ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿದ್ದ ಫೆಬ್ರವರಿ 28ರ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಆದಾಗ್ಯೂ, ಅಗತ್ಯವಿಲ್ಲದೆ ಯಡಿಯೂರಪ್ಪ ಅವರನ್ನು ವಿಚಾರಣೆಗೆ ಕರೆಯಬೇಡಿ ಎಂದು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ. ಅಗತ್ಯವಿಲ್ಲದಿದ್ದರೆ ಎ -1 (ಯಡಿಯೂರಪ್ಪ) ಪರವಾಗಿ ಸಲ್ಲಿಸಲಾದ ವಿನಾಯಿತಿ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸುತ್ತದೆ ಎಂದು ತಿಳಿಸಿದೆ. … Continue reading ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ