Homeಕರ್ನಾಟಕಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

ಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಜೆಟ್ ಮಂಡಿಸಿದರು. ಬಜೆಟ್ ಗಾತ್ರ ಮೂರು ಲಕ್ಷದ 27 ಸಾವಿರ ಕೋಟಿ ರೂಗಳಾಗಿದ್ದು, ಅದರ ಮುಖ್ಯಾಂಶಗಳು ಇಲ್ಲಿವೆ.

  • ಆಹಾರ ಇಲಾಖೆಗೆ 10 ಸಾವಿರ ಕೋಟಿ ಅನುದಾನ
  • 100 ರೈತ ಉತ್ಪಾದನಾ ಕಂಪನಿಗಳಿಗೆ ಶೇ 4ರ ಬಡ್ಡಿದರದಲ್ಲಿ ಸಹಾಯಧನ
  • ಮೈಸೂರು, ಕಲಬುರ್ಗಿಯಲ್ಲಿ ಟ್ರಾಮಾ ಸೆಂಟರ್ ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಘೋಷಣೆ
  • ನಮ್ಮ ಮೆಟ್ರೊಗೆ 30ಸಾವಿರ ಕೋಟಿ ಅನುದಾನ
  • ಸಮಾಜ ಕಲ್ಯಾಣ ಇಲಾಖೆಗೆ 11 ಸಾವಿರ ಕೋಟಿ ಅನುದಾನ
  • ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರಾಂಡ್‌ಗೆ 10 ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಯಡಿ ನರೇಗಾ ಯೋಜನೆಗೆ 10 ಕೋಟಿ ಅನುದಾನ
  • ಇಂದಿರಾ ಕ್ಯಾಂಟೀನ್‌ಗೆ ₹100 ಕೋಟಿ ಅನುದಾನ
  • ಬೆಂಗಳೂರು ಅಭಿವೃದ್ಧಿಗೆ 45 ಸಾವಿರ ಕೋಟಿ ಅನುದಾನ
  • ಲೋಕೋಪಯೋಗಿ ಇಲಾಖೆಗೆ 10ಸಾವಿರ ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಗೆ ಮನರೇಗ ಅಡಿಯಲ್ಲಿ ₹ 100 ಕೋಟಿ
  • ಅನುಗ್ರಹ ಯೋಜನೆ ಮರುಜಾರಿ: ಹಸು, ಎಮ್ಮೆ, ಎತ್ತು ಸತ್ತರೆ ₹ 10,000 ಪರಿಹಾರ ಧನ
  • ರೈತರಿಗೆ 3 ಲಕ್ಷದಿಂದ 5 ಲಕ್ಷದವರಗೆ ಶೂನ್ಯ ಬಡ್ಡಿದರದ ಸಾಲ
  • ಸಮಾಜ ಕಲ್ಯಾಣ ಇಲಾಖೆಗೆ ₹ 11,173 ಕೋಟಿ
  • ಕಿರು ಆಹಾರ ಸಂಸ್ಕರಣಾ ಉದ್ದಿಮೆಗೆ ₹ 100 ಕೋಟಿ
  • ಶಿಡ್ಲಘಟ್ಟ ಮತ್ತು ರಾಮನಗರದಲ್ಲಿ ತಲಾ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ
  • ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ
  • ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು

ತುಟ್ಟಿ

  • ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಿಸಲಾಗಿದೆ. ಬಿಯರ್ ಮೇಲೆ ಶೇ 10ರಷ್ಟು ತೆರಿಗೆ ಹೆಚ್ಚಳ

ಗ್ಯಾರಂಟಿ ಯೋಜನೆಗಳು ಜಾರಿ

ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವ ಗುರಿ ಹೊಂದಿದ್ದೇವೆ. ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.

ಬಡವರ ಕೈಗೆ ಹೆಚ್ಚಿನ ಹಣ ನೀಡುವುದರ ಹಿಂದಿರುವ ಪ್ರಬಲ ಆರ್ಥಿಕ ತರ್ಕವನ್ನು ಸದನದ ಗೌರವಾನ್ವಿತ ಸದಸ್ಯರು ಗಮನಿಸಬಹುದಾಗಿದೆ. ಜಿ.ಎಸ್‌.ಟಿ. ಯ ಬಹುಪಾಲು ಮೊತ್ತವು ಸಮಾಜದ ತಳಹಂತದ ಶೇ.60 ರಷ್ಟು ಜನರಿಂದ ಸಂಗ್ರಹವಾಗುತ್ತಿದ್ದರೂ ಆರ್ಥಿಕ ವ್ಯವಸ್ಥೆಯ ಹೆಚ್ಚಿನ ಲಾಭವು ಸಮಾಜದ ಮೇಲ್ಮಟ್ಟದ ಶೇ.10 ರಷ್ಟು ಜನರಿಗೆ ತಲುಪುತ್ತಿದೆ. ಆದ್ದರಿಂದ ಬಡವರಿಗೆ ಸಂಪತ್ತನ್ನು ಮರುಹಂಚಿಕೆ ಮಾಡುವ ನೀತಿಗಳನ್ನು ಜನಪರ ಸರ್ಕಾರಗಳು ಅನುಸರಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಈ ಕೆಲಸವನ್ನು ಮಾಡುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.

ಇಲಾಖಾವಾರು ಬಜೆಟ್ ಹಂಚಿಕೆ ವಿವರ

  • ಶಿಕ್ಷಣ ಕ್ಷೇತ್ರ- 37 ಸಾವಿರ ಕೋಟಿ ರೂ (ಶೇ 11)
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ- 24 ಸಾವಿರ ಕೋಟಿ ರೂ (ಶೇ 7)
  • ಇಂಧನ- 22 ಸಾವಿರ ಕೋಟಿ ರೂ (ಶೇ 7)
  • ನೀರಾವರಿ-19 ಸಾವಿರ ಕೋಟಿ ರೂ (ಶೇ 6)
  • ಗ್ರಾಮೀಣಾಭಿವೃದ್ಧಿ -18ಸಾವಿರ ಕೋಟಿ ರೂ (ಶೇ 5)
  • ಒಳಾಡಳಿತ ಮತ್ತು ಸಾರಿಗೆ – 16ಸಾವಿರ ಕೋಟಿ (ಶೇ 5)
  • ಕಂದಾಯ- 16 ಸಾವಿರ ಕೋಟಿ (ಶೇ 5)
  • ಆರೋಗ್ಯ ಇಲಾಖೆ- 14 ಸಾವಿರ ಕೋಟಿ ರೂ (ಶೇ 4)
  • ಸಮಾಜ ಕಲ್ಯಾಣ- 11 ಸಾವಿರ ಕೋಟಿ ರೂ (ಶೇ 3)
  • ಲೋಕೋಪಯೋಗಿ ಇಲಾಖೆ- 10ಸಾವಿರ ಕೋಟಿ ರೂ (ಶೇ 3)
  • ಕೃಷಿ ಮತ್ತು ತೋಟಗಾರಿಕೆ 5860 ಕೋಟಿ ರೂ (ಶೇ 2)
  • ಪಶುಸಂಗೋಪನೆ ಮತ್ತು ಮೀನುಗಾರಿಕೆ- 3024ಕೋಟಿ ರೂ (ಶೇ 1)
  • ಇತರೆ- 1.09ಲಕ್ಷ ಕೋಟಿ (ಶೇ 32)

2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಸ್ವಂತ ತೆರಿಗೆ ವಿವರ

ಒಟ್ಟು ರಾಜಸ್ವ ಸಂಗ್ರಹ- 1.62ಲಕ್ಷ ಕೋಟಿ ರೂ

ವಾಣಿಜ್ಯ ತೆರಿಗೆ- 1ಲಕ್ಷ ಕೋಟಿ ರೂ (ಶೇ 58)

ಅಬಕಾರಿ ತೆರಿಗೆ- 38ಸಾವಿರ ಕೋಟಿ ರೂ (ಶೇ 20)

ನೋಂದಣಿ ಮತ್ತು ಮುದ್ರಾಂಕ 25ಸಾವಿರ ಕೋಟಿ ರೂ (ಶೇ 14)

ಮೋಟಾರು ವಾಹನ 11500 ಕೋಟಿ ರೂ (ಶೇ 7)

ಇತರೆ- 2153 ಕೋಟಿ (ಶೇ 1)

ಇದನ್ನೂ ಓದಿ; ರಾಜ್ಯಕ್ಕೆ ಬರಬೇಕಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತಡೆದವರು ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...