Homeಕರ್ನಾಟಕಅಪಹರಣ ಪ್ರಕರಣ | ರೇವಣ್ಣ ಜಾಮೀನು ರದ್ದುಕೋರಿ ಎಸ್‌ಐಟಿ ಅರ್ಜಿ : ಆದೇಶ ಕಾಯ್ದಿರಿಸಿದ ಹೈಕೋರ್ಟ್

ಅಪಹರಣ ಪ್ರಕರಣ | ರೇವಣ್ಣ ಜಾಮೀನು ರದ್ದುಕೋರಿ ಎಸ್‌ಐಟಿ ಅರ್ಜಿ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಮಹಿಳೆಯ ಅಪಹರಣ ಪ್ರಕರಣದಲ್ಲಿ ಶಾಸಕ ಹೆಚ್‌ಡಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ರೇವಣ್ಣ ಮತ್ತು ಎಸ್‌ಐಟಿ ಪರ ವಾದ-ಪ್ರತಿವಾದ ಆಲಿಸಿದ ಬಳಿಕ ಆದೇಶ ಕಾಯ್ದಿರಿಸಿದೆ. ರೇವಣ್ಣ ಅವರಿಗೆ ವಿಶೇಷ ನ್ಯಾಯಾಲಯ ಮೇ 13ರಂದು ಜಾಮೀನು ನೀಡಿತ್ತು.

ವಿಚಾರಣೆ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, “ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ರೇವಣ್ಣ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಭೀತಾಗಿದೆ. ಅಲ್ಲದೆ, ಸಂತ್ರಸ್ತೆಯು ತನಿಖಾಧಿಕಾರಿಗಳು ಮತ್ತು ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಯಲ್ಲಿ ರೇವಣ್ಣ ವಿರುದ್ಧ ಆರೋಪ ಮಾಡಿದ್ದಾರೆ. ಈ ಆರೋಪವನ್ನು ದಾಖಲಿಸಿಕೊಂಡ ನ್ಯಾಯಾಲಯ ಜಾಮೀನನ್ನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಜಾಮೀನು ರದ್ದುಪಡಿಸಬೇಕು” ಎಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್, “ಜಾಮೀನು ಮಂಜೂರು ಮಾಡುವುದು ಮತ್ತು ರದ್ದುಪಡಿಸುವ ಪ್ರಕ್ರಿಯೆ ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ. ಅಲ್ಲದೆ, ಇಡೀ ಪ್ರಕರಣದಲ್ಲಿ ರೇವಣ್ಣ ಅವರ ಯಾವುದೇ ಪಾತ್ರವಿಲ್ಲ. ಆದರೆ, ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಸತೀಶ್ ಬಾಬಣ್ಣ ಎಂಬುವರು ರೇವಣ್ಣ ನಿಮ್ಮನ್ನು ಕರೆದುಕೊಂಡು ಬರುವುದಕ್ಕೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ ಎಂಬ ಆರೋಪವಿದೆ. ಇದು ಶಿಕ್ಷಾರ್ಹ ಅಪರಾಧವಲ್ಲ” ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೇ, ಪ್ರಕರಣದ ಸಂತ್ರಸ್ತೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪ ಶಾಸಕ ಹೆಚ್‌.ಡಿ ರೇವಣ್ಣ ಮೇಲಿದೆ. ಸಂತ್ರಸ್ತೆ ಪ್ರಜ್ವಲ್ ರೇವಣ್ಣ ವಿರುದ್ದ ದೂರು ನೀಡದಂತೆ ತಡೆಯಲು ಆಕೆಯನ್ನು ರೇವಣ್ಣ ಅಪಹರಣ ಮಾಡಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಮಹಿಳೆಯ ಮಗ ದೂರು ದಾಖಲಿಸಿದ್ದರು. ಎಸ್‌ಐಟಿ ರೇವಣ್ಣ ಅವರನ್ನು ಬಂಧಿಸಿತ್ತು.

ಇದನ್ನೂ ಓದಿ : ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...