ವಿಶ್ವದಾದ್ಯಂತ ಭಾರಿ ಗಮನಸೆಳೆದ ‘ಕಾಲೇಜಿನಲ್ಲಿ ಹಿಬಾಬ್ ನಿಷೇಧ’ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯ ಹೈಕೋರ್ಟ್ ತನ್ನ ತೀರ್ಪು ಪ್ರಕಟಿಸಲಿದೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ತಲೆಗೆ ಹಿಜಾಬ್ ಧರಿಸುವುದಕ್ಕೆ ರಾಜ್ಯ ಸರ್ಕಾರ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಉಡುಪಿಯ ಮುಸ್ಲಿಂ ವಿದ್ಯಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.
ನ್ಯಾಯಾಲಯಲ್ಲಿ ವಿದ್ಯಾರ್ಥಿನಿಯರು ಶಿಕ್ಷಣ ಸಂಸ್ಥೆಗಳಲ್ಲಿ ಸ್ಕಾರ್ಫ್ ಬಳಸುವುದನ್ನು ನಿಷೇಧಿಸುವ ಯಾವುದೇ ಕಾನೂನು ಇಲ್ಲ ಎಂದು ವಾದಿಸಿದ್ದರು. ಹಿಜಾಬ್ ಅನ್ನು ಸಂವಿಧಾನವು ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಅಡಿಯಲ್ಲಿ ರಕ್ಷಿಸಲಾಗಿದೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ದೃಷ್ಟಿಯಿಂದ ಅದನ್ನು ನಿಷೇಧಿಸಲು ಕಾಲೇಜು ಅಭಿವೃದ್ಧಿ ಸಂಸ್ಥೆಗೆ ಯಾವುದೆ ಅಧಿಕಾರ ಇಲ್ಲ ಅವರು ಹೇಳಿದ್ದರು.
ಇದನ್ನೂ ಓದಿ: ಕರ್ನಾಟಕದಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ತೊಂದರೆಗೊಳಗಾದ ವಿದ್ಯಾರ್ಥಿನಿಯರಿಗೆ ಸಲಹೆಗಳು
ಮುಸ್ಲಿಂ ವಿದ್ಯಾರ್ಥಿನಿರಿಗೆ ಹಿಜಾಬ್ ಧರಿಸಬೇಡಿ ಎಂದು ಉಡುಪಿ ಕಾಲೇಜಿನ ಪ್ರಾಂಶುಪಾಲರು ಹೇಳಿದ್ದರು. ಆದರೆ ವಿದ್ಯಾರ್ಥಿನಿಯರು ಇದನ್ನು ಒಪ್ಪದೆ ಪ್ರತಿಭಟನೆ ನಡೆಸಿದ್ದರು. ಇದರ ನಂತರ ವಿದ್ಯಾರ್ಥಿನಿಯರು ನ್ಯಾಯಾಲಯದ ಮೊರೆ ಹೋಗಿದ್ದರು.
ಈ ನಡುವೆ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ಕೇಸರಿ ಶಾಲನ್ನು ಧರಿಸಿ ಕಾಲೇಜನ್ನು ರಣರಂಗವಾಗಿಸಿದ್ದರು. ಇದಕ್ಕೆ ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ, ಎಬಿವಿಪಿ ಮತ್ತು ವಿಎಚ್‌ಪಿ ಕುಮ್ಮಕ್ಕು ಕೂಡಾ ನೀಡಿತ್ತು. ಜೊತೆಗೆ ಅವರು ಕಾಲೇಜಿನ ವಠಾರದಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಂಚುತ್ತಿರುವ ವಿಡಿಯೊಗಳು ಕೂಡಾ ವೈರಲ್ ಆಗಿದ್ದವು.
ಈ ನಡುವೆ ದಲಿತ ವಿದ್ಯಾರ್ಥಿಗಳು ಹಿಜಾಬ್‌ಗೆ ಬೆಂಬಲ ಸೂಚಿಸಲು ನೀಲಿ ಬಣ್ಣದ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು.
ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆ ನಡೆಸಿದ್ದ ಏಕಪೀಠದ ನ್ಯಾಯಾಧೀಶರು, ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಈ ಮಧ್ಯೆ ಮಧ್ಯಂತರ ಆದೇಶ ನೀಡಿದ್ದ ನ್ಯಾಯಾಲಯ ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸಿ ಬರದಂತೆ ತೀರ್ಪು ನೀಡಿದ್ದರು.
ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್


