ರಾಜ್ಯದ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಧರಿಸಿರುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಿರುವ ವಿವಾದ ಕುರಿತಂತೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಧ್ವನಿ ಎತ್ತಿದ್ದು, “ಶಿಕ್ಷಣದ ಮಧ್ಯೆ ಹಿಜಾಬ್ ಅನ್ನು ಎಳೆದು ತಂದು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ” ಎಂದು ಶನಿವಾರ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನ ಆಡಳಿತ ಮಂಡಳಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ನಂತರ ವಿದ್ಯಾರ್ಥಿನಿಯರು ಪ್ರತಿಭಟನೆಗೆ ಇಳಿದಿದ್ದರು. ಜೊತೆಗೆ ಹೈಕೋರ್ಟ್ ಮೊರೆಯು ಹೋಗಿದ್ದಾರೆ. ಇದರ ನಂತರ ಜಿಲ್ಲೆಯ ಇತರ ಕೆಲವು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರನ್ನು ಹಿಜಾಬ್ ಕಾರಣಕ್ಕೆ ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿದೆ.
ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್ ಧರಿಸಿ ಬರದಂತೆ ಪ್ರಿನ್ಸಿಪಾಲ್ ಹೇಳಿದ್ದಾರೆಂದು ಪೋಷಕರ ಆರೋಪ
ಈ ಮಧ್ಯೆ, ಶನಿವಾರ ಹಿಜಾಬ್ ಅನ್ನು ವಿರೋಧಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಾದವು ಅಂತರಾಷ್ಟ್ರೀಯವಾಗಿ ಸುದ್ದಿಯಾಗಿದ್ದು, ಹಲವಾರು ರಾಷ್ಟ್ರೀಯ ನಾಯಕರು ಈ ಬಗ್ಗೆ ಹಿಜಾಬ್ ಪರವಾಗಿ ಧ್ವನಿ ಎತ್ತಿದ್ದು, ವಿವಾದದ ಹಿಂದೆ ಸಂಘಪರಿವಾರ ಮತ್ತು ಬಿಜೆಪಿ ಇದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ವಿದ್ಯಾರ್ಥಿಗಳ ಹಿಜಾಬನ್ನು ಶಿಕ್ಷಣಕ್ಕೆ ಅಡ್ಡಿಯಾಗುವಂತೆ ಮಾಡಿ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಅವಳು ಯಾರೊಂದಿಗೂ ಭೇದ ತೋರಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
By letting students’ hijab come in the way of their education, we are robbing the future of the daughters of India.
Ma Saraswati gives knowledge to all. She doesn’t differentiate. #SaraswatiPuja
— Rahul Gandhi (@RahulGandhi) February 5, 2022
ಘಟನೆಗೆ ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, “ಬೇಟಿ ಬಚಾವೋ ಬೇಟಿ ಪಡಾವೋ ಮತ್ತೊಂದು ಟೊಳ್ಳು ಘೋಷಣೆಯಾಗಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಅವರ ಉಡುಗೆ ತೊಡುಗೆಗಳ ಕಾರಣಕ್ಕಾಗಿ ಶಿಕ್ಷಣದ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಮುಸಲ್ಮಾನರ ಕಡೆಗಣಿಸುವಿಕೆಯನ್ನು ಕಾನೂನುಬದ್ಧಗೊಳಿಸುವುದು ಗಾಂಧಿಯವರ ಭಾರತವನ್ನು ಗೋಡ್ಸೆಯ ಭಾರತವನ್ನಾಗಿ ಪರಿವರ್ತಿಸುವ ಮತ್ತೊಂದು ಹೆಜ್ಜೆಯಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Beti bachao beti parhao is yet another hollow slogan. Muslims girls are being denied the right to education simply because of their attire. Legitimising the marginalisation of muslims is one more step towards converting Gandhi’s India into Godhse’s India. https://t.co/yxrm4NqKGc
— Mehbooba Mufti (@MehboobaMufti) February 3, 2022
ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್ ಮುಚ್ಚಿದ ಕುಂದಾಪುರ ಕಾಲೇಜ್: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ


