Homeಕರ್ನಾಟಕಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ತಡೆಗೆ ಮಾರ್ಗಸೂಚಿ | ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ತಡೆಗೆ ಮಾರ್ಗಸೂಚಿ | ಸರ್ಕಾರ ನಿರ್ಧಾರ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆಯಂತಹ ದುಷ್ಕೃತ್ಯಗಳನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರವು SOP (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್)ಗಳನ್ನು ಕರಡು ಮಾಡಲು ಸಮಿತಿ ರಚನೆಗೆ ನಿರ್ಧರಿಸಿದೆ ಎಂದು ವರದಿಯಾಗಿದೆ. ರಾಜ್ಯದಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷೆಯ ವೇಳೆ ನಕಲು ಮಾಡುವ ದುಷ್ಕೃತ್ಯಕ್ಕೆ ಸಂಬಂಧಿಸಿ ಆತ್ಮಹತ್ಯೆ ಘಟನೆಗಳು ನಡೆದ ಕಾರಣಕ್ಕೆ ಸರ್ಕಾರ ಈ ನಿರ್ಧಾಕ್ಕೆ ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷವಾಗಿ ಪಿಇಎಸ್ ವಿಶ್ವವಿದ್ಯಾಲಯದ 19 ವರ್ಷದ ಬಿ ಟೆಕ್ ವಿದ್ಯಾರ್ಥಿ, ಆದಿತ್ಯ ಪ್ರಭು ಅವರ ಸಾವಿನ ಹಿನ್ನಲೆ ಈ ನಿರ್ಧಾರ ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜುಲೈ 2023 ರಲ್ಲಿ ನಡೆದ ಸೆಮಿಸ್ಟರ್ ಪರೀಕ್ಷೆಯ ವೇಳೆ ಆದಿತ್ಯ ಪ್ರಭು “ನಕಲು” ಮಾಡುವ ವೇಳೆ ಸಿಕ್ಕಿಬಿದ್ದಿದ್ದು, ನಂತರ ಕಾಲೇಜಿನ ಕಟ್ಟಡದಿಂದ ಹಾರಿ ಜೀವ ಕಳೆದುಕೊಂಡಿದ್ದರು. ಅವರ ಪೋಷಕರು ಕಾಲೇಜಿನ ಮ್ಯಾನೇಜ್‌ಮೆಂಟ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು, ವಿದ್ಯಾರ್ಥಿಗೆ ಮಾನಸಿಕ ಕಿರುಕುಳ ನೀಡಲಾಗಿತ್ತು ಎಂಬ ಆರೋಪವನ್ನು ಮಾಡಿದ್ದರು.

ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, SOP ಕರಡು ಸಮಿತಿಯಲ್ಲಿ ಮನಶ್ಶಾಸ್ತ್ರಜ್ಞರು ಮತ್ತು ಉಪಕುಲಪತಿಗಳು ಇರುತ್ತಾರೆ. ಅವರು ಖಾಸಗಿ ಸಂಸ್ಥೆಗಳು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವ ಎಸ್‌ಒಪಿಗಳ ಕರಡನ್ನು ರಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

“ಎಸ್‌ಒಪಿಗಳನ್ನು ಮಾನವೀಯತೆಯ ಆಧಾರದ ಮೇಲೆ ರಚಿಸಲಾಗುವುದು ಮತ್ತು ವಿದ್ಯಾರ್ಥಿಗಳು ದುಷ್ಕೃತ್ಯದ ಸಮಯದಲ್ಲಿ ಸಿಕ್ಕಿಬಿದ್ದಾಗ ಅವರೊಂದಿಗೆ ಹೇಗೆ ವ್ಯವಹರಿಸಬೇಕು ಎಂಬುದರ ಕುರಿತು ನಿರ್ವಹಣೆಗೆ ಮಾರ್ಗದರ್ಶನ ನೀಡುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಆತ್ಮಹತ್ಯೆ ಪ್ರವೃತ್ತಿಯನ್ನು ಹೊಂದಿರುವುದಿಲ್ಲ. ನಕಲು ನಡೆದಿದೆಯೇ ಎಂಬುದನ್ನು ಮೊದಲು ತನಿಖೆ ಮಾಡುವುದು ಮೂಲಭೂತ ವಿಷಯ. ತನಿಖೆ ವೇಳೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು” ಎಂದು ಸುಧಾಕರ್ ಹೇಳಿದ್ದಾರೆ.

“ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ SOP ಗಳನ್ನು ರಚಿಸಲಾಗುವುದು. ಅವರಿಗೆ ಬೆದರಿಕೆ ಇರುವಂತೆ ಇರಬಾರದು. ಇದು ವಿದ್ಯಾರ್ಥಿಗಳಲ್ಲಿ ನೆಮ್ಮದಿಯ ಭಾವನೆ ಮೂಡಿಸಬೇಕು” ಎಂದು ಸಚಿವ ತಿಳಿಸಿದರು.

ಆದಿತ್ಯ ಪ್ರಭು ಅವರ ಸಾವಿನ ನಂತರ ರಾಜ್ಯ ಸರ್ಕಾರ ರಚಿಸಿದ್ದ 11 ಸದಸ್ಯರ ತಜ್ಞರ ಸಮಿತಿಯ ವರದಿಯನ್ನು ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತು ಪರಿಗಣಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಜಯಕರ್ ಎಸ್.ಎಂ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ವರದಿಯು ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಸರಣಿ ಬದಲಾವಣೆಗಳನ್ನು ಶಿಫಾರಸು ಮಾಡಿದೆ.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...