Homeಕರ್ನಾಟಕಕುಂದಾಪುರ: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ, ಪಾಠವಿಲ್ಲ

ಕುಂದಾಪುರ: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ, ಪಾಠವಿಲ್ಲ

- Advertisement -
- Advertisement -

ಇಷ್ಟು ದಿನಗಳ ಕಾಲ ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಏಕಾಏಕಿ ಹಿಜಾಬ್ ಧರಿಸದೇ ಬರಬೇಕು ಎಂದು ಆದೇಶ ಹೊರಡಿಸಿದ್ದ ಕುಂದಾಪುರ ಪಿಯು ಕಾಲೇಜಿನಲ್ಲಿ ವಾರಗಳ ಕಾಲ ಪ್ರತಿಭಟನೆ ನಡೆಸಲಾಗಿತ್ತು. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಮಣಿದ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಕಾಲೇಜು ಆವರಣಕ್ಕೆ ಪ್ರವೇಶ ನೀಡಲಾಗಿದೆ.

ಕಾಲೇಜು ಗೇಟಿನ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿನಿಯರಿಗೆ ಒಳಗೆ ಬರಲು ಅವಕಾಶವನ್ನೇನೋ ನೀಡಲಾಗಿದೆ. ಆದರೆ, ಹಿಜಾಬ್ ಧರಿಸಿದ ವಿದ್ಯಾರ್ಥಿಗಳನ್ನು ಇತರ ವಿದ್ಯಾರ್ಥಿಗಳಿಂದ ದೂರವಿಟ್ಟು ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಇರುವಂತೆ ಸೂಚಿಸಲಾಗಿದೆ. ಇವರಿಗೆ ಶಿಕ್ಷಕರು ತರಗತಿಗಳನ್ನು ನಡೆಸುವುದಿಲ್ಲ.

ಇತ್ತ ರಾಜ್ಯದಾದ್ಯಂತ ಹಿಜಾಬ್ ವಿವಾದ ಹೆಚ್ಚಾಗುತ್ತಿದ್ದು, ರಾಜ್ಯದ ವಿವಿದಾ ಕಾಲೇಜುಗಳಲ್ಲಿಯೂ ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಪ್ರತಿಭಟಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಉಡುಪಿಯಲ್ಲಿ ಶುರುವಾದ ಹಿಜಾಬ್ ವಿವಾದ ವಿಜಯಪುರ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿಗೂ ಹರಡಿದೆ.

ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಈ ಕುರಿತು ಸುದ್ದಿ ಸಂಸ್ಥೆ ANI ಜೊತೆಗೆ ಮಾತನಾಡಿರುವ ಉಡುಪಿಯ ಹೆಚ್ಚುವರಿ ಎಸ್ಪಿಎಸ್.ಟಿ.ಸಿದ್ದಲಿಂಗಪ್ಪ, “ಕುಂದಾಪುರದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದ್ದು ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಕಾಲೇಜುಗಳಿಗೆ ಬರಲು ಹಾಗೂ ಕ್ಯಾಂಪಸ್‌ ಒಳಗೆ ಬರಲು ಅವಕಾಶ ಮಾಡಿಕೊಡಲಾಗುತ್ತಿದೆ. ಕುಂದಾಪುರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ” ಎಂದಿದ್ದಾರೆ.

ಇತ್ತ, ಉಡುಪಿ, ಚಿಕ್ಕಮಗಳೂರು, ಮಂಗಳೂರು, ಭದ್ರಾವತಿ, ಕುಂದಾಪುರ, ಬೆಳಗಾವಿ, ಹಾಸನ ಮತ್ತು ಹೊನ್ನಾಳಿಯ ಹಲವು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿಷೇಧಿಸಲಾಗಿದೆ.

ರಾಜ್ಯದಲ್ಲಿ ಕಾವು ಹೆಚ್ಚಿಸಿರುವ ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಹಿನ್ನೆಲೆ ಶನಿವಾರ, ಎಲ್ಲ ಸರ್ಕಾರಿ ಶಾಲೆ– ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಹೈಕೋರ್ಟ್‌ನಿಂದ ಬೇರೆ ಆದೇಶ ಬರುವವರೆಗೆ ಅಸ್ತಿತ್ವದಲ್ಲಿರುವ ಸಮವಸ್ತ್ರ ಸಂಬಂಧಿತ ನಿಯಮಗಳನ್ನು ಅನುಸರಿಸಲು ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಈಗಾಗಲೇ ಆದೇಶಿಸಿದೆ.

ಇನ್ನು, ತರಗತಿಗಳಲ್ಲಿ ಹೇರಿರುವ ಹಿಜಾಬ್ ನಿರ್ಬಂಧವನ್ನು ಪ್ರಶ್ನಿಸಿ ಉಡುಪಿ ಕಾಲೇಜಿನಲ್ಲಿ ಓದುತ್ತಿರುವ ಐವರು ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಫೆಬ್ರವರಿ 8 ರಂದು ವಿಚಾರಣೆ ನಡೆಸಲಿದೆ.


ಇದನ್ನೂ ಓದಿ: ಹಿಜಾಬ್‌‌‌: ವಿದ್ಯಾರ್ಥಿನಿಯರ ಪರವಾಗಿ ಧ್ವನಿ ಎತ್ತಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...