Homeಅಂತರಾಷ್ಟ್ರೀಯ"ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ": ಯುಎಸ್ ಸಂಸ್ಥೆ ಟೀಕೆ

“ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ”: ಯುಎಸ್ ಸಂಸ್ಥೆ ಟೀಕೆ

ಇದಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಯಿಸಿದ್ದು, ಪ್ರೇರಿತ ಪ್ರತಿಕ್ರಿಯೆಗಳ ಸ್ವಾಗತಾರ್ಹವಲ್ಲ ಎಂದಿದೆ.

- Advertisement -
- Advertisement -

ಶಾಲಾ-ಕಾಲೇಜುಗಲಲ್ಲಿ ಹಿಜಾಬ್ ಧರಿಸಬೇಕೆಂಬ ಮುಸ್ಲಿಂ ವಿದ್ಯಾರ್ಥಿಗಳ ಬೇಡಿಕೆಯನ್ನು ಕರ್ನಾಟಕದಲ್ಲಿ ನಿರಾಕರಿಸುತ್ತಿರುವುದನ್ನು ವಿದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ನಿಗಾ ವಹಿಸುವ ಮತ್ತು ವರದಿ ಮಾಡುವ ಯುಎಸ್ ಸರ್ಕಾರಿ ಸಂಸ್ಥೆಯು ಟೀಕಿಸಿದೆ.

ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ (International Religious Freedom)ನ ರಾಯಬಾರಿ ರಶಾದ್ ಹುಸೇನ್, “ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ. “ಧಾರ್ಮಿಕ ಸ್ವಾತಂತ್ರ್ಯವು ವ್ಯಕ್ತಿಗಳು ತಮ್ಮ ಇಷ್ಟದ ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸಾಮರ್ಥ್ಯವನ್ನು ಒಳಗೊಂಡಿದೆ. ಭಾರತದ ಕರ್ನಾಟಕ ರಾಜ್ಯವು ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರಾಕರಿಸಬಾರದು. ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಹಾಗು ಮಹಿಳೆಯರು ಮತ್ತು  ಹುಡುಗಿಯರನ್ನು ಕಳಂಕಗೊಳಿಸುತ್ತದೆ ಮತ್ತು ಕಡೆಗಣಿಸುತ್ತದೆ” ಎಂದು ಹುಸೇನ್ ಅವರ ಕಚೇರಿ ಟ್ವೀಟ್ ಮಾಡಿದೆ.

ಹುಸೇನ್ ಅವರು ರಾಯಭಾರಿಯಾಗಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಮುನ್ನಡೆಸುವ ಸಚಿವಾಲಯವು ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್ ಯುಎಸ್ ಕಚೇರಿ ಅಡಿಯಲ್ಲಿ ಬರುತ್ತದೆ, ಇದು ಹಿಂದೆ ಭಾರತದಲ್ಲಿನ ಧಾರ್ಮಿಕ ಉದ್ವಿಗ್ನತೆಗಳ ಸಂದರ್ಭದಲ್ಲಿಯೂ ಸಹ ಪ್ರತಿಕ್ರಿಯಿಸಿದೆ.

ಈ ಬಗ್ಗೆ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಅಧಿಕೃತ ವಕ್ತಾರ ಶ್ರೀ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿ “ಕರ್ನಾಟಕ ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿನ ಡ್ರೆಸ್ ಕೋಡ್‌ಗೆ ಸಂಬಂಧಿಸಿದ ವಿಷಯವು ಕರ್ನಾಟಕದ ಗೌರವಾನ್ವಿತ ಹೈಕೋರ್ಟ್‌ನಿಂದ ನ್ಯಾಯಾಂಗ ವಿಚಾರಣೆಯಲ್ಲಿದೆ. ನಮ್ಮ ಸಾಂವಿಧಾನಿಕ ಚೌಕಟ್ಟು ಮತ್ತು ಕಾರ್ಯವಿಧಾನಗಳು, ಹಾಗೆಯೇ ನಮ್ಮ ಪ್ರಜಾಪ್ರಭುತ್ವದ ನೀತಿ ಮತ್ತು ರಾಜಕೀಯದಲ್ಲಿನ ಸಮಸ್ಯೆಗಳನ್ನು ಪರಿಗಣಿಸಲಾಗಿದೆ ಮತ್ತು ಪರಿಹರಿಸಲಾಗಿದೆ. ಭಾರತವನ್ನು ಚೆನ್ನಾಗಿ ತಿಳಿದಿರುವವರು ಈ ವಾಸ್ತವಗಳ ಕುರಿತು ಸರಿಯಾದ ಮೆಚ್ಚುಗೆಯನ್ನು ಹೊಂದಿರುತ್ತಾರೆ. ನಮ್ಮ ಆಂತರಿಕ ಸಮಸ್ಯೆಗಳ ಬಗ್ಗೆ ಪ್ರೇರಿತ ಪ್ರತಿಕ್ರಿಯೆಗು ಸ್ವಾಗತಾರ್ಹವಲ್ಲ” ಎಂದಿದ್ದಾರೆ.

ಹುಸೇನ್ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ US ಸೆನೆಟ್‌ನಿಂದ IRF ಗೆ ರಾಯಭಾರಿಯಾಗಿ ನೇಮಿಸಲಾಗಿದೆ. ಅವರು IRF ಗೆ ಮೊದಲ ಮುಸ್ಲಿಂ ರಾಯಭಾರಿಯಾಗಿದ್ದಾರೆ. ಅವರು ಈ ಹಿಂದೆ ಒಬಾಮಾ ಆಡಳಿತದ ಅವಧಿಯಲ್ಲಿ ಇಸ್ಲಾಮಿಕ್ ಸಹಕಾರ ಸಂಘಟನೆಗೆ ವಿಶೇಷ ರಾಯಭಾರಿಯಾಗಿ ಸೇವೆ ಸಲ್ಲಿದ್ದರು.

ಹಿಜಾಬ್ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಪುನರಾರಂಭಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳ ಒಳಗೆ ಶಾಲು ಅಥವಾ ಹಿಜಾಬ್ ಯಾವುದೇ ಧಾರ್ಮಿಕ ಉಡುಗೆಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಹೇಳಿದೆ.


ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...