Homeಮುಖಪುಟಹೈಕೋರ್ಟ್‌ ನೀಡಿದ್ದ ಶಿಕ್ಷೆ ಸುಪ್ರಿಂನಿಂದ ಅಮಾನತು; ಆದರೂ ಜೈಲಿನಲ್ಲೆ ಉಳಿಯಲಿರುವ ಹೋರಾಟಗಾರ ಸವುಕ್ಕು ಶಂಕರ್‌!

ಹೈಕೋರ್ಟ್‌ ನೀಡಿದ್ದ ಶಿಕ್ಷೆ ಸುಪ್ರಿಂನಿಂದ ಅಮಾನತು; ಆದರೂ ಜೈಲಿನಲ್ಲೆ ಉಳಿಯಲಿರುವ ಹೋರಾಟಗಾರ ಸವುಕ್ಕು ಶಂಕರ್‌!

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಮಿಳು ಭಾಷೆಯ ಖ್ಯಾತ ಯೂಟ್ಯೂಬರ್‌‌, ಹೋರಾಟಗಾರ ಸವುಕ್ಕು ಶಂಕರ್‌ಗೆ ಮದ್ರಾಸ್ ಹೈಕೋರ್ಟ್‌ ನೀಡಿದ್ದ ಜೈಲು ಶಿಕ್ಷೆಯನ್ನು ಶುಕ್ರವಾರ ಸುಪ್ರಿಂಕೋರ್ಟ್‌ ಅಮಾನತುಗೊಳಿದೆ. ಅದಾಗಿಯೂ, ಚೆನ್ನೈ ಕೇಂದ್ರ ಅಪರಾಧ ವಿಭಾಗದ ಸೈಬರ್ ಕ್ರೈಂ ವಿಭಾಗ 2020 ಮತ್ತು 2021 ರಲ್ಲಿ ದಾಖಲಾದ ಪ್ರಕರಣಗಳಿಗಾಗಿ ಅವರನ್ನು ಮತ್ತೆ ಬಂಧಿಸಿದೆ. ಗುರುವಾರ ಕಡಲೂರು ಕೇಂದ್ರ ಕಾರಾಗೃಹದಲ್ಲಿ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಶಂಕರ್ ಅವರಿಗೆ ಬಂಧನದ ಸೂಚನೆಯನ್ನು ನೀಡಿದ್ದರು.

ಚೆನ್ನೈ ಸೆಂಟ್ರಲ್ ಕ್ರೈಂ ಬ್ರಾಂಚ್‌ನ ಸೈಬರ್ ಕ್ರೈಂ ವಿಭಾಗವು ಶಂಕರ್ ವಿರುದ್ಧ ನಾಲ್ಕು ಹೊಸ ಪ್ರಕರಣಗಳನ್ನು ದಾಖಲಿಸಿದೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ. ನಾಲ್ಕರಲ್ಲಿ ಮೂರು ಪ್ರಕರಣಗಳು 2020 ರಲ್ಲಿ ದಾಖಲಾಗಿದ್ದು, ಒಂದು ಪ್ರಕರಣವು 2021 ರಲ್ಲಿ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2020 ರಲ್ಲಿ ದಾಖಲಾದ ಒಂದು ಪ್ರಕರಣದಲ್ಲಿ, ಐಪಿಸಿ 504, 505 (1) (ಬಿ) ಮತ್ತು 505(2); ಮತ್ತು ಇತರ ಎರಡು ಪ್ರಕರಣಗಳನ್ನು IPC 153 ಮತ್ತು 505(1)(b) ಅಡಿಯಲ್ಲಿ ದಾಖಲಿಸಲಾಗಿದೆ. 2021 ರ ಪ್ರಕರಣವನ್ನು ಸರ್ಕಾರಿ ರಹಸ್ಯ ಕಾಯಿದೆಯ ಸೆಕ್ಷನ್ 5(1)(ಎ), 5(1)(ಡಿ) ಮತ್ತು 5(2) ಅಡಿಯಲ್ಲಿ ದಾಖಲಿಸಲಾಗಿದೆ.

ಇದನ್ನೂ ಓದಿ: ‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

ಈ ನಾಲ್ಕು ಪ್ರಕರಣಗಳ ಅಡಿಯಲ್ಲಿ ಶಂಕರ್‌ ಅವರನ್ನು 10 ನಿಮಿಷಗಳ ಅವಧಿಯಲ್ಲಿ ಬಂಧಿಸಲಾಗಿದೆ. ಆ ವೇಳೆ ಅವರು ಇನ್ನೂ ಕಡಲೂರು ಕೇಂದ್ರ ಕಾರಾಗೃಹದಲ್ಲಿದ್ದರು. ಗುರುವಾರ ಸಂಜೆ 4.25 ರಿಂದ 4.35 ರ ಸುಮಾರಿಗೆ ಈ ಎಲ್ಲಾ ಪ್ರಕರಣಗಳಲ್ಲಿ ಅವರ ಬಂಧನ ನಡೆದಿರುವ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.

ನ್ಯಾಯಂಗ ನಿಂದನೆ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಶಂಕರ್ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ನಿಗದಿಪಡಿಸುವ ಒಂದು ದಿನದ ಮುನ್ನ ಈ ಬೆಳವಣಿಗೆ ನಡೆದಿದೆ. ಮದ್ರಾಸ್ ಹೈಕೋರ್ಟಿನ ಮಧುರೈ ಪೀಠವು ನ್ಯಾಯಾಂಗ ನಿಂದನೆಯ ಆರೋಪದಲ್ಲಿ ಶಂಕರ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ, ಶಂಕರ್ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು.

“ಇಡೀ ನ್ಯಾಯಾಂಗವು ಭ್ರಷ್ಟಾಚಾರದಿಂದ ಕೂಡಿದೆ” ಎಂದು ಶಂಕರ್‌ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಕ್ಕಾಗಿ, ಅವರ ವಿರುದ್ಧ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದರು.

ಇದನ್ನೂ ಓದಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಕಳೆದ 13 ವರ್ಷಗಳಿಂದ ರಾಜ್ಯದಿಂದ ಭತ್ಯೆ ಪಡೆಯುತ್ತಿದ್ದರೂ ಶಂಕರ್ ಅವರು “ರಾಜ್ಯದ ಎಲ್ಲಾ ಮೂರು ಅಂಗಗಳ ಮೇಲೆ ಕೆಟ್ಟದಾಗಿ ದಾಳಿ ಮಾಡುತ್ತಿದ್ದಾರೆ” ಎಂದು ಹೈಕೋರ್ಟ್ ಹೇಳಿತ್ತು. ಅವರ ಆಕ್ಷೇಪಾರ್ಹ ಸಂದರ್ಶನಗಳು ಮತ್ತು ಲೇಖನಗಳನ್ನು ತೆಗೆದುಹಾಕಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶಂಕರ್ ಅವರು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯದಲ್ಲಿ (ಡಿವಿಎಸಿ) ಕೆಳ ವಿಭಾಗದ ಗುಮಾಸ್ತರಾಗಿ ಸೇವೆಯಲ್ಲಿದ್ದರು. ಅದೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ಅವರ ತಂದೆ ನಿಧನರಾದ ನಂತರ ಮಾನವೀಯ ಆಧಾರದ ಮೇಲೆ ಅವರು ಅಲ್ಲಿ ಕೆಲಸ ಪಡೆದಿದ್ದರು.

2008 ರ ವೇಳೆಗೆ ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಪ್ರಕರಣವನ್ನು ಬಹಿರಂಗಪಡಿಸಿದ ನಂತರ ಶಂಕರ್‌ ಅವರನ್ನು ಬಂಧಿಸಲಾಗಿತ್ತು. ಇದರ ನಂತರ ಇಲಾಖೆಯಿಂದ ಅವರನ್ನು ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

ಬಂಧನದಿಂದ ಬಿಡುಗಡೆಯಾದ ನಂತರ ಅವರು 2009 ರಲ್ಲಿ ಸವುಕ್ಕು ಎಂಬ ವೆಬ್‌ಸೈಟ್ ಅನ್ನು ಪ್ರಾರಂಭಿಸಿ, ಅಲ್ಲಿ ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು, ಪತ್ರಕರ್ತರು, ವಕೀಲರು ಮತ್ತು ಹೈಕೋರ್ಟ್ ನ್ಯಾಯಾಧೀಶರ ಬಗ್ಗೆ ಬರೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...