Homeಕರ್ನಾಟಕಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

- Advertisement -
- Advertisement -

ರಾಜ್ಯದಲ್ಲಿ ಎಲ್ಲಾ ರೀತಿಯ ಹುಕ್ಕಾ ಉತ್ಪನ್ನಗಳ ಮಾರಾಟ, ಬಳಕೆ, ಸಂಗ್ರಹಣೆ, ಜಾಹೀರಾತು ಮತ್ತು ಪ್ರಚಾರವನ್ನು ನಿಷೇಧಿಸಿರುವ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿದ ಸಲ್ಲಿಸಲಾಗಿದ್ದ ಅರ್ಜಿಗಳನ್ನು ತಿರಸ್ಕರಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಾದ ಆಲಿಸಿದ ಬಳಿಕ ಮಾರ್ಚ್ 11ರಂದು ತೀರ್ಪನ್ನು ಕಾಯ್ದಿರಿಸಿತ್ತು. ಸರ್ಕಾರದ ಅಧಿಸೂಚನೆಯಲ್ಲಿ, ಹುಕ್ಕಾ ಬಾರ್ ಬೆಂಕಿಯ ಅಪಾಯಗಳಿಗೆ ಕಾರಣವಾಗಿದೆ ಮತ್ತು ರಾಜ್ಯದ ಅಗ್ನಿ ನಿಯಂತ್ರಣ ಮತ್ತು ಅಗ್ನಿ ಸುರಕ್ಷತೆ ಕಾನೂನುಗಳನ್ನು ಉಲ್ಲಂಘಿಸುತ್ತದೆ. ಹೋಟೆಲ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವನೆಯು ಆಹಾರ ಪದಾರ್ಥಗಳ ಸಾರ್ವಜನಿಕ ಬಳಕೆಗೆ ಅಸುರಕ್ಷಿತವಾಗಿಸುತ್ತದೆ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ತಿಳಿಸಲಾಗಿದೆ.

ಆದೇಶ ಉಲ್ಲಂಘಿಸುವವರ ವಿರುದ್ಧ ಕೋಟ್ಪಾ (ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ) 2003, ಮಕ್ಕಳ ಆರೈಕೆ ಮತ್ತು ಸಂರಕ್ಷಣಾ ಕಾಯ್ದೆ 2015, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ) ನಿಯಮಗಳು 2015, ಭಾರತೀಯ ದಂಡ ಸಂಹಿತೆ, ಬೆಂಕಿ ನಿಯಂತ್ರಣ ಮತ್ತು ಬೆಂಕಿಯಿಂದ ರಕ್ಷಣೆ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ರಾಜ್ಯ ಸರ್ಕಾರವು ಹೇಳಿದೆ.

ಅಡ್ವೊಕೇಟ್ ಜನರಲ್ ಕೆ ಶಶಿ ಕಿರಣ್ ಶೆಟ್ಟಿ ಅವರು ಧೂಮಪಾನ ಪ್ರದೇಶದೊಳಗೆ ಯಾವುದೇ ಸೇವೆಯನ್ನು ಅನುಮತಿಸಬಾರದು. ಆದರೆ, ಹುಕ್ಕಾ ಬಾರ್‌ಗಳು ಪೂರ್ಣ ಸೇವೆಯನ್ನು ಒಳಗೊಂಡಿರುತ್ತವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಸಾರ್ವಜನಿಕ ಹಿತಾಸಕ್ತಿಯಿಂದ ಅಧಿಸೂಚನೆ ಹೊರಡಿಸಲಾಗಿದೆ ಮತ್ತು ಅದನ್ನು ಆರ್ಟಿಕಲ್ 162 ರ ಅಡಿಯಲ್ಲಿ ಉಳಿಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಅಲ್ಲದೆ, ಹುಕ್ಕಾ ಮಾರಾಟ/ಬಳಕೆಯನ್ನು ನಿಯಂತ್ರಿಸುವ ಮಸೂದೆಯು ರಾಜ್ಯಪಾಲರ ಒಪ್ಪಿಗೆಗೆ ಬಾಕಿಯಿರುವಾಗ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಬಹುದು ಎಂದು ಹೇಳಿದರು.

ಇದನ್ನೂ ಓದಿ : ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ವಿವಾದ ಸೌಹಾರ್ದಯುತವಾಗಿ ಬಗೆಹರಿಸಲು ಸುಪ್ರೀಂಕೋರ್ಟ್‌ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...