Homeಕರ್ನಾಟಕ'ಜಾಡಮಾಲಿ' ಪದಕ್ಕೆ ಬದಲಾಗಿ 'ಸ್ವಚ್ಛತಾ ಸಹಾಯಕ' ಎಂದು ಬಳಸಲು ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

‘ಜಾಡಮಾಲಿ’ ಪದಕ್ಕೆ ಬದಲಾಗಿ ‘ಸ್ವಚ್ಛತಾ ಸಹಾಯಕ’ ಎಂದು ಬಳಸಲು ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

- Advertisement -
- Advertisement -

ರಾಜ್ಯ ಸರ್ಕಾರ ಇನ್ನು ಮುಂದೆ ‘ಜಾಡಮಾಲಿ’ ಪದ ಬಳಸಬಾರದು. ಇದಕ್ಕೆ ಪರ್ಯಾಯವಾಗಿ ‘ಸ್ವಚ್ಛತಾ ಸಹಾಯಕ’ ಎಂಬುವುದಾಗಿ ಸಂಬೋಧಿಸುವಂತೆ ಹೈಕೋರ್ಟ್‌ ಮಂಗಳವಾರ (ಏ.8) ಆದೇಶಿಸಿದೆ.

ಸೇವೆ ಕಾಯಂಗೊಳಿಸಬೇಕು ಎಂದು ಕೋರಿ ತುಮಕೂರು ಜಿಲ್ಲಾ ಮೀಸಲು ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಮೇಶ್‌ ಬಾಬು ಸೇರಿದಂತೆ ರಾಜ್ಯದ ವಿವಿಧೆಡೆಯ 31 ಠಾಣೆಗಳಲ್ಲಿನ ಜಾಡಮಾಲಿ ಪೊಲೀಸ್‌ ವರ್ಗ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌.ದೀಕ್ಷಿತ್‌ ಮತ್ತು ರಾಮಚಂದ್ರ ಡಿ.ಹುದ್ದಾರ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌.ಎ ಅಹಮದ್‌ ಅವರು “ಸರ್ಕಾರ ಜಾಡಮಾಲಿ ಪದ ಬಳಸುತ್ತಿರುವುದು ಸರಿಯಲ್ಲ. ಆದ್ದರಿಂದ, ಈ ಪದಕ್ಕೆ ಪರ್ಯಾಯವಾಗಿ ಸ್ವಚ್ಛತಾ ನೌಕರ ಎಂಬುದನ್ನು ಬಳಸುವಂತೆ ಪೀಠ ಆದೇಶಿಸಬೇಕು” ಎಂದು ಕೋರಿದ್ದಾರೆ.

ಈ ಮನವಿ ಪುರಸ್ಕರಿಸಿ, ಅದಕ್ಕೆ ಶ್ಲಾಘಿಸಿದ ಪೀಠ “ಸಮಾಜದಲ್ಲಿ ಅಮೂಲ್ಯ ಸೇವೆ ಸಲ್ಲಿಸುವ ಒಂದು ವರ್ಗದ ನೌಕರರನ್ನು ಉದ್ದೇಶಿಸುವ ಪದ ಗೌರವದಿಂದ ಕೂಡಿರಬೇಕು. ಹೀಗಾಗಿ, ಸರ್ಕಾರ ಇನ್ನು ಮುಂದೆ ಜಾಡಮಾಲಿ ಪದದ ಬಳಕೆಯ ಬದಲಾಗಿ ‘ಸ್ವಚ್ಛತಾ ನೌಕರ’ ಎಂಬುದಾಗಿಯೇ ಬಳಸಬೇಕು” ಎಂದು ನ್ಯಾಯಾಂಗ ಆದೇಶ ಹೊರಡಿಸಿದೆ.

ಅರ್ಜಿದಾರರು ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕಳೆದ ಹಲವು ದಶಕಗಳಿಂದ ಸ್ವೀಪರ್‌/ಜಾಡಮಾಲಿ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, 2018ರಲ್ಲಿ ಅವರನ್ನು ಸೇವೆಯಿಂದ ತೆಗೆದು ಹಾಕಲಾಗಿತ್ತು. ಅವರ ಜಾಗಕ್ಕೆ ಗುತ್ತಿಗೆ ಆಧಾರದಲ್ಲಿ ಅರೆಕಾಲಿಕ ನೌಕರರನ್ನು ನೇಮಿಸಲು ಪೊಲೀಸ್‌ ಇಲಾಖೆ ನಿರ್ಧರಿಸಿತ್ತು.

ಈ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣವು 2021ರಲ್ಲಿ ವಜಾಗೊಳಿಸಿತ್ತು. ಹಾಗಾಗಿ, ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದರು. ತಮ್ಮ ಸೇವೆ ಕಾಯಂಗೊಳಿಸಲು ಮತ್ತು ಸೇವಾ ಸೌಲಭ್ಯ ಕಲ್ಪಿಸಲು ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿದ್ದರು.
ಈ ಹಿಂದೆ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಅರ್ಜಿದಾರರನ್ನು ಕೆಲಸದಿಂದ ತೆಗೆದು ಹಾಕುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಅವರು ಕೆಲಸ ಮುಂದುವರಿಸಲು ಅನುಮತಿಸಬೇಕು ಮತ್ತು ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿತ್ತು.

ಸೌಜನ್ಯ : barandbench.com

ಕಲಬುರಗಿ | ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...