Homeಕರ್ನಾಟಕಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

ಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

- Advertisement -
- Advertisement -

ಬೆಳ್ತಂಗಡಿಯಲ್ಲಿ 2012ರಲ್ಲಿ ನಡೆದಿದ್ದದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುಲಾಸೆಗೊಂಡಿದ್ದ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಂತೋಷ್‌ ರಾವ್‌ನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೋಟಿಸ್‌ ನೀಡಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ 2023ರ ಜೂನ್‌ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್‌ ರಾವ್‌ ಅವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ವಿಜಯಕುಮಾರ್‌ ಎ.ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ಈ ಕುರಿತು ವಿಚಾರಣೆ ನಡೆಸುತ್ತಿದ್ದು, ಸಂತೋಷ್‌ ರಾವ್‌ಗೆ ನೊಟೀಸ್ ನೀಡಿದೆ.

ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅಕ್ಟೋಬರ್ 9, 2012ರಂದು ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿದ್ದಳು, ಮರು ದಿನ ರಾತ್ರಿ ಮಣ್ಣ ಸಂಕ ಬಳಿಯಲ್ಲಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು. ರಾಜ್ಯದಲ್ಲಿ ಭಾರೀ ಸಂಚಲನವನ್ನು ಮೂಡಿಸಿದ ಈ ಪ್ರಕರಣವನ್ನು ಮೊದಲು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್‌ 6ರಂದು ಪ್ರಕರಣದ ಬಗ್ಗೆ ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಸಂತೋಷ್ ರಾವ್‌ಗೆ  ಬಾಹುಬಲಿ ಬೆಟ್ಟದ ಬಳಿಯಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಕೃತ್ಯ ನಡೆದು 11 ವರ್ಷಗಳ ಬಳಿಕ ತೀರ್ಪು ಪ್ರಕಟಗೊಂಡಿತ್ತು. ಆರೋಪಿ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿಬಿ ಸಂತೋಷ್‌ ಹೇಳಿದ್ದರು.

ಪ್ರಕರಣದಲ್ಲಿ ಸರಿಯಾದ ತನಿಖೆ ನಡೆದಿಲ್ಲ. ಆದ್ದರಿಂದ ಇಲ್ಲಿ ಸಾಕ್ಷ್ಯಾಧಾರದ ಕೊರತೆ ಎದ್ದು ಕಾಣುತ್ತಿದೆ. ಅತ್ಯಾಚಾರ, ಕೊಲೆ ಆಗಿರುವ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಿಬಿ ಸಂತೋಷ್‌ ತೀರ್ಪು ನೀಡಿದ್ದರು. ಆ ಬಳಿಕ ಸೌಜನ್ಯ ನಿಗೂಢ ಕೊಲೆ ಪ್ರಕರಣದಲ್ಲಿ ಆರೋಪಿಗಳು ಯಾರು ಎನ್ನುವುದು ನಿಗೂಢವಾಗಿಯೇ ಉಳಿದಿದೆ.

2023ರ ಜುಲೈ 16ರಂದು ಈ ಕುರಿತು ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯವು, ತನ್ನ ತೀರ್ಪಿನ ವಿರುದ್ಧ 60 ದಿನಗಳ ಒಳಗಾಗಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿತ್ತು. ಆದರೆ, ತೀರ್ಪು ಬಂದು ಈಗಾಗಲೇ 120 ದಿನಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಸಂತೋಷ್ ರಾವ್ ಅವರೇ ನಿಜವಾದ ಆರೋಪಿ ಎಂದು ಮೇಲ್ಮನವಿಯಲ್ಲಿ ಸಿಬಿಐ ವಾದಿಸಿದೆ.

ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಸೌಜನ್ಯ ಪರ ಹೋರಾಟಗಳು ಭುಗಿಲೆದ್ದಿತ್ತು. ಸಂತೋಷ್ ರಾವ್ ನಿರಪರಾಧಿ ಎಂಬುದು ಮೊದಲೇ ಖಾತ್ರಿಯಾಗಿತ್ತು. ಆದರೆ, ನಿಜವಾದ ಅಪರಾಧಿಗಳು ಧರ್ಮಸ್ಥಳದಲ್ಲಿಯೇ ಇದ್ದಾರೆ, ಅವರನ್ನು ಬಂಧಿಸಬೇಕು ಎಂದು ಒತ್ತಾಯಗಳು ಕೇಳಿ ಬಂದಿದ್ದವು. ಕರಾವಳಿಯಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿತ್ತು. ಈ ನಡುವೆ ಪ್ರಕರಣವನ್ನು ಮರು ತನಿಖೆ ನಡೆಸಲು ಸೂಚನೆ ನೀಡಬೇಕೆಂದು ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಇದನ್ನು ಓದಿ: ಅಡ್ವಾಣಿ: ರಥಯಾತ್ರೆಯಿಂದ ಭಾರತ ರತ್ನದವರೆಗೆ; ಹಿಂಸಾಚಾರ, ಧ್ರುವೀಕರಣದಿಂದ ಮುನ್ನಡೆದ ರಾಜಕೀಯ ಪಯಣ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...