Homeಮುಖಪುಟಉಮರ್ ಖಾಲಿದ್ ವಿರುದ್ಧ ಯುಎಪಿಎ ಪ್ರಶ್ನಿಸಿದ ಹೈಕೋರ್ಟ್: ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಎಐಎಂಐಎಂ

ಉಮರ್ ಖಾಲಿದ್ ವಿರುದ್ಧ ಯುಎಪಿಎ ಪ್ರಶ್ನಿಸಿದ ಹೈಕೋರ್ಟ್: ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಎಐಎಂಐಎಂ

- Advertisement -
- Advertisement -

ಹೊಸದಿಲ್ಲಿ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಕ್ಕಾಗಿ ದೆಹಲಿ ಪೊಲೀಸರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಕಾಂಗ್ರೆಸ್ ಮತ್ತು ಎಐಎಂಐಎಂ ಸೇರಿದಂತೆ ರಾಜಕೀಯ ಪಕ್ಷಗಳು ಗುರುವಾರ ಪೊಲೀಸರು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರದ ನೀತಿಗಳೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಕಾಂಗ್ರೆಸ್ ಹೇಳಿದರೆ, ಎಐಎಂಐಎಂ ಅವರ ಬಂಧನದ ಹಿಂದಿನ ಉದ್ದೇಶವನ್ನು ಪ್ರಶ್ನಿಸಿ ಅದನ್ನು ‘ಕ್ರೂರ ಮತ್ತು ರಾಜಕೀಯ ಪ್ರೇರಿತ’ ಎಂದು ಕರೆದಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಪರಿಣಾಮವಾಗಿ 53ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದವು. ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಕಾರ್ಯಕರ್ತರು ಈ ಸಂಬಂದ ಪ್ರತಿಭಟಿಸಿದ್ದಕ್ಕಾಗಿ  ಹಲವಾರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ವಿಚಾರಣೆಯಲ್ಲಿ ವಿಳಂಬದ ಆಧಾರದ ಮೇಲೆ ಅವರು ಜಾಮೀನು ಕೋರಿದರೂ, ದೆಹಲಿ ಪೊಲೀಸರು ಇದನ್ನು ಪ್ರಶ್ನಿಸುತ್ತಿದ್ದಾರೆ.

ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇವರ ವಿರುದ್ಧ ಯುಎಪಿಎ ಹೇರುವ ಸಿಂಧುತ್ವವನ್ನು ಪ್ರಶ್ನಿಸಿತು. ಇವರುಗಳು ಪ್ರತಿಭಟನೆ ಆಯೋಜಿಸುವುದಕ್ಕಾಗಿ ಇವರುಗಳ ಮೇಲೆ ಯುಎಪಿಎ  ಹೇರುವುದು ಸಮರ್ಥಿಸುತ್ತದೆಯೇ ಎಂದು ಕೇಳಿತು.

ಅಧಿಕಾರದಲ್ಲಿರುವವರ ವಿರುದ್ಧದ ಭಿನ್ನಾಭಿಪ್ರಾಯವನ್ನು ದೇಶದ್ರೋಹವೆಂದು ನೋಡಲಾಗುವುದಿಲ್ಲ ಮತ್ತು ಪ್ರತಿಭಟನಾಕಾರರನ್ನು ‘ಭಯೋತ್ಪಾದಕರು’ ಎಂದು ಕರೆಯಲಾಗುವುದಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹೇಳಿದ್ದಾರೆ.

ಭಿನ್ನಾಭಿಪ್ರಾಯ ಮತ್ತು ದಂಗೆಯ ನಡುವೆ ಸ್ಪಷ್ಟವಾದ ವ್ಯತ್ಯಾಸವನ್ನು ಗುರುತಿಸುವ ಅಗತ್ಯವನ್ನು  ಮಾತನಾಡಿದ ಖೇರಾ ಅವರು, ಯಾರಾದರೂ ಸರ್ಕಾರಿ ನೀತಿಯ ವಿರುದ್ಧ ಪ್ರತಿಭಟಿಸುತ್ತಿದ್ದರೆ, ಅವರ ಜಾತಿ ಮತ್ತು ಧರ್ಮವನ್ನು ಅವಲಂಬಿಸಿ ನೀವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ. ದೇಶದ ಸಂವಿಧಾನವು ನಮಗೆ ಈ ಸ್ವಾತಂತ್ರ್ಯವನ್ನು ನೀಡಿದೆ ಎಂದಿದ್ದಾರೆ.

ಎಐಎಂಐಎಂ ನಾಯಕ ವಾರಿಸ್ ಪಠಾಣ್ ದೆಹಲಿ ಪೊಲೀಸರು ಮತ್ತು ಬಿಜೆಪಿ ನೇತೃತ್ವದ ಕೇಂದ್ರವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಕಾನೂನು ಪ್ರಕ್ರಿಯೆಯನ್ನು ‘ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ’ ತರಾಟೆಗೆ ತೆಗೆದುಕೊಂಡರು. “ಉಮರ್ ಖಾಲಿದ್ ಮತ್ತು ಇತರ ಅನೇಕರು ಇಂದು ಜೈಲಿನಲ್ಲಿದ್ದಾರೆ. ಯುಎಪಿಎ ಕಾನೂನನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಒಳಪಡಿಸುತ್ತಿಲ್ಲ. ಯಾವುದೋ ಒಬ್ಬ ದೊಡ್ಡ ಭಯೋತ್ಪಾದಕನ ಮೇಲೆ ಯುಎಪಿಎ ವಿಧಿಸಬೇಕು. ಸರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಅವರಂತಹ ವಿದ್ಯಾರ್ಥಿಗಳ ವಿರುದ್ಧ ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯವನ್ನು ಬಳಸಿದ್ದಕ್ಕಾಗಿ ಇವರ ಮೇಲೆ ಯುಎಪಿಎ ಹೇರಿದರೆ ಅದರ ಅರ್ಥವೇನು? ಅವರು ಸರ್ಕಾರದ ತಪ್ಪು ನೀತಿಗಳ ವಿರುದ್ಧ ಪ್ರತಿಭಟಿಸಿದರು. ಸರ್ಕಾರಿ ನೀತಿಗಳ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ನೀವು ಯಾರ ಮೇಲಾದರೂ ಯುಎಪಿಎ ವಿಧಿಸುತ್ತೀರಾ” ಎಂದು ಅವರು ಕೇಳಿದರು.

ಇನ್ನೋರ್ವ ಕಾಂಗ್ರೆಸ್ ನಾಯಕ ಶಕ್ತಿಸಿನ್ಹ್ ಗೋಹಿಲ್ ಮಾತನಾಡಿ, ದೆಹಲಿ ಪೊಲೀಸರು ಮತ್ತು ಬಿಜೆಪಿ ಸರ್ಕಾರವನ್ನು ಟೀಕಿಸಲು ಉಮರ್ ಅವರು ಈ ಅವಕಾಶವನ್ನು ಬಳಸಿಕೊಂಡರು. ಬಿಜೆಪಿ ತನ್ನ ರಾಜಕೀಯವನ್ನು ಮುಂದುವರಿಸುವುದಕ್ಕಾಗಿ ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಂಡ ಇತಿಹಾಸವನ್ನು ಹೊಂದಿದೆ. ಸಮುದಾಯಗಳ ನಡುವೆ ಒಡಕು ಮೂಡಿಸಲು ಆಡಳಿತವನ್ನು ಬಳಸಿಕೊಳ್ಳುವಲ್ಲಿ ಅದು ಹಿಂಜರಿಯುವುದಿಲ್ಲ. ವಾತಾವರಣವನ್ನು ಹಾಳು ಮಾಡಿದ್ದಕ್ಕಾಗಿ ನ್ಯಾಯಾಲಯವು ದೆಹಲಿ ಪೊಲೀಸರು ಮತ್ತು ಅದರ ರಾಜಕೀಯ ನೇತಾರರನ್ನು ತರಾಟೆಗೆ ತೆಗೆದುಕೊಂಡಿರುವುದು ಒಳ್ಳೆಯದು ಎಂದು ಅವರು ಹೇಳಿದರು.

ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಮತ್ತು ಇತರರ ಮೇಲೆ 2020ರ ಫೆಬ್ರವರಿ 23 ಮತ್ತು 25ರ  ನಡುವೆ ಈಶಾನ್ಯ ದೆಹಲಿಯಲ್ಲಿ ಗಲಭೆ ಉಂಟುಮಾಡಲು ಪೂರ್ವ ಯೋಜಿತ ಪಿತೂರಿ ನಡೆಸಿದ ಆರೋಪವಿದೆ. ಅವರ ಮೇಲೆ ಯುಎಪಿಎ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದ್ದು, ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರಿಗೆ ಮೊಬೈಲ್ ಫೋನ್ ನಿಷೇಧಿಸಿದ ಗುಜರಾತ್ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....