Homeಮುಖಪುಟಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

- Advertisement -
- Advertisement -

ಪ್ರಯಾಗ್‌ರಾಜ್‌ ನದಿ ನೀರಿನಲ್ಲಿ ಮಾನವ ಹಾಗೂ ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡು ಬರುವ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಮಟ್ಟ ಅಧಿಕವಾಗಿರುವುದರಿಂದ ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.

ಸಿಪಿಸಿಬಿ ಜನವರಿ 12 ಮತ್ತು 13ರಂದು ಗಂಗಾ ನದಿಯ ನೀರಿನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ನಡೆಸಿತ್ತು. ಅದು ತನ್ನ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ (ಎನ್‌ಜಿಟಿ) ಸೋಮವಾರ (ಫೆ.17) ಸಲ್ಲಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ಗಂಗಾ ಹಾಗೂ ಯಮುನಾ ನದಿಗಳಿಗೆ ಒಳ ಚರಂಡಿ ನೀರು ಬಿಡುವುದನ್ನು ತಡೆಯುವ ಕ್ರಮಗಳ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್‌ಜಿಟಿ) ಅಧ್ಯಕ್ಷರಾಗಿರುವ ಪ್ರಕಾಶ್ ಶ್ರೀವಾತ್ಸವ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿದೆ. ನೀರಿನ ಗುಣಮಟ್ಟವನ್ನು ಕಾಪಾಡದೇ ಇರುವುದರ ಕುರಿತು ಸಿಪಿಸಿಬಿ ಫೆಬ್ರವರಿ 3ರಂದು ನೀಡಿದ ವರದಿಯಲ್ಲಿ ಉಲ್ಲೇಖಿಸಿರುವುದನ್ನು ಸಮಿತಿ ಗಮನಿಸಿದೆ. ಪರಿಶೀಲಿಸಲಾದ ಎಲ್ಲಾ ಸ್ಥಳಗಳು ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳಿಂದ ಕಲುಷಿತವಾಗಿರುವುದರಿಂದ ನದಿ ನೀರು ಸ್ನಾನ ಯೋಗ್ಯವಾಗಿಲ್ಲ ಎಂದು ಸಿಪಿಸಿಬಿ ವರದಿ ಹೇಳಿದೆ.

ಪುಣ್ಯ ಸ್ನಾನದ ದಿನಗಳು ಸೇರಿದಂತೆ ಮಹಾಕುಂಭ ಮೇಳದ ಸಂದರ್ಭ ದೊಡ್ಡ ಸಂಖ್ಯೆಯ ಜನರು ನದಿಯಲ್ಲಿ ಸ್ನಾನ ಮಾಡಿರುವುದು ನೀರಿನಲ್ಲಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಸಂಖ್ಯೆಯಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ನೀರಿನ ಗುಣಮಟ್ಟ ಸುಧಾರಿಸಲು ‘ಕ್ರಮ ಕೈಗೊಂಡ ವರದಿ’ (ಎಟಿಆರ್‌) ಸಲ್ಲಿಸಲು ವಿಫಲವಾದ ಕಾರಣ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (ಯುಪಿಪಿಸಿಬಿ) ಅಧಿಕಾರಿಗಳಿಗೆ ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗುವಂತೆ ಎನ್‌ಜಿಟಿ ಸಮನ್ಸ್ ಜಾರಿ ಮಾಡಿದೆ.

ಎನ್‌ಜಿಟಿ ಪ್ರಧಾನ ಪೀಠವು ಡಿಸೆಂಬರ್ 24,2024 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಮತ್ತು ಯುಪಿಪಿಸಿಬಿ ಎರಡಕ್ಕೂ ನೀರಿನ ಮಾದರಿಗಳನ್ನು ತೆಗೆದುಕೊಂಡು, ಫಲಿತಾಂಶವನ್ನು ತಮ್ಮ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲು ಮತ್ತು ಜನವರಿ 31 ಮತ್ತು ಫೆಬ್ರವರಿ 28ರಂದು ಎನ್‌ಜಿಟಿ ರಿಜಿಸ್ಟ್ರಾರ್ ಜನರಲ್‌ಗೆ ವರದಿಯನ್ನು ಕಳುಹಿಸಲು ನಿರ್ದೇಶಿಸಿತ್ತು.

“ಸಮಗ್ರ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದ ನ್ಯಾಯಮಂಡಳಿಯ ಆದೇಶವನ್ನು ಯುಪಿಪಿಸಿಬಿ ಪಾಲಿಸಿಲ್ಲ” ಎಂದು ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ, ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಸುಧೀರ್ ಅಗರ್ವಾಲ್ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೆಲ್ ಅವರನ್ನು ಒಳಗೊಂಡ ಎನ್‌ಜಿಟಿ ಪ್ರಧಾನ ಪೀಠದ ತಿಳಿಸಿದೆ.

“ಯುಪಿಪಿಸಿಬಿ ಸದಸ್ಯ ಕಾರ್ಯದರ್ಶಿ ಮತ್ತು ಪ್ರಯಾಗ್‌ರಾಜ್‌ನಲ್ಲಿ ಗಂಗಾ ನದಿಯಲ್ಲಿ ನೀರಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಹೊತ್ತಿರುವ ರಾಜ್ಯ ಪ್ರಾಧಿಕಾರಕ್ಕೆ ಫೆಬ್ರವರಿ 19 ರಂದು ಮುಂದಿನ ವಿಚಾರಣೆಯ ದಿನಾಂಕದಂದು ವರ್ಚುವಲ್ ಆಗಿ ಹಾಜರಾಗಲು ನಿರ್ದೇಶಿಸಲಾಗಿದೆ” ಎಂದು ಎನ್‌ಜಿಟಿ ಪ್ರಧಾನ ಪೀಠದ ಆದೇಶ ಹೇಳಿದೆ.

ಈ ಹಿಂದೆ ನಿರ್ದೇಶಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತ ವಿಸ್ತೃತ ವರದಿ ಸಲ್ಲಿಸಲು ಯುಪಿಪಿಸಿಬಿ ವಿಫಲವಾಗಿರುವ ಕುರಿತು ಎನ್‌ಜಿಟಿ ಸಮಿತಿ ಗಮನಿಸಿದೆ. ವರದಿ ಬದಲು ಅದು ನೀರಿನ ಪರೀಕ್ಷೆಯ ಫಲಿತಾಂಶದೊಂದಿಗೆ ಪತ್ರವನ್ನು ಸಲ್ಲಿಸಿದೆ ಎಂದು ಎನ್‌ಜಿಟಿ ಸಮಿತಿ ಹೇಳಿದೆ.

ಸಿಪಿಸಿಬಿ ವರದಿಯ ಪ್ರಕಾರ, ಜನವರಿ 12, 13, 15, 19, 20 ಮತ್ತು 24 ರಂದು ಗಂಗಾ ಮತ್ತು ಯಮುನಾ ನದಿಯ ವಿವಿಧ ಸ್ಥಳಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅದರ ವರದಿಯು ಜಿಯೋಸಿಂಥೆಟಿಕ್ ಡೀವಾಟರಿಂಗ್ ಟ್ಯೂಬ್‌ಗಳಲ್ಲಿನ ಅನುಸರಣೆಯ ಕೊರತೆಯನ್ನು ಸಹ ಎತ್ತಿ ತೋರಿಸಿದೆ.

ಪ್ರಮುಖ ಚರಂಡಿಗಳ ಒಳಹರಿವು ಮತ್ತು ಹೊರಹರಿವು ಬಿಂದುಗಳಲ್ಲಿ ಹರಿವಿನ ಮೀಟರ್‌ಗಳು ಇಲ್ಲದಿರುವುದನ್ನು ವರದಿಯು ವಿವರಿಸಿದೆ. ಪ್ರಯಾಗ್‌ರಾಜ್‌ನಲ್ಲಿ ಒಟ್ಟು 340 ಎಂಎಲ್‌ಡಿ ಸಂಸ್ಕರಣಾ ಸಾಮರ್ಥ್ಯವಿರುವ 10 ಕಾರ್ಯಾಚರಣಾ ಎಸ್‌ಟಿಪಿಗಳಿವೆ ಎಂದು ವರದಿ ತಿಳಿಸಿದೆ. ಏಳು ಎಸ್‌ಟಿಪಿಗಳು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಗಂಗಾ ನದಿಗೆ ಮತ್ತು ಮೂರು ಯಮುನಾ ನದಿಗೆ ಬಿಡುತ್ತಿವೆ ಎಂದಿದೆ.

ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ವರದಿ ಬರುವ ಮುನ್ನವೇ ಲಕ್ಷಾಂತರ ಜನರು ಮಹಾಕುಂಭಮೇಳದ ಪ್ರಯುಕ್ತ ಪವಿತ್ರ ಸ್ನಾನ ಮಾಡಿದ್ದಾರೆ. ಕಲುಷಿತ ನೀರಿನಿಂದ ಅವರಿಗೆ ಚರ್ಮ ರೋಗ ಬರಬಹುದು ಎಂದು ತಜ್ಞರನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಕೊಳದ ಮೇಲೆ ಅಕ್ರಮ ಮದರಸಾ ನಿರ್ಮಾಣ ಆರೋಪ: ಭಾರೀ ಪೊಲೀಸ್ ಬಂದೋಬಸ್ತಿನೊಂದಿಗೆ ಸಂಪೂರ್ಣ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...