Homeಮುಖಪುಟಅಕ್ಟೋಬರ್‌ ತಿಂಗಳಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹ: ರಾಜ್ಯಗಳ ಪಾಲೆಷ್ಟು?

ಅಕ್ಟೋಬರ್‌ ತಿಂಗಳಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹ: ರಾಜ್ಯಗಳ ಪಾಲೆಷ್ಟು?

- Advertisement -
- Advertisement -

ಅಕ್ಟೋಬರ್ 2021ರ ತಿಂಗಳ ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆದಾಯ ಸಂಗ್ರಹವು ₹130 ಲಕ್ಷ ಕೋಟಿಗಿಂತ ಹೆಚ್ಚಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಸೋಮವಾರ ಪ್ರಕಟಿಸಿದೆ. ಇದು ಇದುವರೆಗೆ ಸಂಗ್ರಹಿಸಿದ ಎರಡನೇ ಅತಿ ಹೆಚ್ಚು ಜಿಎಸ್‌ಟಿ ಆದಾಯವಾಗಿದೆ.

“ಅಕ್ಟೋಬರ್ 2021ರಲ್ಲಿ ಒಟ್ಟು ಜಿಎಸ್‌ಟಿ ಆದಾಯವು ₹1,30,127 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಸಿಜಿಎಸ್‌ಟಿ (ಕೇಂದ್ರ ಸರಕು ಮತ್ತು ಸೇವಾ ತೆರಿಗೆ) ₹23,861 ಕೋಟಿ ರೂ., ಎಸ್‌ಜಿಎಸ್‌ಟಿ (ರಾಜ್ಯ ಸರಕು ಮತ್ತು ಸೇವಾ ತೆರಿಗೆ) ₹30,421 ಕೋಟಿ ರೂ. ಮತ್ತು ಐಜಿಎಸ್‌ಟಿ (ಸಮಗ್ರ ಸರಕು ಮತ್ತು ಸೇವಾ ತೆರಿಗೆ) ₹67,361 ಕೋಟಿ ಮತ್ತು ಸೆಸ್ ₹8484 ಕೋಟಿ ರೂ. ಆಗಿದೆ” ಎಂದು ಸರ್ಕಾರ ತಿಳಿಸಿದೆ.

“ಸರ್ಕಾರವು ಐಜಿಎಸ್‌ಟಿಯಿಂದ ಸಿಜಿಎಸ್‌ಟಿಗೆ ₹27,310 ಕೋಟಿ ರೂ., ಎಸ್‌ಜಿಎಸ್‌ಟಿಗೆ ₹ 22,394 ಕೋಟಿ ರೂ.ಗಳನ್ನು ನಿಯಮಿತ ಪಾವತಿ ಮಾಡಲಿದೆ. ಅಕ್ಟೋಬರ್ 2021ರ ನಿಯಮಿತ ಪಾವತಿಯ ನಂತರ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯವು ಸಿಜಿಎಸ್‌ಟಿಗೆ ₹ 51,171 ಕೋಟಿ ರೂ. ಮತ್ತು ಎಸ್‌ಜಿಎಸ್‌ಟಿಗೆ ₹ 52,815 ಕೋಟಿ ರೂ. ಆಗಿದೆ” ಎಂದು ಹಣಕಾಸು ಸಚಿವಾಲಯ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಅಕ್ಟೋಬರ್ 2021ರ ಜಿಎಸ್‌ಟಿ ಆದಾಯವು ಕಳೆದ ವರ್ಷಕ್ಕಿಂತ ಶೇ.24ರಷ್ಟು ಹೆಚ್ಚಾಗಿದೆ. 2019-20ಕ್ಕೆ ಹೋಲಿಸಿದರೆ ಶೇ.36ಕ್ಕಿಂತ ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. “ಈ ತಿಂಗಳಲ್ಲಿ (ಅಕ್ಟೋಬರ್ 2021), ಸರಕುಗಳ ಆಮದು ಆದಾಯವು ಶೇಕಡಾ 39ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ವಹಿವಾಟಿನಿಂದ ಬಂದ ಆದಾಯವು ಕಳೆದ ವರ್ಷದ ಇದೇ ತಿಂಗಳಿನಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ ಶೇ.19 ರಷ್ಟು ಹೆಚ್ಚಾಗಿದೆ” ಎಂದು ತಿಳಿಸಿದೆ.


ಇದನ್ನೂ ಓದಿರಿ: ಜಿಎಸ್‌ಟಿ ಬಗ್ಗೆ ರಾಜ್ಯಗಳ ಭಯ ನಿಜವಾಗಿದೆ: ತಮಿಳುನಾಡು ಹಣಕಾಸು ಸಚಿವ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಕಾಂಗ್ರೆಸ್‌ನಲ್ಲಿ ನಿಲ್ಲದ ರಾಜೀನಾಮೆ ಪರ್ವ; ಎಎಪಿ ಮೈತ್ರಿ ವಿರೋಧಿಸಿ ಪಕ್ಷ ತೊರೆದ ಮತ್ತಿಬ್ಬರು...

0
ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅರವಿಂದ್ ಸಿಂಗ್ ಲವ್ಲಿ ನಂತರ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು, ರಾಷ್ಟ್ರ ರಾಜಧಾನಿಯ ಎರಡು ಲೋಕಸಭಾ ಸ್ಥಾನಗಳಿಗೆ ನೇಮಿಸಿದ್ದ ಅದರ ಇಬ್ಬರು ನಾಯಕರು, ವೀಕ್ಷಕರಾದ ನೀರಜ್ ಬಸೋಯಾ ಮತ್ತು ನಸೀಬ್...