HomeUncategorizedಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

ಕೊರೊನಾ ಪ್ಯಾಕೇಜ್ ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜನ್ನು ಇಂದು ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದರ ವಿವರವಾದ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ಪ್ಯಾಕೇಜನ್ನು ಘೋಷಿಸಿದಾಗಲೇ ಪ್ಯಾಕೇಜಿನ ವಿವರವಾದ ಮಾಹಿತಿಯನ್ನು ಹಣಕಾಸು ಸಚಿವರು ನೀಡುತ್ತಾರೆ ಎಂದು ಹೇಳಿದ್ದರು. ಅದರಂತೆ ಇಂದು ಸಂಜೆಗೆ ಇದರ ವಿವರವನ್ನು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ಕೂಡಾ ಹೇಳಿದ್ದರು.

ಸುದ್ದಿಗೋಷ್ಟಿಯಲ್ಲಿ ಆತ್ಮನಿರ್ಭರ ಯೋಜನೆಯನ್ನು ಸಮಗ್ರ ದೃಷ್ಟಿಕೋನದಿಂದ, ಸಮಾಜದ ಹಲವಾರು ವರ್ಗಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ನಂತರ ಇದನ್ನು ರೂಪಿಸಲಾಯಿತು ಎಂದು ಸಚಿವರು ಹೇಳಿದರು.

ಮೂಲಭೂತವಾಗಿ ಈ ಯೋಜನೆಯು ಬೆಳವಣಿಗೆಯನ್ನು ಉತ್ತೇಜಿಸುವುದು ಹಾಗೂ ಅತ್ಯಂತ ಸ್ವಾವಲಂಬಿ ಭಾರತವನ್ನು ನಿರ್ಮಿಸುವುದಾಗಿದ್ದು ಅದಕ್ಕಾಗಿಯೇ ಇದನ್ನು ಆತ್ಮನಿರ್ಭರ ಭಾರತ ಅಭಿಯಾನ್ ಎಂದು ಕರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಆತ್ಮನಿರ್ಭಾರ ಭಾರತದ ಐದು ಸ್ತಂಭಗಳು ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ, ಜನಸಂಖ್ಯಾಶಾಸ್ತ್ರ ಮತ್ತು ಬೇಡಿಕೆ ಎಂದು ಸೀತಾರಾಮನ್ ಹೇಳಿದರಲ್ಲದೆ, ಇಂದಿನಿಂದ ಮುಂದಿನ ಕೆಲವು ದಿನಗಳಲ್ಲಿ ಪ್ರಧಾನ ಮಂತ್ರಿಯ ದೃಷ್ಟಿಕೋನವನ್ನು ಮುಂದಿಡಲು ನಾವು ತಂಡದೊಂದಿಗೆ ಮಾಧ್ಯಮದ ಮುಂದೆ ಬರುತ್ತೇವೆ ಎಂದರು.

ದೇಶದ ಬಡವರು, ನಿರ್ಗತಿಕರು, ವಲಸೆ ಕಾರ್ಮಿಕರು, ದಿವ್ಯಾಂಗರು ಮತ್ತು ವಯಸ್ಸಾದವರ ಬಗ್ಗೆ ನಮಗೆ ಜವಾಬ್ದಾರಿ ಇದೆ ಎಂಬುದನ್ನು ನಾವು ಮರೆಯಬಾರದು ಎಂದು ಅವರು ಹೇಳಿದರು.

3 ಲಕ್ಷ ಕೋಟಿ ಮೌಲ್ಯದ  ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಕೊಲ್ಯಾಟರಲ್ ಉಚಿತ ಸ್ವಯಂಚಾಲಿತ ಸಾಲ ನೀಡಲಾಗುವುದು, ಇವುಗಳು 4 ವರ್ಷದ ಟೆನರ್ ಹೊಂದಿದ್ದು, 2020 ರ ಅಕ್ಟೋಬರ್ 31 ರವರೆಗೆ ಮಾನ್ಯವಾಗಿವೆ ಎಂದರು.

ಇದು 45 ಲಕ್ಷ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಘಟಕಗಳಿಗೆ ವ್ಯವಹಾರ ಚಟುವಟಿಕೆಯನ್ನು ಪುನರಾರಂಭಿಸಲು ಮತ್ತು ಉದ್ಯೋಗಗಳನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಸೇರಿದಂತೆ ವ್ಯವಹಾರಗಳಿಗೆ 3 ಲಕ್ಷ ಕೋಟಿ ರೂ. ಮೇಲಾಧಾರ ರಹಿತ ಸ್ವಯಂಚಾಲಿತ ಸಾಲಗಳನ್ನು ಘೋಷಿಸಿದ ಅವರು, ಇದಕ್ಕೆ 25 ಕೋಟಿ ಬಾಕಿ ಮತ್ತು 100 ಕೋಟಿ ವಹಿವಾಟು ಹೊಂದಿರುವ ಸಾಲಗಾರರು ಅರ್ಹರು ಎಂದರು.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ವ್ಯಾಖ್ಯಾನವನ್ನು ಪರಿಷ್ಕರಿಸಲಾಗಿದ್ದು, ಹೂಡಿಕೆಯ ಮಿತಿಯನ್ನು ಮೇಲ್ಮುಖವಾಗಿ ಪರಿಷ್ಕರಿಸಿ, ವಹಿವಾಟಿನ ಹೆಚ್ಚುವರಿ ಮಾನದಂಡಗಳನ್ನು ಸಹ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

200 ಕೋಟಿ ರೂ.ಗಳವರೆಗೆ ಸರ್ಕಾರದ ಖರೀದಿಯಲ್ಲಿ ಜಾಗತಿಕ ಟೆಂಡರ್‌ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಇದರಿಂದಾಗಿ ಭಾರತ ಸ್ವಾವಲಂಬಿಯಾಗಲಿದೆ. ವ್ಯವಹಾರಗಳು ಮರಳಿ ಸರಿಯಾಗುತ್ತಿದ್ದಂತೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು, ವ್ಯಾಪಾರ ಮತ್ತು ಕಾರ್ಮಿಕರಿಗೆ ಪಿಎಫ್ ಬೆಂಬಲವನ್ನು ಇನ್ನೂ 3 ತಿಂಗಳು ಮುಂದುವರಿಸಿ 2,500 ಕೋಟಿ ರೂ.ಗಳ ದ್ರವ್ಯತೆಯ ಪರಿಹಾರವನ್ನು ಸರ್ಕಾರ ನೀಡುತ್ತದೆ ಎಂದರು.

ಉದ್ಯೋಗಿಗಳಿಗೆ ಹೆಚ್ಚಿನ ಟೇಕ್ ಹೋಮ್ ಸಂಬಳವನ್ನು ಒದಗಿಸಲು ಮತ್ತು ಪಿಎಫ್ ಪಾವತಿಸುವಲ್ಲಿ ಉದ್ಯೋಗದಾತರಿಗೆ ಪರಿಹಾರವನ್ನು ನೀಡುವ ಸಲುವಾಗಿ, ವ್ಯವಹಾರಗಳು ಮತ್ತು ಕಾರ್ಮಿಕರಿಗೆ ಪಿಎಫ್ ಕೊಡುಗೆಯನ್ನು 3 ತಿಂಗಳವರೆಗೆ ಕಡಿತ ಮಾಡಿ,  6750 ಕೋಟಿ ರೂ.ಗಳ ದ್ರವ್ಯತೆ ಬೆಂಬಲವನ್ನು ನೀಡಲಾಗುತ್ತದೆ.

ಬ್ಯಾಂಕೇತರ ಹಣಕಾಸು ಕಂಪನಿಗಳು, ಕಿರುಬಂಡವಾಳ ಕಂಪನಿಗಳು, ವಸತಿ ಹಣಕಾಸು ಕಂಪನಿಗಳಿಗಾಗಿ ಸರ್ಕಾರ 30,000 ಕೋಟಿ ರೂ.ಗಳ ವಿಶೇಷ ದ್ರವ್ಯತೆ ಯೋಜನೆಯನ್ನು ಪ್ರಾರಂಭ. ವಿದ್ಯುತ್ ವಿತರಣಾ ಕಂಪನಿಗಳಿಗೆ (ಡಿಸ್ಕಾಮ್) 90,000 ಕೋಟಿ ರೂ. ಗಳ ದ್ರವ್ಯತೆ ನೀಡಲಾಗುವುದು ಎಂದರು.

ಎಲ್ಲಾ ಕೇಂದ್ರ ಏಜೆನ್ಸಿಗಳು ಗುತ್ತಿಗೆದಾರನಿಗೆ ವೆಚ್ಚವಿಲ್ಲದೆ, ನಿರ್ಮಾಣ ಹಾಗೂ ಸರಕು ಮತ್ತು ಸೇವಾ ಒಪ್ಪಂದಗಳನ್ನು ಒಳಗೊಂಡ ಕೆಲಸವನ್ನು ಪೂರ್ಣಗೊಳಿಸುವಂತಹ ಗುತ್ತಿಗೆಳನ್ನು 6 ತಿಂಗಳವರೆಗೆ ವಿಸ್ತರಣೆ ನೀಡಲಾಗಿದೆ ಎಂದರು.

ಮಾರ್ಚ್ 31, 2021 ರವರೆಗೆ ಟಿಡಿಎಸ್ / ಟಿಸಿಎಸ್ ದರವನ್ನು 25% ರಷ್ಟು ಕಡಿಮೆಗೊಳಿಸಲಾಗುವುದು ಹಾಗೂ 2019-2020ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ನ ಅಂತಿಮ ದಿನಾಂಕವನ್ನು 2020 ರ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.


ಓದಿ: ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ.


ವಿಡಿಯೊ ನೋಡಿ: ಮರಯಲೇ ಬಾರದ ಸುದ್ದಿಗಳಿವು, ಈ ಸುದ್ದಿಗಳೇನಾಗಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...