Homeಕರ್ನಾಟಕಶಾಸಕ ಹರೀಶ್ ಪೂಂಜಾ ವಿರುದ್ದದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಶಾಸಕ ಹರೀಶ್ ಪೂಂಜಾ ವಿರುದ್ದದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

- Advertisement -
- Advertisement -

ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಲ್ಲದೆ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಏಕಸದಸ್ಯ ಪೀಠ, ಈ ಸಂಬಂಧ ವಿಚಾರಣಾಧೀನ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ಸೂಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೂಂಜಾ ವಿರುದ್ಧ ಪೊಲೀಸರು ಈಗಾಗಲೇ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಹೀಗಾಗಿ, ಆರೋಪಗಳನ್ನು ಕೈ ಬಿಡುವಂತೆ ಕೋರಿ ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಬೇಕು. ನ್ಯಾಯಾಲಯ ಎಂಟು ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಹೈಕೋರ್ಟ್ ಹೇಳಿದೆ.

ಪ್ರಕರಣದ ಹಿನ್ನೆಲೆ : ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದಡಿ ಶಶಿರಾಜ್ ಶೆಟ್ಟಿ ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಈ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿದ್ದ ಶಾಸಕ ಹರೀಶ್‌ ಪೂಂಜಾ, ಪೊಲೀಸ್ ಅಧಿಕಾರಿಗಳನ್ನು ನಿಂದಿಸಿ, ಬೆದರಿಕೆ ಒಡ್ಡಿದ್ದಾರೆ. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಎರಡು ಎಫ್‌ಐಆರ್‌ ದಾಖಲಿಸಿದ್ದಾರೆ.

ಇದನ್ನು ಪ್ರಶ್ನಿಸಿ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಪೊಲೀಸರು ಹರೀಶ್‌ ಪೂಂಜಾ ಹಾಗೂ ಇತರ ಆರೋಪಿಗಳ ವಿರುದ್ಧ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ನ್ಯಾಯಾಲಯದಿಂದ ಸಮನ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...