Homeಕರ್ನಾಟಕಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

- Advertisement -
- Advertisement -

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ (ಮಾ.2) ಹೈಕೋರ್ಟ್ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ಜೂನ್ 8ರ ವೇಳೆಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶಿಸಿದೆ. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

“ಮ್ಯಾಜಿಸ್ಟ್ರೇಟ್ ವರದಿಯಲ್ಲಿ ಪೊಲೀಸರು ಅನುಸರಿಸಿದ ಕಾರ್ಯವಿಧಾನದಲ್ಲಿ ಅಂತರಗಳು ಕಂಡುಬಂದರೆ, ಹೆಚ್ಚಿನ ತನಿಖೆಗಾಗಿ ನಾವು ಅದನ್ನು ಕೇಂದ್ರೀಯ ಸಂಸ್ಥೆಗೆ ಉಲ್ಲೇಖಿಸುತ್ತೇವೆ” ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿದೆ.

ಕಳೆದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಂಗ ತನಿಖೆಗೆ ಆದೇಶಿಸುವ ಕರ್ನಾಟಕ ಸರ್ಕಾರದ ಸಲಹೆಗೆ ಪ್ರತಿಕ್ರಿಯಿಸಲು ಪಿಯುಸಿಎಲ್ ಪರ ಹಾಜರಿದ್ದ ವಕೀಲರನ್ನು ನ್ಯಾಯಾಲಯ ಕೇಳಿತ್ತು.

ಪಿಯುಸಿಎಲ್ ಪರ ಹಾಜರಾದ ಹಿರಿಯ ವಕೀಲ ಆದಿತ್ಯ ಸೋಂದಿ ಸೋಮವಾರ ನ್ಯಾಯಾಂಗ ತನಿಖೆ ಕಡ್ಡಾಯವಾಗಿದೆ ಹಾಗೂ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಬೇಕು ಮತ್ತು ಈ ವಿಷಯದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ವಾದ ಮಂಡಿಸಿದ್ದಾರೆ.

ತನ್ನ ಆದೇಶದಲ್ಲಿ, ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರ ವಾದವನ್ನೂ ಪೀಠ ದಾಖಲಿಸಿಕೊಂಡಿದೆ. ಇಡೀ ಘಟನೆಯನ್ನು ದಾಖಲಿಸಲಾಗಿರುವುದರಿಂದ ಪೊಲೀಸ್ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಎಫ್‌ಐಆರ್ ದಾಖಲಿಸುವ ಅಗತ್ಯವಿಲ್ಲ ಎಂದು ಶೆಟ್ಟಿ ವಾದಿಸಿದ್ದಾರೆ. ತನಿಖೆಯ ಸಮಯದಲ್ಲಿ ಯಾವುದೇ ಹೆಚ್ಚುವರಿ ಅಪರಾಧಗಳು ಗುರುತಿಸಲ್ಪಟ್ಟರೆ, ಅವುಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಬಹುದು ಎಂದು ಅವರು ಹೇಳಿದ್ದಾರೆ.

ಪ್ರಕರಣವನ್ನು ಈಗ ವಹಿಸಲಾಗಿರುವ ಕರ್ನಾಟಕ ಸಿಐಡಿ, ಘಟನೆಯ ಎಲ್ಲಾ ಆಯಾಮಗಳನ್ನು ತನಿಖೆ ಮಾಡುತ್ತದೆ ಎಂದು ಶೆಟ್ಟಿ ತಿಳಿಸಿದ್ದಾರೆ. ಆದಾಗ್ಯೂ, ನ್ಯಾಯಾಂಗ ಮ್ಯಾಜಿಸ್ಟ್ರೇಟ್ ತನಿಖೆಗೆ ನಿರ್ದೇಶನ ನೀಡುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದಿದ್ದಾರೆ.

ಏಪ್ರಿಲ್ 13, 2025 ರಂದು ನಡೆದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಅವರ ಎನ್‌ಕೌಂಟರ್ ಕುರಿತು ಪಿಯುಸಿಎಲ್ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿತ್ತು.

ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಮತ್ತು ಪೊಲೀಸ್ ಕ್ರಮದಿಂದ ಉಂಟಾದ ಸಾವುಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಯುಸಿಎಲ್ ವರ್ಸಸ್ ಸ್ಟೇಟ್ ಆಫ್ ಮಹಾರಾಷ್ಟ್ರ (2014) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಲು ನಿರ್ದೇಶನಗಳನ್ನು ನೀಡುವಂತೆ ತನ್ನ ಅರ್ಜಿಯಲ್ಲಿ ಕೋರಿತ್ತು.

ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 8ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ : ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್‌ ಕುಮಾರ್‌ ವಿರುದ್ದ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪ ಇತ್ತು. 2025ರ ಏಪ್ರಿಲ್ 13ರಂದು ಅವರನ್ನು ಘಟನಾ ಸ್ಥಳಕ್ಕೆ ಮಹಜರು ಮಾಡಲು ಕರೆದೊಯ್ದಿದ್ದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಹೊಡೆದ ಗುಂಡಿಗೆ ಬಲಿಯಾಗಿದ್ದರು. ಇದರಿಂದ, ಎನ್‌ಕೌಂಟರ್ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ಪಿಯುಸಿಎಲ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಕರ್ನಾಟಕ ಸಿಐಡಿ ಎಸ್ಐಟಿ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...