ಬೆಂಗಳೂರು:ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ನಟ ಉಪೇಂದ್ರ ವಿರುದ್ಧ ದಾಖಲಾದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ.
ನಟ ಉಪೇಂದ್ರ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಎಫ್ ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.ಮಧ್ಯಂತರ ತಡೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ನಟ ಉಪೇಂದ್ರ ವಿರುದ್ಧ ದಾಖಲಾದ ಅಟ್ರಾಸಿಟಿ ಕೇಸ್ ಗೆ ತಡೆ ನೀಡಿದೆ.
ನಟ ಉಪೇಂದ್ರ ಲೈವ್ ವಿಡಿಯೋದಲ್ಲಿ ಮಾತನಾಡುತ್ತಾ, ‘ಊರು ಎಂದ ಮೇಲೆ ಹೊಲಗೇರಿ ಇರುತ್ತದೆ’ ಎಂಬ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ವಿರುದ್ಧ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿತ್ತು.
ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂಧನ್ ಅವರು ಉಪೇಂದ್ರ ವಿರುದ್ಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ಬಳಿಕ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಹರೀಶ್ ಎಂಬವರು ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲಿಸಿದ್ದರು.
ಇದನ್ನು ಓದಿ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು: ಸಿಎಂ ಸಿದ್ದರಾಮಯ್ಯ


