Homeಮುಖಪುಟಹಿಜಾಬ್: ‘ವಿಭಿನ್ನ ತೀರ್ಪು’ ನೀಡಿದ ಸುಪ್ರಿಂಕೋರ್ಟ್‌ ದ್ವಿಸದಸ್ಯ ಪೀಠ

ಹಿಜಾಬ್: ‘ವಿಭಿನ್ನ ತೀರ್ಪು’ ನೀಡಿದ ಸುಪ್ರಿಂಕೋರ್ಟ್‌ ದ್ವಿಸದಸ್ಯ ಪೀಠ

- Advertisement -
- Advertisement -

ರಾಜ್ಯ ಸರ್ಕಾರ ಹೊರಡಿಸಿದ್ದ ಹಿಜಾಬ್‌ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂಕೋರ್ಟ್‌‌ ದ್ವಿಸದಸ್ಯ ಪೀಠವೂ ವಿಭಿನ್ನವಾಗಿ ತೀರ್ಪು ನೀಡಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಹಿಜಾಬ್ ನಿಷೇಧದ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸಿದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವುಗಳನ್ನು ಅನುಮತಿಸಿದರು.

“ಇದು ಅಂತಿಮವಾಗಿ ಆಯ್ಕೆಯ ವಿಷಯವೇ ಹೊರತು ಬೇರೇನೂ ಇಲ್ಲ. ನನ್ನ ಮನಸ್ಸಿನಲ್ಲಿ ಮುಖ್ಯವಾಗಿ ಹೆಣ್ಣು ಮಗುವಿನ ಶಿಕ್ಷಣ ಮಾತ್ರವಾಗಿತ್ತು. ನನ್ನ ಸಹೋದರ ನ್ಯಾಯಾಧೀಶರ ತೀರ್ಪನ್ನು ನಾನು ಗೌರವಯುತಗಿಯೆ ಒಪ್ಪುವುದಿಲ್ಲ” ಎಂದು ನ್ಯಾಯಮೂರ್ತಿ ಧುಲಿಯಾ ಹೇಳಿದ್ದಾರೆ. ಇದು ಧಾರ್ಮಿಕ ಹಕ್ಕಿಗಿಂತ ಶಿಕ್ಷಣದ ಹಕ್ಕಿನ ವಿಚಾರ ಮತ್ತು ವಿದ್ಯಾರ್ಥಿನಿಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದ ಅವರು ಕರ್ನಾಟಕ ಸರ್ಕಾರದ ಆದೇಶವನ್ನು ರದ್ದು ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಭಿಪ್ರಾಯದಲ್ಲಿ ಭಿನ್ನಾಭಿಪ್ರಾಯವಿದೆ” ಎಂದು ನ್ಯಾಯಮೂರ್ತಿ ಹೇಮಂತ್‌ ಗುಪ್ತಾ ಅವರು ಹೇಳಿದ್ದಾರೆ. ಅರ್ಜಿದಾರರಿಗೆ 11 ಪ್ರಶ್ನೆಗಳನ್ನು ಕೇಳಿದ ನ್ಯಾಯಮೂರ್ತಿ ವಿದ್ಯಾರ್ಥಿನಿಯರ ಮನವಿಯನ್ನು ವಜಾಗೊಳಿಸಿ, ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಒಪ್ಪುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ಇತರರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಿಲ್ಲ: ಸುಪ್ರೀಂನಲ್ಲಿ ದುಶ್ಯಂತ್ ದವೆ ವಾದ

ತೀರ್ಪಿನಲ್ಲಿ ಒಮ್ಮತವಿಲ್ಲದಿರುವುದರಿಂದ ಪ್ರಕರಣವು ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್‌ ಅವರಿಗೆ ಉಲ್ಲೇಖಿಸಲಾಗಿದೆ. ಅರ್ಜಿಗಳನ್ನು ತ್ರಿಸದಸ್ಯ ಪೀಠದ ವಿಚಾರಣೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಈ ವಿಷಯವನ್ನು ಇರಿಸಲಾಗುವುದು ಎಂದು ನ್ಯಾಯಮೂರ್ತಿ ಧುಲಿಯಾ ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು 10 ದಿನಗಳ ಕಾಲ ವಾದಗಳನ್ನು ಆಲಿಸಿ, ಸೆಪ್ಟೆಂಬರ್ 22 ರಂದು ತೀರ್ಪನ್ನು ಕಾಯ್ದಿರಿಸಿತ್ತು. ಪೀಠದ ನೇತೃತ್ವದ ನ್ಯಾಯಮೂರ್ತಿ ಗುಪ್ತಾ ಅವರು ಭಾನುವಾರ ನಿವೃತ್ತರಾಗಲಿದ್ದಾರೆ.

ವಿಚಾರಣೆಯ ಸಮಯದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದ ಅರ್ಜಿದಾರರ ಪರ ಹಾಜರಾದ ವಕೀಲರು, ಮುಸ್ಲಿಂ ಹುಡುಗಿಯರು ತರಗತಿಗೆ ಹಿಜಾಬ್ ಧರಿಸಿ ಆಗಮಿಸುವುದನ್ನು ತಡೆಯುವುದರಿಂದ ಅವರ ಶಿಕ್ಷಣಕ್ಕೆ ತೊಂದರೆಯಾಗುತ್ತದೆ. ಇದರಿಂದಾಗಿ ಅವರು ತರಗತಿಗಳಿಗೆ ಹಾಜರಾಗುವುದನ್ನು ನಿಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸುವ ರಾಜ್ಯ ಸರ್ಕಾರ ಹೊರಡಿಸಿದ್ದ ಫೆಬ್ರವರಿ 5, 2022 ರ ಆದೇಶ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ವಕೀಲರು ಗಮನಸೆಳೆದಿದ್ದರು. ಹಿಜಾಬನ್ನು ಹಿಂದೂಗಳು ಧರಿಸಿರುವ ಘೂಂಗಾಟ್ ಅಥವಾ ಬಿಂದಿಗೆ ಮತ್ತು ಸಿಖ್ಖರ ಟರ್ಬನ್‌ಗಳಿಗೆ ಹೋಲಿಸಿದ್ದರು.

ಕೆಲವು ವಕೀಲರು ಈ ವಿಷಯವನ್ನು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು ಎಂದು ಕೂಡಾ ವಾದಿಸಿದ್ದರು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ವಕೀಲರು, ವಿವಾದ ಹುಟ್ಟುಹಾಕಿರುವ ಸರ್ಕಾರದ ಆದೇಶ ಧರ್ಮ ತಟಸ್ಥವಾಗಿದೆ ಎಂದು ಪ್ರತಿಪಾದಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ಬೆಂಬಲಿಸುವ ಆಂದೋಲನವು ‘ಸ್ವಾಭಾವಿಕ’ ಅಲ್ಲ ಎಂದು ಹೇಳಿದ್ದರು.

ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ಒಂದು ಗುಂಪು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಮಾರ್ಚ್ 15 ರಂದು ಹೈಕೋರ್ಟ್ ವಜಾಗೊಳಿಸಿತ್ತು. ಹಿಜಾಬ್‌ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ತೀರ್ಪು ನೀಡಿತ್ತು.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಫೆಬ್ರವರಿ 5, 2022 ರಂದು ರಾಜ್ಯ ಸರ್ಕಾರ ಹಿಜಾಬ್ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಮುಸ್ಲಿಂ ಹುಡುಗಿಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...