಾ ನ್ಯಾಯಾಧೀಕರಣದ ಎಲ್ಲಾ ಘಟಕಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ನ್ಯಾಯಾಲಯಗಳಲ್ಲಿ ಇನ್ನು ಮುಂದಕ್ಕೆ ನಡೆಯುವ ಅಧೀಕೃತ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...