Homeಕರ್ನಾಟಕಮೃತ ಪೌರಕಾರ್ಮಿಕನ ಪತ್ನಿಗೆ ನೀಡಿದ್ದ ನಿವೇಶನ ಕಿತ್ತುಕೊಂಡ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಕಿಡಿ

ಮೃತ ಪೌರಕಾರ್ಮಿಕನ ಪತ್ನಿಗೆ ನೀಡಿದ್ದ ನಿವೇಶನ ಕಿತ್ತುಕೊಂಡ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಕಿಡಿ

- Advertisement -
- Advertisement -

2008ರಲ್ಲಿ ಯಲಹಂಕದಲ್ಲಿ ಮ್ಯಾನ್‌ಹೋಲ್‌ಗೆ ಇಳಿದು ಕೆಲಸ ಮಾಡುತ್ತಿದ್ದ ವೇಳೆ ಮೃತಪಟ್ಟ ಪೌರಕಾರ್ಮಿಕನ ಪತ್ನಿಗೆ ನೀಡಿದ್ದ ನಿವೇಶನವನ್ನು ಕಿತ್ತುಕೊಂಡಿದ್ದ ದೊಡ್ಡಬಳ್ಳಾಪುರ ತಾಲ್ಲೂಕು ಅಧಿಕಾರಿಗಳ ವಿರುದ್ಧ ಕರ್ನಾಟಕ ಹೈಕೋರ್ಟ್ ಕಿಡಿಕಾರಿದೆ.

ಅಧಿಕಾರಿಗಳು ಇಚ್ಛಾಶಕ್ತಿಯ ಕೊರತೆ ಮತ್ತು ಬಡ ನಾಗರಿಕರ ಬಗ್ಗೆ ನಿರಾಸಕ್ತಿ ಪ್ರದರ್ಶಿಸುತ್ತಿದ್ದಾರೆ ಎಂದು ಎಚ್ಚರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನರವರು, “ಉಳ್ಳವರು, ಅಧಿಕಾರದಲ್ಲಿರುವವರು ಇಲ್ಲದವರ ಹಕ್ಕುಗಳನ್ನು ಕಿತ್ತುಕೊಳ್ಳುವುದನ್ನು ನಿಲ್ಲಿಸಲು ಇದು ಸಕಾಲವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣದ ಹಿನ್ನೆಲೆ

2008ರಲ್ಲಿ  ಪೌರಕಾರ್ಮಿಕನೊಬ್ಬನನ್ನು ಬಲವಂತವಾಗಿ ಯಲಹಂಕ ಬಳಿಯ ಮ್ಯಾನ್‌ಹೋಲ್‌ಗೆ ಇಳಿಸಿ ಸ್ವಚ್ಛಗೊಳಿಸಲಾಗುತ್ತಿತ್ತು. ಆ ವೇಳೆ ಉಸಿರುಗಟ್ಟಿ ಅವರು ಮೃತಪಟ್ಟಿದ್ದರು. ಪರಿಹಾರಕ್ಕೆ ಆಗ್ರಹಿಸಿ ಅವರ ಪತ್ನಿ ನಾಗಮ್ಮ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತದನಂತರ 2011-12 ರಲ್ಲಿ ಅವರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ನಿವೇ‍ಶನವೊಂದನ್ನು ಮಂಜೂರು ಮಾಡಲಾಗಿತ್ತು.

ಆದರೆ 9 ವರ್ಷಗಳ ನಂತರ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿಯು ಅದೇ ನಿವೇಶನದಲ್ಲಿ ನಾಡಕಚೇರಿ ಸ್ಥಾಪಿಸಲು ಮುಂದಾಗಿದೆ. ಅದನ್ನು ಪ್ರಶ್ನಿಸಿ ನಾಗಮ್ಮನವರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯು ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿ, ಅರ್ಜಿದಾರರು ಷರತ್ತುಗಳನ್ನು “ಉಲ್ಲಂಘಿಸಿದ” ಕಾರಣ ಅವರಿಗೆ ನಿವೇಶನದ ಹಕ್ಕು ಇಲ್ಲ. 2011-12ರಲ್ಲಿ ನಿವೇಶನ ಹಂಚಿಕೆಯಾಗಿದ್ದರೂ ಅಲ್ಲಿ 2022ರ ಜೂನ್‌ವರೆಗೆ ಯಾವುದೇ ಕಟ್ಟಡ ನಿರ್ಮಾಣ ಮಾಡಿಲ್ಲ ಎಂದು ವಾದಿಸಿದ್ದರು.

ಆದರೆ ಅಧಿಕಾರಿಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ಅಧಿಕಾರಿಗಳು ನಿವೇಶನವನ್ನು ನಾಗಮ್ಮನವರಿಗೆ ಮರಳಿಸಿದ್ದಾರೆ.

ಅರ್ಜಿದಾರರು ಕೋರ್ಟ್‌ಗೆ ಬರುವ ಮುನ್ನವೇ ಈ ಕ್ರಮ ಕೈಗೊಳ್ಳಬಹುದಿತ್ತಲ್ಲವೇ? ಇದು ಒಟ್ಟಾರೆ ಬಡವರ ಕುರಿತು ಅಧಿಕಾರದಲ್ಲಿರುವವರ ನಿರ್ಲಕ್ಷ್ಯ ಧೋರಣೆಯಾಗಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನರವರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಈ ಧೋರಣೆಗಾಗಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ಆಯುಕ್ತರು ಮತ್ತು ದೊಡ್ಡಬೆಳವಂಗಲ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಂಟಿಯಾಗಿ ಮತ್ತು 50,000 ರೂ ವೆಚ್ಚವನ್ನು ಪಾವತಿಸುವಂತೆ ಹಾಗೂ ಅರ್ಜಿದಾರರಿಗೆ ವ್ಯಾಜ್ಯ ವೆಚ್ಚವಾಗಿ 50,000 ರೂಗಳನ್ನು ಗ್ರಾಮ ಪಂಚಾಯ್ತಿ ಪಾವತಿಸುವಂತೆ ಸೂಚಿಸಿದ್ದಾರೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಕೆಲಸ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ 2013ರ ಸೆಕ್ಷನ್ 13ರ ಪ್ರಕಾರ ಅವರಿಗೆ ಹಣಕಾಸು ಸೇರಿದಂತೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕೆಂದು ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ; ಸಂಸದರ ವಾಕ್ ಸ್ವಾತಂತ್ರ್ಯಕ್ಕೂ ಸೆನ್ಸಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...