ಕೋರ್ಸ್‌ಗಳ ಪ್ರವೇಶದಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಶೇಕಡ 0.5 ಮೀಸಲಾತಿ ನೀಡುವಂತೆ ನಿರ್ದೇಶಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯಿಂದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಹಿಂದೆ ಸರಿದಿದ್ದಾರೆ.
ಗುರುವಾರ ಕೆಲ ಕಾಲ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್, ತಾನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯನಾಗಿರುವುದರಿಂದ ಅರ್ಜಿ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ಹೇಳಿದರು. ಆಡಳಿತ ಮಂಡಳಿಯಲ್ಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನು ಸದಸ್ಯರು ಎಂದು ಉಲ್ಲೇಖಿಸಲಾಗಿದೆ.
ಆಗ ವಿಭಾಗೀಯ ಪೀಠದ ಮತ್ತೊಬ್ಬರು ಸದಸ್ಯರಾದ ನ್ಯಾಯಮೂರ್ತಿ ಸಿ.ಎಂ ಜೋಶಿ ಅವರು “ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಲ್ಲದ ಪೀಠದ ಮುಂದೆ ಮೇಲ್ಮನವಿಯನ್ನು ನಾಳೆಗೆ ವಿಚಾರಣೆಗೆ ನಿಗದಿಪಡಿಸಲಾಗುವುದು” ಎಂದು ತಿಳಿಸಿದರು.
ಇದಕ್ಕೂ ಮುನ್ನ, ಸುಮಾರು ಒಂದು ಗಂಟೆಗೂ ಅಧಿಕ ಕಾಲ ಹಿರಿಯ ವಕೀಲ ಕೆ.ಜಿ ರಾಘವನ್ ಅವರು ಎನ್‌ಎಸ್‌ಎಲ್‌ಐಯು ವಿರುದ್ಧ ಏಕಸದಸ್ಯ ಪೀಠವು ಮಾಡಿರುವ ಆದೇಶ ಕಾನೂನಿನ ವ್ಯಾಪ್ತಿ ಮೀರಿದೆ ಎಂದು ವಾದಿಸಿದರು.
ಎನ್‌ಎಲ್‌ಎಸ್‌ಐಯುನ ಹಾಲಿ ಪ್ರವೇಶ ಮತ್ತು ಆರ್ಥಿಕ ನೀತಿಯು ಟ್ರಾನ್ಸ್‌ಜೆಂಡರ್‌ಗಳಿಗೆ ತಾರತಮ್ಯ ಮಾಡುತ್ತಿದೆ. ಹೀಗಾಗಿ, ಪ್ರವೇಶ ಕೋರಿ ಅರ್ಜಿ ಹಾಕುವ ತೃತೀಯ ಲಿಂಗಿಗಳಿಗೆ ಎಲ್ಲಾ ಕೋರ್ಸ್‌ಗಳಲ್ಲಿ ಶೇ. 0.5ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶಿಸಿತ್ತು.
Courtesy : livelaw.in and barandbench.com
ಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: ‘ಸಂಯುಕ್ತ ಹೋರಾಟ ಕರ್ನಾಟಕ’ ಘೋಷಣೆ


