Homeಮುಖಪುಟಕೇಂದ್ರ ಸಚಿವ ರಾಣೆ ಒಡೆತನದ ಅಕ್ರಮ ಕಟ್ಟಡ ತೆರವಿಗೆ ಹೈಕೋರ್ಟ್ ಸೂಚನೆ

ಕೇಂದ್ರ ಸಚಿವ ರಾಣೆ ಒಡೆತನದ ಅಕ್ರಮ ಕಟ್ಟಡ ತೆರವಿಗೆ ಹೈಕೋರ್ಟ್ ಸೂಚನೆ

- Advertisement -
- Advertisement -

ಮುಂಬೈ: ಇಲ್ಲಿನ ಜುಹು ಪ್ರದೇಶದಲ್ಲಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಬಂಗಲೆಯಲ್ಲಿ ಆಗಿರುವ ಅನಧಿಕೃತ ನಿರ್ಮಾಣವನ್ನು ತೆರವು ಮಾಡುವಂತೆ ಮುಂಬೈ ಮಹಾನಗರ ಪಾಲಿಕೆಗೆ ಬಾಂಬೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಈ ಬಂಗಲೆಯಲ್ಲಿ ಫ್ಲೋರ್‌ ಸ್ಪೇಸ್‌ ಇಂಡೆಕ್ಸ್‌‌ (ಎಫ್‌ಎಸ್‌ಐ) ಮತ್ತು ಕರಾವಳಿ ನಿಯಂತ್ರಣ ವಲಯ (ಸಿಆರ್‌ಜೆಡ್) ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಆರ್.ಡಿ.ಧನುಕಾ ಮತ್ತು ಕಮಲ್ ಖಾತಾ ಅವರ ವಿಭಾಗೀಯ ಪೀಠವು, “ಅನಧಿಕೃತ ಕಟ್ಟಡವನ್ನು ಕಾನೂನುಬದ್ಧಗೊಳಿಸುವಂತೆ ರಾಣೆ ಕುಟುಂಬ ನಡೆಸುತ್ತಿರುವ ಕಂಪನಿಯು ಸಲ್ಲಿಸಿದ ಎರಡನೇ ಅರ್ಜಿಯನ್ನು ಪಾಲಿಕೆ ಪರಿಗಣಿಸಲು ಅನುಮತಿಸಲಾಗುವುದಿಲ್ಲ” ಎಂದು ತಿಳಿಸಿದೆ.

ಎರಡು ವಾರಗಳ ಅವಧಿಯಲ್ಲಿ ಅನಧಿಕೃತ ಭಾಗಗಳನ್ನು ಕೆಡವಬೇಕು, ಒಂದು ವಾರದ ನಂತರ ನ್ಯಾಯಾಲಯಕ್ಕೆ ಅನುಸರಣೆ ವರದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಲಯವು ಪಾಲಿಕೆಗೆ ನಿರ್ದೇಶನ ನೀಡಿದೆ.

ಪೀಠವು ರಾಣೆಗೆ ₹ 10 ಲಕ್ಷ ದಂಡವನ್ನು ವಿಧಿಸಲಾಗಿದ್ದು, ಎರಡು ವಾರಗಳಲ್ಲಿ ಮಹಾರಾಷ್ಟ್ರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮೊತ್ತವನ್ನು ಠೇವಣಿ ಮಾಡುವಂತೆ ಸೂಚಿಸಿದೆ.

ನಾರಾಯಣ ರಾಣೆ ಪರ ವಕೀಲ ಶಾರ್ದೂಲ್ ಸಿಂಗ್ ಅವರು, “ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಆರು ವಾರಗಳ ಕಾಲ ತನ್ನ ಆದೇಶಕ್ಕೆ ತಡೆ ನೀಡಬೇಕು” ಎಂದು ಕೋರಿದ್ದಾರೆ. ಆದರೆ, ಪೀಠ ಅದನ್ನು ತಿರಸ್ಕರಿಸಿದೆ.

ಇದನ್ನೂ ಓದಿರಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ರಾಣೆ ಅವರ ಕುಟುಂಬದ ಒಡೆತನದ ಕಂಪನಿಯಾದ ಕಾಲ್ಕಾ ರಿಯಲ್ ಎಸ್ಟೇಟ್ಸ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ.

ಕಟ್ಟಡವನ್ನು ಸಕ್ರಮಗೊಳಿಸುವಂತೆ ಈ ವರ್ಷದ ಜೂನ್‌ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪಾಲಿಕೆ ತಿರಸ್ಕರಿಸಿತ್ತು. ಕಟ್ಟಡ ನಿರ್ಮಾಣದಲ್ಲಿ ಕಾನೂನು ಉಲ್ಲಂಘನೆಯಾಗಿವೆ ಎಂದು ತಿಳಿಸಿತ್ತು.

ಕಂಪನಿಯು ಜುಲೈನಲ್ಲಿ ಎರಡನೇ ಅರ್ಜಿಯನ್ನು ಸಲ್ಲಿಸಿತು, ತಾನು ಹಿಂದೆ ಬಯಸಿದ್ದಕ್ಕಿಂತ ಚಿಕ್ಕ ಭಾಗವನ್ನು ಕ್ರಮಬದ್ಧಗೊಳಿಸುವಂತೆ ಕೋರಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...