Homeಮುಖಪುಟವಾಚತಿ ಬುಡಕಟ್ಟು ಗ್ರಾಮದಲ್ಲಿ ದೌರ್ಜನ್ಯ ಪ್ರಕರಣ: ಪೊಲೀಸರು ಸೇರಿ 215 ಅಧಿಕಾರಿಗಳಿಗೆ ವಿಧಿಸಿದ್ದ ಶಿಕ್ಷೆ ಎತ್ತಿ...

ವಾಚತಿ ಬುಡಕಟ್ಟು ಗ್ರಾಮದಲ್ಲಿ ದೌರ್ಜನ್ಯ ಪ್ರಕರಣ: ಪೊಲೀಸರು ಸೇರಿ 215 ಅಧಿಕಾರಿಗಳಿಗೆ ವಿಧಿಸಿದ್ದ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

1992ರ ವಾಚತಿ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸೇರಿ 215 ಮಂದಿ ಅಧಿಕಾರಿಗಳಿಗೆ ವಿಧಿಸಿದ್ದ ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ಎತ್ತಿ ಹಿಡಿದಿದೆ.

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ವಾಚತಿ ಎಂಬ ಬುಡಕಟ್ಟು ಗ್ರಾಮದಲ್ಲಿ 18 ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಪುರುಷರಿಗೆ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ 2011ರಲ್ಲಿ ಕೆಳ ನ್ಯಾಯಾಲಯವು ಪೊಲೀಸರು, ಅರಣ್ಯ ಮತ್ತು ಕಂದಾಯ ಅಧಿಕಾರಿಗಳು ಸೇರಿ 215 ಮಂದಿಗೆ ದೋಷಿ ಎಂದು ತೀರ್ಪು ನೀಡಿತ್ತು.

ಶ್ರೀಗಂಧ ಕಳ್ಳಸಾಗಾಣಿಕೆ ಆರೋಪಿಸಿ 1992 ಜೂ.20ರಂದು ವಾಚತಿ ಪ್ರದೇಶದಲ್ಲಿ ಅರಣ್ಯ ಮತ್ತು ಕಂದಾಯ ಅಧಿಕಾರಿಗಳೊಂದಿಗೆ ಪೊಲೀಸ್ ತಂಡಗಳು ಗ್ರಾಮದ ಮೇಲೆ ದಾಳಿ ನಡೆಸಿದ್ದವು. ಮೂರು ದಿನಗಳ ಕಾಲ ದಾಳಿ ನಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ಹೈಕೋರ್ಟ್ ಕೆಳ ನ್ಯಾಯಾಲಯದ 2011ರ ಆದೇಶವನ್ನು ಎತ್ತಿಹಿಡಿದಿದ್ದು, ಅದರ ವಿರುದ್ಧ ಅಪರಾಧಿಗಳ ಮೇಲ್ಮನವಿಯನ್ನು ವಜಾಗೊಳಿಸಿದೆ. ಇದಲ್ಲದೆ ಅತ್ಯಾಚಾರ ಸಂತ್ರಸ್ತ 18 ಮಂದಿಗೆ ತಲಾ 10 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ಪೈಕಿ ಅತ್ಯಾಚಾರ ಆರೋಪಿಗಳಿಂದ ತಲಾ  5ಲಕ್ಷ ರೂ. ವಸೂಲಿ ಮಾಡಬೇಕು ಎಂದು ಸೂಚಿಸಿದೆ.

ಇದಲ್ಲದೆ ಸರಕಾರವು  ಘಟನೆಯಲ್ಲಿ ಬದುಕುಳಿದ ಸಂತ್ರಸ್ತರಿಗೆ ಉದ್ಯೋಗಗಳನ್ನು ಒದಗಿಸಬೇಕು ಮತ್ತು ಅವರಿಗೆ ಅಥವಾ ಅವರ ಕುಟುಂಬಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಸಹಾಯ ಮಾಡಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದಲ್ಲಿ 269 ಆರೋಪಿಗಳ ಪೈಕಿ 126 ಅರಣ್ಯಾಧಿಕಾರಿಗಳು, 84 ಪೊಲೀಸ್ ಸಿಬ್ಬಂದಿ ಮತ್ತು ಐವರು ಕಂದಾಯ ಅಧಿಕಾರಿಗಳನ್ನು 12 ವರ್ಷಗಳ ಹಿಂದೆ ತಪ್ಪಿತಸ್ಥರು ಎಂದು ಹೇಳಲಾಗಿತ್ತು. ಪ್ರಕರಣದಲ್ಲಿ 54 ಆರೋಪಿಗಳು ತೀರ್ಪು ನೀಡುವ ಮೊದಲೇ ಸಾವನ್ನಪ್ಪಿದ್ದರು.

ಇದಲ್ಲದೆ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ವಿಫಲರಾದ ಅಂದಿನ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ), ವಿಭಾಗೀಯ ಅರಣ್ಯಾಧಿಕಾರಿ (ಡಿಎಫ್‌ಒ) ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.

ಇದನ್ನು ಓದಿ: ಸಾಹಿತಿಗಳಿಗೆ ಪತ್ರದ ಮೂಲಕ ಜೀವ ಬೆದರಿಕೆ ಪ್ರಕರಣ: ಸಂಘಪರಿವಾರದ ಕಾರ್ಯಕರ್ತನ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

0
ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ. ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು...