Homeಮುಖಪುಟಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್...

ಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್ ಮಧ್ಯಂತರ ಆದೇಶ

- Advertisement -
- Advertisement -

ಯಾವುದೇ ಖಾಸಗಿ ಸಂಘ, ಸಂಸ್ಥೆ ಅಥವಾ ವ್ಯಕ್ತಿಗಳ ಗುಂಪು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ಬಳಸಲು ‘ಪೂರ್ವಾನುಮತಿ’ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ (ಅ.28) ಆದೇಶಿಸಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.

ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಈ ಆದೇಶವು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರುತ್ತದೆ ಎಂದು ವಾದಿಸಿದ್ದಾರೆ.

“ಹತ್ತಕ್ಕಿಂತ ಹೆಚ್ಚು ಜನರು ಸೇರುವ ಸಭೆಗಳಿಗೆ ಅನುಮತಿ ಪಡೆಯಬೇಕೆಂದು ಸರ್ಕಾರ ಆದೇಶಿಸಿದೆ. ಇದು ಸಂವಿಧಾನದಲ್ಲಿ ಒದಗಿಸಲಾದ ಮೂಲಭೂತ ಹಕ್ಕಿನ ಮೇಲಿನ ನಿರ್ಬಂಧವಾಗಿದೆ. ಉದ್ಯಾನವನದಲ್ಲಿ ಪಾರ್ಟಿ ನಡೆಸಿದರೂ, ಸರ್ಕಾರಿ ಆದೇಶದ ಪ್ರಕಾರ ಅದು ಕಾನೂನುಬಾಹಿರ ಸಭೆಯಾಗುತ್ತದೆ” ಎಂದು ವಕೀಲ ಹಾರನಹಳ್ಳಿ ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದಾರೆ.

ಆರ್‌ಎಸ್‌ಎಸ್ ಸಂಬಂಧಿತ ಚಟುವಟಿಕೆಗಳನ್ನು ನಿರ್ಬಂಧಿಸುವ ಗುರಿಯನ್ನು ಹೊಂದಿದೆ ಎಂದು ಹಲವರು ಭಾವಿಸಿದ್ದ ಈ ಆದೇಶವು ಮುಂದಿನ ವಿಚಾರಣೆಯವರೆಗೆ ತಡೆಹಿಡಿಯಲ್ಪಟ್ಟಿದೆ.

ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಪುನಃಶ್ಚೇತನ ಸೇವಾ ಸಂಸ್ಥೆ ಅಧ್ಯಕ್ಷ ವಿನಾಯಕ ಮತ್ತು ವಿ ಕೇರ್ ಫೌಂಡೇಶನ್ ಅಧ್ಯಕ್ಷ ಗಂಗಾಧರಯ್ಯ, ಧಾರವಾಡದ ರಾಜೀವ ಮಲ್ಹಾರ ಕುಲಕರ್ಣಿ ಹಾಗೂ ಬೆಳಗಾವಿಯ ಉಮಾ ಸತ್ಯಜಿತ್‌ ಚವಾಣ್ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಕ್ರಮವು ಖಾಸಗಿ ಸಂಸ್ಥೆಗಳು ಕಾನೂನುಬದ್ಧ ಚಟುವಟಿಕೆಗಳನ್ನು ನಡೆಸುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದರು.

ಈ ತಿಂಗಳ ಆರಂಭದಲ್ಲಿ ಹೊರಡಿಸಲಾದ, ಈಗ ತಡೆಹಿಡಿಯಲಾದ ಸರ್ಕಾರಿ ಆದೇಶ (ಜಿಒ)ವು ಸಾರ್ವಜನಿಕ ಮತ್ತು ಸರ್ಕಾರಿ ಸ್ವಾಮ್ಯದ ಆಸ್ತಿಗಳನ್ನು ಹೇಗೆ ಬಳಸಬಹುದು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ರೂಪಿಸಿತ್ತು.

ಯಾವುದೇ ಖಾಸಗಿ ಅಥವಾ ಸಾಮಾಜಿಕ ಸಂಸ್ಥೆಗಳು ಸರ್ಕಾರಿ ಶಾಲೆಗಳು, ಕಾಲೇಜು ಮೈದಾನಗಳು ಅಥವಾ ಇತರ ಸರ್ಕಾರಿ ಸ್ಥಳಗಳಲ್ಲಿ ಆಯಾ ಇಲಾಖೆಗಳ ಮುಖ್ಯಸ್ಥರ ಲಿಖಿತ ಅನುಮತಿಯಿಲ್ಲದೆ ಕಾರ್ಯಕ್ರಮಗಳು, ಸಭೆಗಳು ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರದ ಆದೇಶ ಹೇಳಿತ್ತು.

ಕರ್ನಾಟಕ ಭೂ ಕಂದಾಯ ಮತ್ತು ಶಿಕ್ಷಣ ಕಾಯ್ದೆಗಳ ಅಡಿಯಲ್ಲಿ ಯಾವುದೇ ಉಲ್ಲಂಘನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿತ್ತು.

ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸರ್ಕಾರದ ಈ ಕ್ರಮವು ಯಾವುದೇ ನಿರ್ದಿಷ್ಟ ಸಂಸ್ಥೆಯನ್ನು ಗುರಿಯಾಗಿರಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಸಿಎಂ ಸಿದ್ದರಾಮಯ್ಯ ಕೂಡ ಆರ್‌ಎಸ್‌ಎಸ್‌ ಅನ್ನು ಗುರಿಯಾಗಿಸಿ ಆದೇಶ ಹೊರಡಿಸಿಲ್ಲ ಎಂದು ಹೇಳಿದ್ದರು.

ಹೈಕೋರ್ಟ್ ಪೀಠದ ಇಂದಿನ ಆದೇಶದ ಬಗ್ಗೆ ಸಾರ್ವಜನಿಕರು ಗೊಂದಲ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಹಿನ್ನೆಲೆ, ಮುಂದಿನ ಆದೇಶದವರೆಗೆ ಖಾಸಗಿ ಸಂಘ, ಸಂಸ್ಥೆಗಳು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದೇ? ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.  

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...