Homeಕರ್ನಾಟಕಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

- Advertisement -
- Advertisement -

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಪ್ರಶ್ನಿಸಲಾದ ಅರ್ಜಿಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮಧ್ಯಂತರ ರಕ್ಷಣೆ ನೀಡಲು ಸೋಮವಾರ ನಿರಾಕರಿಸಿರುವ ಹೈಕೋರ್ಟ್‌, ಈ ಸಂಬಂಧ ಏನಿದ್ದರೂ ಪ್ರತ್ಯೇಕ ಮಧ್ಯಂತರ ಅರ್ಜಿ ಸಲ್ಲಿಸಬಹುದು ಎಂದು ಅರ್ಜಿದಾರರಿಗೆ ಸೂಚಿಸಿದೆ.

ಬೀದರ್‌ನ ಶಿವಾರಾಜ ಕಣಶೆಟ್ಟಿ ಮತ್ತು ಇತರರು,ಕೆ.ಸಿ ಶಿವರಾಂ ಮತ್ತು ಇತರರು, ಬೆಂಗಳೂರಿನ ಬುಜೇಂದ್ರ ಮತ್ತು ಇತರರು, ನಟ ಮುಖ್ಯಮಂತ್ರಿ ಚಂದ್ರು ಮತ್ತು ಇತರರು ಹಾಗೂ ಬೆಂಗಳೂರಿನ ಸಮಾಜ ಸಂಪರ್ಕ ವೇದಿಕೆ ಅಧ್ಯಕ್ಷ ಜಿ.ಎನ್‌ ಶ್ರೀಕಂಠಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ ಅರವಿಂದ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಅರ್ಜಿದಾರ ಶಿವರಾಜ ಕಣಶೆಟ್ಟಿ ಪರ ಹಿರಿಯ ವಕೀಲ ಗಂಗಾಧರ ಆರ್‌. ಗುರುಮಠ ವಾದ ಮಂಡಿಸಲು ಮುಂದಾಗುತ್ತಿದ್ದಂತೆಯೇ, ಮುಖ್ಯ ನ್ಯಾಯಮೂರ್ತಿಯವರು, “ಇದರಲ್ಲಿ ತುರ್ತು ಏನಿದೆ, ಅವಸರ ಮಾಡಬೇಡಿ” ಎಂದರು. ಇದಕ್ಕೆ ಪೂರಕವಾಗಿ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ, “ತುರ್ತು ಏನಿಲ್ಲ” ಎಂಬುವುದಾಗಿ ಹೇಳಿದ್ದಾರೆ ಎಂದು barandbench.com ವರದಿ ಮಾಡಿದೆ.

ಇದಕ್ಕೆ ಪ್ರತಿಯಾಗಿ ಗುರುಮಠ ಅವರು “ಕಳೆದ ವಿಚಾರಣೆ ವೇಳೆ ಪೀಠ ನಮ್ಮ ಆಕ್ಷೇಪವನ್ನು ವಿವರವಾಗಿ ಆಲಿಸಿದೆ. ಈ ಪ್ರಕರಣದಲ್ಲಿ ಅರ್ಜಿದಾರರಿಗೆ ಮಧ್ಯಂತರ ರಕ್ಷಣೆ ನೀಡಬೇಕು. ಅಂತೆಯೇ, ರಾಜ್ಯ ಸರ್ಕಾರ 2002ರ ಮಾರ್ಚ್ 30ರಂದು ರೂಪಿಸಿದ ಮೀಸಲಾತಿಯನ್ನು ಮುಂದುವರಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ವಾಗ್ದಾನ ನೀಡಿದೆ…’ ಎಂದು ವಿವರಿಸಲು ಮುಂದಾದರು. ಆದರೆ, ಪೀಠ ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿತು ಎಂದು ವರದಿ ವಿವರಿಸಿದೆ.

ಎಚ್‌. ಕಾಂತರಾಜು ಅವರು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆಸಲಾಗಿರುವ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಆಕ್ಷೇಪಿಸಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ.

ಸೌಜನ್ಯ : barandbench.com

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...