Homeಕರ್ನಾಟಕಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಪ್ರಧಾನಿ ಮೋದಿ ಅವರ ಭರವಸೆಯ 'ನಾ ಖೌಂಗಾ, ನಾ ಖಾನೆ ದುಂಗಾ (ನಾನು ಭ್ರಷ್ಟಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ, ಯಾರನ್ನೂ ಹಾಗೆ ಮಾಡಲು ನಾನು ಬಿಡುವುದಿಲ್ಲ) ಎಂಬ ಹೇಳಿಕೆಗೆ ಇದು ಪರೀಕ್ಷೆಯ ಕಾಲ'- ರಣದೀಪ್ ಸಿಂಗ್ ಸುರ್ಜೆವಾಲ

- Advertisement -
- Advertisement -

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ, ತಮ್ಮ ವಿರುದ್ಧ ದಾಖಲಾಗಿರುವ ಭ್ರಷ್ಟಾರದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಮನವಿಯನ್ನು ಇಂದು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಬೆಂಗಳೂರಿನ ಬೆಳ್ಳಂದೂರು ಪ್ರದೇಶದಲ್ಲಿ ಅಕ್ರಮವಾಗಿ ಭೂಮಿಯ ಡಿ-ನೋಟಿಫೈ ಮಾಡಲಾಗಿದೆ ಎಂಬ ಆರೋಪದ ಮೇಲೆ ಯಡಿಯೂರಪ್ಪನವರ ವಿರುದ್ಧ ಪ್ರಕರಣ ದಾಖಲಾಗಿತ್ತು.

2013 ರಲ್ಲಿ ಆರ್‌ಟಿಐ ಕಾರ್ಯಕರ್ತರಾದ ವಾಸುದೇವ್ ರೆಡ್ಡಿ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ 2015 ರ ಫೆಬ್ರವರಿಯಲ್ಲಿ ಪ್ರಕರಣ ದಾಖಲಾಗಿತ್ತು. 2019 ರಲ್ಲಿ ತಮ್ಮ ಮೇಲೆ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜಿನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ಕರ್ನಾಟಕದ ಪ್ರಸ್ತುತ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯುರಪ್ಪ 2006 ರಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರು. ಈ ಅಧಿಕಾರಾವಧಿಯಲ್ಲಿ ಅಕ್ರಮವಾಗಿ ಭೂಮಿಯ ಡಿ-ನೋಟಿಫೈ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಯಡಿಯುರಪ್ಪ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ, “ಈ ಪ್ರಕರಣದಲ್ಲಿ ಅಪರಾಧ ನಡೆದಿರುವುದು ಮೇಲು ನೋಟಕ್ಕೆ ಕಂಡುಬರುತ್ತದೆ. ಹಾಗಾಗಿ ಇದನ್ನು ತನಿಖೆ ನಡೆಸಬೇಕಾಗಿದೆ” ಎಂದು ಹೇಳಿದ್ದಾರೆ.

ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಮೇಲೆ ವಾಗ್ದಾಳಿ ನಡೆಸಿ, “ಬಿಜೆಪಿಯ ಹೈಕಮಾಂಡ್ ಯಡಿಯೂರಪ್ಪನವರ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಂಗಾಳದ 9.5 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ 10 ಸಾವಿರ ಜಮೆ- ಮಮತಾ ಬ್ಯಾನರ್ಜಿ

ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಮತ್ತು ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಟ್ವೀಟ್ ಮಾಡಿ, “ಇಂತಹ ದೊಡ್ಡ ದೋಷಾರೋಪಣೆಯ ನಂತರ ಅಧಿಕಾರದಲ್ಲಿ ಮುಂದುವರಿಯಲು ಸಿಎಂ ಯಡಿಯೂರಪ್ಪ ಅವರಿಗೆ ಯಾವ ಹಕ್ಕಿದೆ? ನ್ಯಾಯಯುತ ತನಿಖೆ ಮತ್ತು ತಾರ್ಕಿಕ ತೀರ್ಮಾನಕ್ಕಾಗಿ, ಸಿಎಂ ವಿಳಂಬವಿಲ್ಲದೆ ಹುದ್ದೆ ತ್ಯಜಿಸಬೇಕು. ಪ್ರಧಾನಿ ಮೋದಿ ಅವರ ಭರವಸೆಯ ‘ನಾ ಖೌಂಗಾ, ನಾ ಖಾನೆ ದುಂಗಾ (ನಾನು ಭ್ರಷ್ಟಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ, ಯಾರನ್ನೂ ಹಾಗೆ ಮಾಡಲು ನಾನು ಬಿಡುವುದಿಲ್ಲ) ಎಂಬ ಹೇಳಿಕೆಗೆ ಇದು ಪರೀಕ್ಷೆಯ ಕಾಲ” ಎಂದು ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ಆಕ್ಷೇಪಾರ್ಹ ಕಾರ್ಯಕ್ರಮ: ರಿಪಬ್ಲಿಕ್ ಟಿವಿಗೆ 20,000 ಪೌಂಡ್ ದಂಡ ವಿಧಿಸಿದ ಬ್ರಿಟನ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...