Homeಮುಖಪುಟಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ: ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ: ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

- Advertisement -
- Advertisement -

ಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಸಚಿನ್‌ ತೆಂಡೂಲ್ಕರ್‌ರವರ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ ಭಾರತದ ನೆಲದಲ್ಲಿ 21ನೇ ಏಕದಿನ ಶತಕ ಸಿಡಿಸುವ ಮೂಲಕ ವಿಶ್ವದಾಖಲೆಗೆ ಪಾತ್ರರಾದರು.

ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 20 ಶತಕಗಳನ್ನು ಬಾರಿಸಿದರೆ, ವಿರಾಟ್ ಕೊಹ್ಲಿ 104 ಪಂದ್ಯಗಳಲ್ಲಿ 21 ಶತಕ ಬಾರಿಸಿದ್ದಾರೆ.

ಅಲ್ಲದೆ ತಂಡವೊಂದರ ವಿರುದ್ಧ ಅತಿ ಹೆಚ್ಚು ಶತಕ ಗಳಿಸಿದ ವಿಶ್ವದಾಖಲೆ ಸಹ ಕೊಹ್ಲಿ ಪಾಲಾಯಿತು. ಸಚಿನ್ ಮತ್ತು ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಲಾ 9 ಶತಕ ಸಿಡಿಸಿದ್ದರೆ, ಇಂದಿನ ಪಂದ್ಯದಲ್ಲಿನ ಶತಕದ ಮೂಲಕ ಕೊಹ್ಲಿ ಶ್ರೀಲಂಕಾ ತಂಡದ ವಿರುದ್ಧ 10 ಶತಕಗಳನ್ನು ಸಿಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಶ್ರೀಲಂಕಾ ವಿರುದ್ಧ 8 ಶತಕಗಳನ್ನು ಬಾರಿಸಿದ್ದಾರೆ.

ಒಟ್ಟಾರೆ ಏಕದಿನ ಶತಕಗಳಲ್ಲಿ ಸಚಿನ್ 49 ಶತಕ ಬಾರಿಸಿದರೆ ಕೊಹ್ಲಿ 46 ಶತಕಗಳನ್ನು ಬಾರಿಸಿ 2ನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿ ಮೂರು ಪಂದ್ಯಗಳ ಸರಣಿಯಲ್ಲಿ ಎರಡನೇ ಶತಕ ಗಳಿಸಿದ್ದಾರೆ. ಅಲ್ಲದೆ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರನೇ ಶತಕ ಇದಾಗಿದೆ.

ಭಾರತ ತಂಡವು 43 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 303 ರನ್‌ ಗಳಿಸಿ ಆಟವಾಡುತ್ತಿದೆ. ಇದಕ್ಕೂ ಮೊದಲು ಭಾರತ ತಂಡದ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಸಹ ಶತಕ ಬಾರಿಸಿದರು. 97 ಎಸೆತಗಳಲ್ಲಿ 14 ಬೌಂಡರಿ ಮತ್ತು 2 ಸಿಕ್ಸರ್ ಮೂಲಕ 116 ರನ್ ಸಿಡಿಸಿದ್ದರು.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...