Homeಮುಖಪುಟಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ

- Advertisement -
- Advertisement -

ಮಾನವ ಹಕ್ಕುಗಳು ಮತ್ತು ಘನತೆ ಬಹಳ ಪವಿತ್ರವಾದವು. ಆದರೆ ಭಾರತದಲ್ಲಿ ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಆತಂಕ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, “ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಸಮಸ್ಯೆಗಳು” ಎಂದು ಹೇಳಿದ್ದಾರೆ.

“ಸಾಂವಿಧಾನಿಕ ಘೋಷಣೆಗಳು ಮತ್ತು ಖಾತರಿಗಳ ಹೊರತಾಗಿಯೂ, ಪೋಲಿಸ್ ಠಾಣೆಗಳಲ್ಲಿ ಪರಿಣಾಮಕಾರಿ ಕಾನೂನು ಪ್ರಾತಿನಿಧ್ಯದ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ಬಂಧಿತ ವ್ಯಕ್ತಿಗಳಿಗೆ ದೊಡ್ಡ ಹಾನಿಯಾಗಿದೆ. ಅತಿ ಬೇಗನೆ ತೆಗೆದುಕೊಳ್ಳುವ ನಿರ್ಧಾರಗಳು ನಂತರ ಆರೋಪಿಯು ತನ್ನನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ನಿರ್ಧರಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಸೌಲಭ್ಯವುಳ್ಳ ವರ್ಗ ಸಹ ಪೊಲೀಸರ ಥರ್ಡ್ ಗ್ರೇಡ್ ಚಿಕಿತ್ಸೆಯಿಂದ (ಪೊಲೀಸರಿಂದ ಹಲ್ಲೆ, ಕಿರುಕುಳ) ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಿಜೆಐ ಹೇಳಿದ್ದಾರೆ. ಆದರೂ ಅವರು ಯಾವುದೇ ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲಿಲ್ಲ.

ಪೋಲಿಸರ ಅತಿರೇಕಗಳನ್ನು ನಿಯಂತ್ರಣದಲ್ಲಿಡಲು ನಮ್ಮ ಮುಂದಿರುವ ಮಾರ್ಗವೆಂದರೆ, “ಕಾನೂನು ನೆರವು ಮತ್ತು ಉಚಿತ ಕಾನೂನು ನೆರವು ಸೇವೆಗಳ ಲಭ್ಯತೆಯ ಸಾಂವಿಧಾನಿಕ ಹಕ್ಕಿನ ಬಗ್ಗೆ ಮಾಹಿತಿಯನ್ನು ಪ್ರಸಾರ ಮಾಡುವುದು” ಎಂದು ಅವರು ಸೂಚಿಸಿದರು.

ಕಾನೂನು ಸೇವೆಗಳ ಆ್ಯಪ್ ಬಿಡುಗಡೆ ಅವರು, “ಪ್ರತಿ ಪೊಲೀಸ್ ಠಾಣೆ ಅಥವಾ ಕಾರಾಗೃಹದಲ್ಲಿ ಪ್ರದರ್ಶನ ಫಲಕಗಳು ಮತ್ತು ಬೋರ್ಡ್‌ಗಳನ್ನು ಅಳವಡಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರವು ಕೂಡ ದೇಶಾದ್ಯಂತ ಪೊಲೀಸ್ ಅಧಿಕಾರಿಗಳನ್ನು ಸಂವೇದನಾಶೀಲರನ್ನಾಗಿ ಮಾಡುವ ಕಾರ್ಯಗಾರಗಳನ್ನು ಸಕ್ರಿಯವಾಗಿ ನಡೆಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪರವಾಗಿ ಆರಂಭಿಸಿದ, ಆರೋಪಿಗಳ ಪರ ಕಾನೂನು ಸೇವೆಗಳ ಸುದೀರ್ಘ ಸಂಪ್ರದಾಯವನ್ನು ಭಾರತ ಹೊಂದಿದೆ. “ಒಂದು ಸಂಸ್ಥೆಯಾಗಿ ನ್ಯಾಯಾಂಗವು ನಾಗರಿಕರ ನಂಬಿಕೆಯನ್ನು ಗಳಿಸಲು ಬಯಸಿದರೆ, ನಾವು ಅವರಿಗಾಗಿ ಅಸ್ತಿತ್ವದಲ್ಲಿದ್ದೇವೆ ಎಂದು ಪ್ರತಿಯೊಬ್ಬರಿಗೂ ಭರವಸೆ ಮೂಡಿಸಬೇಕು. ದೀರ್ಘಕಾಲದಿಂದ, ದುರ್ಬಲ ಜನಸಮುದಾಯಗಳು ನ್ಯಾಯ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಕಾನೂನಿನ ನಿಯಮದಿಂದ ಆಳಲ್ಪಡುವ ಸಮಾಜವಾಗಿ ಉಳಿಯಲು ಬಯಸಿದರೆ, ಹೆಚ್ಚಿನ ಸವಲತ್ತು ಮತ್ತು ಅತ್ಯಂತ ದುರ್ಬಲರ ನಡುವೆ ನ್ಯಾಯದ ಲಭ್ಯತೆಯ ಅಂತರವನ್ನು ಕಡಿಮೆ ಮಾಡುವುದು ಅತ್ಯಗತ್ಯ. ಮುಂಬರುವ ಎಲ್ಲಾ ಸಮಯದಲ್ಲೂ, ನಮ್ಮ ರಾಷ್ಟ್ರದಲ್ಲಿ ಚಾಲ್ತಿಯಲ್ಲಿರುವ ಸಾಮಾಜಿಕ-ಆರ್ಥಿಕ ವೈವಿಧ್ಯತೆಯ ಅಸಮಾನತೆಯು ಹಕ್ಕುಗಳ ನಿರಾಕರಣೆಗೆ ಎಂದಿಗೂ ಕಾರಣವಾಗಿರುವುದಿಲ್ಲ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು “ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದರು.


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ದೇಶದ ಮುಖ್ಯ ನ್ಯಾಯಾಧೀಶರಾದ( CJI) ಇವರು ಈ ರೀತಿಯಿಂದ ವ್ಯಕ್ತಪಡಿಸಿದ್ದು ವಿಪರ್ಯಾಸವಾದರೂ ಸತ್ಯ ಇನ್ನಾದರೂ ಈ ರೀತಿ ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು
    ಭಾರತ ದೇಶದ ಸಂವಿಧಾನದ ಉದ್ದೇಶವಾದ ಸರ್ವೇ ಜನ ಸುಖಿನೋ ಭವಂತು ಉದ್ದೇಶಕ್ಕಾಗಿ ರಚಿಸಿದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಗೌರವ ಕೊಡುವಂತೆ ಆಗಬೇಕೆಂದು ಕೇಳಿಕೊಳ್ಳುತ್ತೇನೆ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...