Homeಮುಖಪುಟ12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

- Advertisement -
- Advertisement -

ಭಾರತದ ಸಗಟು ಹಣದುಬ್ಬರವು ನವೆಂಬರ್‌ನಲ್ಲಿ ಶೇ. 14.23ಕ್ಕೆ ಏರಿದೆ. ತೈಲ, ಕಚ್ಚಾ ಲೋಹಗಳು ಮತ್ತು ಆಹಾರ ಉತ್ಪನ್ನಗಳ ಬೆಲೆಗಳ ಹೆಚ್ಚಳದಿಂದಾಗಿ ಸಗಟು ಹಣದುಬ್ಬರವು 12 ವರ್ಷಗಳಲ್ಲಿ ಗರಿಷ್ಠ ಮಟ್ಟದಲ್ಲಿ ದಾಖಲಾಗಿದೆ ಎಂದು ಸರ್ಕಾರಿ ಅಂಕಿಅಂಶಗಳು ತೋರಿಸಿವೆ. ಅಕ್ಟೋಬರ್‌ನಲ್ಲಿ ಸಗಟು ಹಣದುಬ್ಬರ ದರವು ಶೇ. 12.54ರಷ್ಟಿತ್ತು.

ಸಗಟು ಮಾರುಕಟ್ಟೆಗಳಲ್ಲಿನ ಬೆಲೆ ಏರಿಕೆ ಸೂಚ್ಯಂಕವು ಸತತ ಎಂಟನೇ ತಿಂಗಳಿನಲ್ಲಿ ಎರಡಂಕಿಯಲ್ಲೇ ಉಳಿದಿದೆ. ಹಣದುಬ್ಬರಕ್ಕೆ ಕಾರಣವಾದ ಇತರ ಉತ್ಪನ್ನಗಳಲ್ಲಿ ಕಚ್ಚಾ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ರಾಸಾಯನಿಕಗಳು ಮತ್ತು ರಾಸಾಯನಿಕ ಉತ್ಪನ್ನಗಳು ಸೇರಿವೆ.

ಆಹಾರ ಸೂಚ್ಯಂಕವು ಅಕ್ಟೋಬರ್‌ನಲ್ಲಿ ಶೇ. 3.06ರಲ್ಲಿತ್ತು. ನವೆಂಬರ್‌ನಲ್ಲಿ ಶೇ. 6.70ಕ್ಕೆ ತೀವ್ರವಾಗಿ ಏರಿಕೆ ಕಂಡಿದೆ. ಇಂಧನ ಮತ್ತು ಶಕ್ತಿಯ ಸಗಟು ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ.37.18 ರಷ್ಟಿತ್ತು. ನವೆಂಬರ್‌ನಲ್ಲಿ ಶೇ.39.81ಕ್ಕೆ ಏರಿದೆ.

ಕಚ್ಚಾ ಪೆಟ್ರೋಲಿಯಂ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 80.57 ಇತ್ತು. ನವೆಂಬರ್‌ನಲ್ಲಿ ಶೇ. 91.74 ರಷ್ಟಿದೆ. ನವೆಂಬರ್‌ನಲ್ಲಿನ ಚಿಲ್ಲರೆ ಹಣದುಬ್ಬರದ ಅಂಕಿಅಂಶಗಳನ್ನು ಕೇಂದ್ರ ಸರ್ಕಾರವು ಸೋಮವಾರ ಬಿಡುಗಡೆ ಮಾಡಿತ್ತು. ಅಕ್ಟೋಬರ್‌ನಲ್ಲಿ ಶೇ.4.48ರಷ್ಟಿದ್ದ ಚಿಲ್ಲರೆ ಹಣದುಬ್ಬರ ನವೆಂಬರ್‌‌ನಲ್ಲಿ ಶೇ. 4.91ಕ್ಕೆ ಏರಿದೆ ಎಂದು ಅಂಕಿ-ಅಂಶಗಳು ಹೇಳಿವೆ.

ಆಹಾರ, ಪಾನೀಯಗಳು, ಬಟ್ಟೆ, ಪಾದರಕ್ಷೆಗಳು, ವಸತಿ ಬೆಲೆಗಳಲ್ಲಿನ ಚಿಲ್ಲರೆ ಹಣದುಬ್ಬರವು ತಿಂಗಳ ಅವಧಿಯಲ್ಲಿ ಹೆಚ್ಚಾಯಿತು. ತರಕಾರಿ ಬೆಲೆಯು ತೀವ್ರವಾಗಿ ಏರಿತು. ಆಹಾರ ಮತ್ತು ಪಾನೀಯಗಳಲ್ಲಿನ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ. 1.8ರಷ್ಟಿದ್ದದ್ದು ಈಗ ಶೇ.2.6ರಷ್ಟಾಗಿದೆ.

ಏನಿದು ಹಣದುಬ್ಬರ?

ಖರೇ ಹೇಳಬೇಕಂದರ ಇನಫ್ಲೇಷನ್ ಅಂದರೆ ಬರೇ ಉಬ್ಬರ ಅಥವಾ ಗಾಳಿ ಹಾಕಿಯೋ, ಮತ್ಯಾವುದೋ ರೀತಿಯಿಂದ ಉಬ್ಬಿಸೋದು. ಅಂದರ ಏನು?

ಸರಳ ಹೇಳಬೇಕಂದರ ಅದು ನಮ್ಮ ರೊಕ್ಕಕ್ಕ ಬೆಲೆ ಕಮ್ಮಿ ಆಗೇದ, ನಮ್ಮ ರೂಪಾಯಿಗೆ ಮೊದಲಿನಷ್ಟು ಸಾಮಾನು ಬರ್ತಾ ಇಲ್ಲ. ಈಗ ಕಮ್ಮಿ ಆಗೇದ ಅಂತ ಅರ್ಥ. ನಮ್ಮ ಮನ್ಯಾಗ ಅಜ್ಜಿಗಳು ಹೇಳತಿರತಾರಲ್ಲ, “ನಮ್ಮ ಕಾಲ ಸೋವಿ ಕಾಲ, ಆವಾಗ ಒಂದು ಚೀಲ ಜೋಳ ಕೊಟ್ಟರ ಒಂದು ತೊಲಿ ಬಂಗಾರ ಬರ್ತಿತ್ತು” ಅಂತ, ಅವರು ತಮಗ ಅರಿವಿರಲಾರದಂಗ ಹಣದ ಉಬ್ಬರದ ಬಗ್ಗೆ ಮಾತಾಡತಿರತಾರ. ಅಂದರ ಅವತ್ತಿಗೆ ರೂಪಾಯಿಗೆ ಕಿಮ್ಮತ್ತು ಇತ್ತು. ಈಗ ಇಲ್ಲ ಅಂತ.


ಇದನ್ನೂ ಓದಿರಿ: ಈ ಇನಫ್ಲೇಷನ್ ಅಥವಾ ಹಣದುಬ್ಬರ ಅಂದರೇನು? ಬೈ ಡೇಟಾಮ್ಯಾಟಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...