Homeಕರ್ನಾಟಕಯುಜಿಸಿ ಕರಡು ನಿಯಮಕ್ಕೆ ವಿರೋಧ : ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ 15 ಅಂಶಗಳ ನಿರ್ಣಯ

ಯುಜಿಸಿ ಕರಡು ನಿಯಮಕ್ಕೆ ವಿರೋಧ : ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ 15 ಅಂಶಗಳ ನಿರ್ಣಯ

- Advertisement -
- Advertisement -

ಕರ್ನಾಟಕ ಸರ್ಕಾರ ಬುಧವಾರ (ಫೆ.5) ಆಯೋಜಿಸಿದ್ದ ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ ಕರಡು ನಿಯಮಗಳನ್ನು ಹಿಂಪಡೆಯುವಂತೆ ಒತ್ತಾಯಿಸುವ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಉನ್ನತ ಶಿಕ್ಷಣದ ಮೇಲೆ ರಾಜ್ಯಗಳು ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಆರು ರಾಜ್ಯ ಸರ್ಕಾರಗಳು ಒಗ್ಗಟ್ಟು ಪ್ರದರ್ಶಿಸಿದ್ದು, ಕರಡು ನಿಯಮಗಳನ್ನು ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡಿವೆ.

ಸಮಾವೇಶದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್, “ರಾಜ್ಯಗಳು ಯುಜಿಸಿಯ ನಿರ್ಧಾರಕ್ಕಾಗಿ ಕಾಯುತ್ತಿವೆ. ಯುಜಿಸಿಯಿಂದ ಪ್ರತಿಕ್ರಿಯೆ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಿವೆ ಎಂದಿದ್ದಾರೆ.

“ಯುಜಿಸಿ ಪ್ರಕಟಿಸಿದ ಕರಡು ನಿಯಮಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಈ ಸಂಬಂಧ ರಾಜ್ಯಗಳೊಂದಿಗೆ ಸಭೆ ನಡೆಸಬೇಕು” ಎಂದು ಹೇಳಿದ್ದಾರೆ.

“ಒಕ್ಕೂಟ ವ್ಯವಸ್ಥೆಯನ್ನು ಕಾಪಾಡುವಲ್ಲಿ ಇದು ನಮ್ಮ ಮೊದಲ ಹೆಜ್ಜೆ. ಕೇಂದ್ರದ ವಿರುದ್ದದ ಹೋರಾಟದ ಆರಂಭ. ನಮ್ಮ ಮುಂದಿನ ಹೆಜ್ಜೆ ಯುಜಿಸಿಯ ನಿರ್ಧಾರವನ್ನು ಅವಲಂಬಿಸಿರುತ್ತದೆ. ಯುಜಿಸಿ ನಿಯಂತ್ರಕ ಸಂಸ್ಥೆಯಾಗಿರಬೇಕೇ ಹೊರತು, ಅದು ರಾಜ್ಯಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ”

ಸಮಾವೇಶದಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಕೇರಳ, ಜಾರ್ಖಂಡ್, ಹಿಮಾಚಲ ಪ್ರದೇಶ ಸೇರಿದಂತೆ ಆರು ರಾಜ್ಯಗಳ ಉನ್ನತ ಶಿಕ್ಷಣ ಸಚಿವರು ಉಪಸ್ಥಿತರಿದ್ದರು. ಆನ್‌ಲೈನ್‌ ವೇದಿಕೆ ಮೂಲಕ ಹಾಜರಾಗಿದ್ದ ಮಹಾರಾಷ್ಟ್ರ ಪ್ರತಿನಿಧಿಯೊಬ್ಬರು ತಾಂತ್ರಿಕ ಸಮಸ್ಯೆಗಳಿಂದಾಗಿ ಸಂಪೂರ್ಣ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.

ತುರ್ತು ಸಭೆಗಳ ಕಾರಣಕ್ಕೆ ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಸಚಿವರು ತಿಳಿಸಿದ್ದರು. ಸಮಾವೇಶಕ್ಕೆ ಹಾಜರಾಗಬೇಕಿದ್ದ ರಾಜ್ಯಸಭಾ ಸದಸ್ಯರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಜೈರಾಮ್ ರಮೇಶ್ ತಮ್ಮ ಟಿಪ್ಪಣಿಗಳನ್ನು ಕಳುಹಿಸಿದ್ದರು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಕೆಲವು ಪಕ್ಷಗಳು ಕೂಡ ಯುಜಿಸಿ ಕರಡು ನಿಯಮಗಳಿಗೆ ತಮ್ಮ ಆಕ್ಷೇಪಣೆಯನ್ನು ವ್ಯಕ್ತಪಡಿಸಿವೆ. ಟಿಡಿಪಿ, ಜೆಡಿಯು, ಎಲ್‌ಜೆಪಿ ಕರಡಿನ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ನೀಡಿವೆ. ಪಶ್ಚಿಮ ಬಂಗಾಳ ಈ ಕುರಿತು ಪರಿಶೀಲನೆಗೆ ತಜ್ಞರ ಸಮಿತಿಯನ್ನು ರಚಿಸಿದೆ.

“ಯುಜಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವಾಲಯ ಕರಡು ನಿಯಮಗಳನ್ನು ಪುನರ್ವಿಮರ್ಶೆ ನಡೆಸಿ ಎಲ್ಲಾ ರಾಜ್ಯಗಳನ್ನು ವಿವರವಾದ ಚರ್ಚೆಗೆ ಆಹ್ವಾನಿಸುತ್ತದೆ ಎಂಬ ವಿಶ್ವಾಸ ನಮಗಿದೆ” ಎಂದು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ತನ್ನ ಕಾರ್ಯಸೂಚಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಯುಜಿಸಿಯ ಕರಡು ನಿಯಮಗಳು ಶಿಕ್ಷಣ ವ್ಯವಸ್ಥೆಯಲ್ಲಿ ಸಿದ್ಧಾಂತವನ್ನು ಹೇರುವುದರ ಭಾಗವಾಗಿದೆ ಎಂದು ಸುಧಾಕರ್ ಮತ್ತು ಇತರ ರಾಜ್ಯಗಳ ಸಚಿವರು ದೂರಿದ್ದಾರೆ.

ಫೆಬ್ರವರಿ 20ರಂದು ಕೇರಳ ರಾಜ್ಯವು ಇದೇ ರೀತಿಯ ಸಮಾವೇಶವನ್ನು ಆಯೋಜಿಸಲಿದ್ದು, ರಾಜ್ಯಗಳು ಅಲ್ಲಿ ಮುಂದಿನ ಹೆಜ್ಜೆಯನ್ನು ನಿರ್ಧರಿಸುವ ಸಾಧ್ಯತೆಯಿದೆ.

ಸಮಾವೇಶದಲ್ಲಿ ಕೈಗೊಂಡ ನಿರ್ಣಯದ ಪ್ರಮುಖ ಅಂಶಗಳು :

  • ರಾಜ್ಯ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕದಲ್ಲಿ ರಾಜ್ಯಗಳಿಗೆ ಪ್ರಮುಖ ಪಾತ್ರ ನೀಡಬೇಕು.
  • ಕುಲಪತಿ ಆಯ್ಕೆಗೆ ಸಮಿತಿ ರಚಿಸುವ ಅಧಿಕಾರ ಈಗ ಇರುವಂತೆಯೇ ಮುಂದುವರಿಯಬೇಕು
  • ಶೈಕ್ಷಣಿ ವಲಯದ ಹೊರಗಿನವರನ್ನು ಕುಲಪತಿಗಳಾಗಿ ನೇಮಿಸುವುದಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಹಿಂತೆಗೆದುಕೊಳ್ಳಬೇಕು
  • ಈಗಿರುವ ಶಿಕ್ಷಕರ ಕಾರ್ಯಕ್ಷಮತೆ ಮೌಲ್ಯಮಾಪನ ಮತ್ತು ಶೈಕ್ಷಣಿಕ ಸೂಚಕ (ಎಪಿಐ) ವ್ಯವಸ್ಥೆ ತೆಗೆದುಹಾಕಬಾರದು
  • ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಉಪ ನಿಮಯಗಳನ್ನು ಮರು
    ಪರಿಶೀಲಿಸಬೇಕು
  • ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕಡೆಗಣಿಸಿ, ಖಾಸಗಿ ಸಂಸ್ಥೆಗಳಿಗೆ ಉತ್ತೇಜನ ನೀಡುವ ನಿಯಮಗಳನ್ನು ಕೈಬಿಡಬೇಕು
  • ಯುಜಿಸಿ ಮಾರ್ಗಸೂಚಿ ಅನುಸರಿಸದಿದ್ದರೆ ಕೈಗೊಳ್ಳುವ ಕ್ರಮಗಳು ಪ್ರಜಾಸತ್ತಾತ್ಮಕವಾಗಿ ಇರಬೇಕು
  • ಕುಲಪತಿಗಳ ನೇಮಕಾತಿಯ ಅರ್ಹತೆ, ಅವಧಿಯ ಬಗ್ಗೆ ಗಂಭೀರವಾದ ಮರುಪರಿಶೀಲನೆಯ ಅಗತ್ಯವಿದೆ.
  • ಮೂಲ ಪದವಿಪೂರ್ವ ಕೋರ್ಸ್‌ಗೆ ಪ್ರವೇಶ ಪರೀಕ್ಷೆಯನ್ನು ಕಡ್ಡಾಯಗೊಳಿಸುವುದು ಜಿಇಆರ್ ಹೆಚ್ಚಿಸಲು ದೊಡ್ಡ ಅಡಚಣೆಯಾಗಿದೆ.

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...