Homeಮುಖಪುಟಸಚಿನ್ ಪೈಲಟ್‌ ಬಣದ ಅನರ್ಹತೆ ಕುರಿತು ಜುಲೈ 24ರಂದು ಹೈಕೋರ್ಟ್‌ ತೀರ್ಪು

ಸಚಿನ್ ಪೈಲಟ್‌ ಬಣದ ಅನರ್ಹತೆ ಕುರಿತು ಜುಲೈ 24ರಂದು ಹೈಕೋರ್ಟ್‌ ತೀರ್ಪು

- Advertisement -
- Advertisement -

ರಾಜಸ್ಥಾನ ವಿಧಾನಸಭಾ ಸ್ಪೀಕರ್ ಅವರು ನೀಡಿರುವ ಅನರ್ಹತೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಚಿನ್ ಪೈಲಟ್ ಮತ್ತು ಇತರ 18 ಭಿನ್ನಮತೀಯ ಕಾಂಗ್ರೆಸ್ ಶಾಸಕರು ಸಲ್ಲಿಸಿದ್ದ ರಿಟ್ ಅರ್ಜಿಯ ಕುರಿತು ಜುಲೈ 24ರಂದು ತೀರ್ಪು ಪ್ರಕಟಿಸುವುದಾಗಿ ರಾಜಸ್ಥಾನ ಹೈಕೋರ್ಟ್ ತಿಳಿಸಿದೆ. ಅಲ್ಲಿಯವರೆಗೆ ಶಾಸಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸ್ಪೀಕರ್‌ಗೆ ಸೂಚಿಸಲಾಗಿದೆ.

ಕಳೆದ ವಾರ ನಡೆದ ಎರಡು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗಳಲ್ಲಿ ಪಾಲ್ಗೊಳ್ಳಲು ಶಾಸಕರು ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಸ್ಪೀಕರ್ ಸಿಪಿ ಜೋಶಿಗೆ ದೂರು ನೀಡಿದ ನಂತರ ಶಾಸಕರಿಗೆ ಅನರ್ಹತೆ ನೀಡಲಾಗಿತ್ತು.

ಸಂವಿಧಾನದ 10 ನೇ ಶೆಡ್ಯೂಲ್‌ನಡಿ ಪೈಲಟ್ ಮತ್ತು ಅವರನ್ನು ಬೆಂಬಲಿಸುವ ಶಾಸಕರ ವಿರುದ್ಧ ಕಾಂಗ್ರೆಸ್ ಕ್ರಮಕೈಗೊಂಡಿದೆ ಎಂದು ಸ್ಪೀಕರ್‌ಗೆ ನೀಡಿದ ದೂರಿನಲ್ಲಿ ತಿಳಿಸಿದೆ. ಆದರೂ ವಿಧಾನಸಭಾ ಅಧಿವೇಶನದಲ್ಲಿದ್ದಾಗ ಮಾತ್ರ ಪಕ್ಷದ ವಿಪ್ ಅನ್ವಯಿಸುತ್ತದೆ ಎಂದು ಪೈಲಟ್ ಬಣ ವಾದಿಸಿತ್ತು.

ಬಂಡೆಯಂತೆ ಬೆನ್ನಿಗೆ ನಿಲ್ಲಿ – ಗೆಹ್ಲೋಟ್

ಇನ್ನೊಂದೆಡೆ ಮೂರನೇ ಶಾಸಕಾಂಗ ಪಕ್ಷದ ಸಭೆ ನಡೆಸಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮನ್ನು ಬೆಂಬಲಿಸುವ ಶಾಸಕರು “ಬಂಡೆಯಂತೆ ದೃಢವಾಗಿ ಬೆನ್ನಿಗೆ ನಿಲ್ಲುವಂತೆ” ಮನವಿ ಮಾಡಿದ್ದಾರೆ.

ಕಳೆದ ವಾರದಿಂದ ಅವರ ಬೆಂಬಲಿಗರು ತಂಗಿದ್ದ ಐಷಾರಾಮಿ ಹೋಟೆಲ್ ಫೇರ್‌ಮಾಂಟ್ ಜೈಪುರದಲ್ಲಿ ಗೆಹ್ಲೋಟ್ 100 ಕ್ಕೂ ಹೆಚ್ಚು ಶಾಸಕಾಂಗ ಸಭೆಯ ಸದಸ್ಯರನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.

“ನಾವು 115 ಕ್ಕೂ ಹೆಚ್ಚು ಶಾಸಕರನ್ನು ಹೊಂದಿದ್ದೇವೆ, ಕೆಲವರು ಗೈರುಹಾಜರಾಗಿದ್ದಾರೆ ಅಷ್ಟೇ. ಕಾಂಗ್ರೆಸ್ ಆಗಿರಲಿ ಅಥವಾ ಬಿಜೆಪಿ ಆಗಿರಲಿ ಚುನಾವಣೆಗಳು ನಡೆಯಬೇಕೆಂದು ಯಾರೂ ಬಯಸುವುದಿಲ್ಲ” ಎಂದು ಗೆಹ್ಲೋಟ್ ಹೇಳಿದ್ದಾರೆ.


ಇದನ್ನೂ ಓದಿ: ಮಗುವಿನ ಮುಖದ ನಿಷ್ಪ್ರಯೋಜಕ : ಸಚಿನ್ ಪೈಲಟ್ ವಿರುದ್ಧ ಗೆಹ್ಲೋಟ್ ವಾಗ್ದಾಳಿ

ಬಿಜೆಪಿ ಸೇರಲು ಸಚಿನ್ ಪೈಲಟ್‌ರಿಂದ 35 ಕೋಟಿ ರೂ ಆಮಿಷ: ಕಾಂಗ್ರೆಸ್ ಶಾಸಕನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...