Homeಕರ್ನಾಟಕಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಹಿನ್ನಲೆ; ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ!

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಹಿನ್ನಲೆ; ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ!

- Advertisement -
- Advertisement -

ರಾಜ್ಯ ಹೈಕೋರ್ಟ್ ಮಂಗಳವಾರ ಬೆಳಿಗ್ಗೆ ಹಿಜಾಬ್ ವಿಚಾರದಲ್ಲಿ ತನ್ನ ತೀರ್ಪು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯ ಕೆಲವು ಭಾಗಗಳಲ್ಲಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಜೊತೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮಾರ್ಚ್ 15 ರಿಂದ 21 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ಸಭೆಗಳು, ಪ್ರತಿಭಟನೆಗಳು ಮತ್ತು ಆಚರಣೆಗಳನ್ನು ನಿಷೇಧಿಸಿ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಸೋಮವಾರ ಸಂಜೆ ಹೈಕೋರ್ಟ್ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಫೆಬ್ರವರಿ 25 ರಂದು, ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೈಬುನ್ನಿಸಾ ಮೊಹಿದೀನ್ ಖಾಝಿ ಅವರ ಪೂರ್ಣ ಪೀಠವು ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಮುಸ್ಲಿಂ ಹುಡುಗಿಯರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.

ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿ ತರಗತಿಯಲ್ಲಿ ಹಿಜಾಬ್ ಧರಿಸುವ ಹಕ್ಕನ್ನು ಪ್ರತಿಪಾದಿಸಿ, ಫೆಬ್ರವರಿ ಐದರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದು ಮಾಡಬೇಕು ಎಂದು ನ್ಯಾಯಾಲಯವನ್ನು ವಿನಂತಿಸಿದ್ದರು. ಇದನ್ನು ವಿರೋಧಿಸಿ ಸರ್ಕಾರದ ಪರವಾಗಿ ವಾದಿಸಿದ್ದ ಅಡ್ವೊಕೇಟ್ ಜನರಲ್ ಅವರು, ಸರ್ಕಾರದ ಆದೇಶವು ನಿರುಪದ್ರವವಾಗಿದ್ದು ಮತ್ತು ಧಾರ್ಮಿಕ ವೇಷಭೂಷಣವನ್ನು ನಿಷೇಧಿಸಲು ನಿರ್ದೇಶಿಸಿಲ್ಲ. ಸಮವಸ್ತ್ರಗಳನ್ನು ಸೂಚಿಸುವ ಅಧಿಕಾರವನ್ನು ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದೇವೆ ಎಂದು ಹೇಳಿದ್ದರು.

ಆದಾಗ್ಯೂ, ಸರ್ಕಾರಿ ಆದೇಶದ ಕೆಲವು ಭಾಗಗಳು ಅನಗತ್ಯವಾಗಿತ್ತು ಎಂದು ಅಡ್ವೊಕೇ‌ಟ್‌ ಜನರಲ್‌ ಒಪ್ಪಿಕೊಂಡಿದ್ದಾರೆ. ಜೊತೆಗೆ, ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಹೇಳಿದೆ.

ಆರಂಭದಲ್ಲಿ ಏಕ ನ್ಯಾಯಾಪೀಠ ಅರ್ಜಿಗಳ ವಿಚಾರಣೆ ನಡೆಸಿತ್ತು. ನಂತರ ನ್ಯಾಯಮೂರ್ತಿ ದೀಕ್ಷಿತ್ ಅವರು ಪ್ರಕರಣವನ್ನು ವಿಸ್ತ್ರತ ಪೀಠಕ್ಕೆ ವರ್ಗಾಯಿಸಿದರು.

ಇಂದು ಹೈಕೋರ್ಟ್ ಆದೇಶ ನೀಡಿದರೂ ಪ್ರಕರಣವು ಸುಪ್ರೀಂಕೋರ್ಟ್‌ಗೆ ಹೋಗುವ ನಿರೀಕ್ಷೆಯಿದೆ. ಫೆಬ್ರವರಿ 11 ರಂದು, ಹೈಕೋರ್ಟ್‌ನ ಮಧ್ಯಂತರ ಆದೇಶದ ವಿರುದ್ಧದ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು. ಜೊತೆಗೆ ವಿವಾದವನ್ನು ದೊಡ್ಡ ಮಟ್ಟದಲ್ಲಿ ಹರಡದಂತೆ ಅರ್ಜಿದಾರರನ್ನು ಕೇಳಿಕೊಂಡಿತ್ತು.

“ಪ್ರಕರಣದ ಬಗ್ಗೆ ನಾನು ಏನನ್ನೂ ವ್ಯಕ್ತಪಡಿಸಲು ಬಯಸುವುದಿಲ್ಲ. ಈ ವಿಷಯಗಳನ್ನು ದೊಡ್ಡ ಮಟ್ಟಕ್ಕೆ ಹರಡಬೇಡಿ…ರಾಜ್ಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಏನು ನಡೆಯುತ್ತಿದೆ ಎಂದು ನಮಗೆ ತಿಳಿದಿದೆ. ಹೀಗಾಗಿ ಪ್ರಕರಣವನ್ನು ದೆಹಲಿಗೆ ತರುವುದು ಸರಿಯೇ. ರಾಷ್ಟ್ರೀಯ ಮಟ್ಟದ ಸಮಸ್ಯೆಗಳು ಮತ್ತು ಎಲ್ಲವುಗಳ ಬಗ್ಗೆಯೂ ನೀವು ಯೋಚಿಸಬೇಕು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌. ವಿ. ರಮಣ ಅವರು ಉಡುಪಿಯ ವಿದ್ಯಾರ್ಥಿಗಳನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲ ದೇವದತ್ತ್ ಕಾಮತ್‌ಗೆ ತಿಳಿಸಿದ್ದರು.

ಈ ವೇಳೆ ಕಾಮತ್ ಅವರು ನ್ಯಾಯಾಲಯವು ಪರಿಶೀಲಿಸಬೇಕಾದ ಕಾನೂನು ಸಮಸ್ಯೆಗಳನ್ನು ಒಳಗೊಂಡಿರುವುದರಿಂದ ಪ್ರಕರಣವನ್ನು ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿದಾಗ, ನ್ಯಾಯಮೂರ್ತಿ ರಮಣ ಅವರು, “ಖಂಡಿತವಾಗಿಯೂ, ನಾವು ಪರಿಶೀಲಿಸುತ್ತೇವೆ. ತಪ್ಪಿದ್ದರೆ ಖಂಡಿತ ರಕ್ಷಿಸುತ್ತೇವೆ. ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ನಾವು ರಕ್ಷಿಸಬೇಕಾಗಿದೆ…ನೋಡೋಣ. ಸೂಕ್ತ ಸಮಯದಲ್ಲಿ, ಖಂಡಿತವಾಗಿಯೂ ನಾವು ಹಸ್ತಕ್ಷೇಪ ಮಾಡುತ್ತೇವೆ. ಯಾವಾಗ ಬೇಕೋ ಆಗ ನೋಡೋಣ” ಎಂದು ಹೇಳಿದ್ದರು.

ರಾಜ್ಯದ ಶಾಲೆಗಳಲ್ಲಿ ಹತ್ತನೇ ತರಗತಿ ಪರೀಕ್ಷೆಗಳು ಮಾರ್ಚ್ 28 ರಂದು ಪ್ರಾರಂಭವಾಗಲಿದ್ದು, ಪದವಿ ಪೂರ್ವ ಪರೀಕ್ಷೆಗಳು ಎಪ್ರಿಲ್‌ನಲ್ಲಿ ನಡೆಯಲಿವೆ.

ಇದನ್ನೂ ಓದಿ: ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣ: ಮಂಗಳವಾರ ರಾಜ್ಯ ಹೈಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...