- Advertisement -
- Advertisement -
ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲ ಅತ್ಯಾಚಾರ ಪ್ರಕರಣದಲ್ಲಿ ತನಗೆ ವಿಧಿಸಲಾದ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ (ಡಿ.3) ತಿರಸ್ಕರಿಸಿದೆ.
ಅಪರಾಧಿಯ ವಿರುದ್ದ ಇರುವ ಎಲ್ಲಾ ದಾಖಲೆಗಳು, ಪ್ರಕರಣದ ಗಂಭೀರತೆ ಮತ್ತು ಆರೋಪಿಯ ವಿರುದ್ಧ ಇನ್ನೂ ಪ್ರಕರಣಗಳು ಬಾಕಿ ಇರುವುದನ್ನು ಗಮನದಲ್ಲಿಟ್ಟುಕೊಂಡು, ಅಪರಾಧಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅದು ಇತರ ಪ್ರಕರಣಗಳ ಮೇಲೆ ಪರಿಣಾಮ ಬೀರಬಹುದು ಎಂದು ಪರಿಗಣಿಸಿ, ಈ ಪ್ರಕರಣದಲ್ಲಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಜಾಮೀನು ನೀಡುವುದು ಯೋಗ್ಯವಲ್ಲ ಎಂದು ನ್ಯಾಯಮೂರ್ತಿಗಳಾದ ಕೆ ಎಸ್. ಮುದಗಲ್ ಮತ್ತು ಟಿ ವೆಂಕಟೇಶ್ ನಾಯಕ್ ಅವರ ವಿಭಾಗೀಯ ಪೀಠವು ಮುಕ್ತ ನ್ಯಾಯಾಲಯದಲ್ಲಿ ಅಭಿಪ್ರಾಯಪಟ್ಟಿದೆ ಎಂದು ಲೈವ್ ಲಾ ವರದಿ ಮಾಡಿದೆ.


