Homeಕರ್ನಾಟಕಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

- Advertisement -
- Advertisement -

ರಾಜ್ಯದಲ್ಲಿ ಹಬ್ಬಿರುವ ಹಿಜಾಬ್-ಕೇಸರಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿರುವ ರಾಜ್ಯದ ಮಹಿಳಾ ಸಂಘಟನೆಗಳು, ಈ ವಿಚಾರ ನಮ್ಮನ್ನು ಬಹುದೊಡ್ಡ ಆಘಾತಕ್ಕೆ ನೂಕಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಇಷು ದಿನ ಗೆಳೆಯರಾಗಿ ಒಟ್ಟಿಗೆ ಕುಳಿತು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷಬೀಜವನ್ನು ಬಿತ್ತಿ ಪರಸ್ಪರ ದ್ವೇಷಿಸುವಂತೆ ಮಾಡಲಾಗಿದೆ. ಹೀಗೆ ಹರಡುವ ಮುಸ್ಲಿಂ ದ್ವೇಷವು ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ ಮತ್ತು ‘ವಸುಧೈವ ಕುಟುಂಬಕಂ’ ಎಂಬ ವಿಚಾರಧಾರೆಗೆ ದೊಡ್ಡ ಹೊಡೆತ
ಕೊಡುತ್ತದೆ ಎಂದಿವೆ.

ಈಗ ಹಿಜಾಬ್ ಪರ ಮತ್ತು ವಿರುದ್ಧವಾಗಿ ಬೇಕಾದಷ್ಟು ವಾದ ವಿವಾದಗಳು ಹುಟ್ಟಿಕೊಂಡಿವೆ. ಆದರದು ಮುಖ್ಯ ಅಲ್ಲವೇ ಅಲ್ಲ. ತಿಳುವಳಿಕೆಯುಳ್ಳ ಪ್ರಜಾಪ್ರಭುತ್ವದ ಸಮಾಜದಲ್ಲಿ ನಮ್ಮ ಆಹಾರ, ಉಡುಪು, ಆಚರಣೆಗಳಿಗೆ ಆಯ್ಕೆ ಸ್ವಾತಂತ್ರ್ಯ ಇರುವಂತೆಯೇ ಹಿಜಾಬ್ ಕೂಡ ಅವರವರ ವೈಯಕ್ತಿಕ ಹಾಗೂ ವ್ಯಕ್ತಿಗತ ಆಯ್ಕೆಯಾಗಿದೆ. ಈ ಸ್ವಾತಂತ್ರ್ಯವು ಕೂಡಾ ಆಯಾ ಮಹಿಳೆಯ ವೈಯಕ್ತಿಕ ಆಯ್ಕೆಯಾಗಬೇಕೇ ಹೊರತು ಅವರವರ ಸಮುದಾಯದ ಪಿತೃಪ್ರಾಧಾನ್ಯದ ನಿರ್ಣಯವಾಗಕೂಡದು. ಸರಕಾರದ ನಿರ್ಧಾರವಂತೂ ಆಗಲೇಕೂಡದು. ಶಿಕ್ಷಣದ ವಿಚಾರ ಬಂದಾಗ ಅದು ಪ್ರತಿಯೊಬ್ಬರ ಹಕ್ಕು. ಅದನ್ನು ಸರಕಾರವು ಯಾವುದೇ ಕಾರಣಕ್ಕೂ,-ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ- ನಿರಾಕರಿಸಕೂಡದು. ಸರಕಾರವು ಮಹಿಳೆಯರ ವೈಯಕ್ತಿಕ ಆಯ್ಕೆಯನ್ನು ಎತ್ತಿ ಹಿಡಿಯಬೇಕು, ಜೊತೆಗೇ ಅವರ ಮೂಲಭೂತ ಹಕ್ಕನ್ನು ಕೂಡ ಖಾತರಿಗೊಳಿಸಬೇಕು. ಆದರೆ ನಮ್ಮ ಸರಕಾರ ಎರಡನ್ನೂ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಕ್ಕೊತ್ತಾಯ ಪತ್ರವನ್ನು ಬರೆದಿವೆ.

ಹಕ್ಕೊತ್ತಾಯಗಳು:
೧. ಕರ್ನಾಟಕ ಶಿಕ್ಷಣ ಕಾಯಿದೆ ೧೯೮೩ರ ಸೆಕ್ಷನ್ ೧೩೩ (೨) ವಿದ್ಯಾರ್ಥಿಗಳು ಕಾಲೇಜು ಅಥಾರಿಟಿಂಯವರು ಆಯ್ಕೆ ಮಾಡಿರುವ ಸಮವಸ್ತ್ರಗಳನ್ನು ಹಾಕಿಕೊಂಡು ಬರಬೇಕು ಎಂಬ ಸೆಕ್ಷನ್ನಿಗೆ ಇತ್ತೀಚೆಗೆ ಸೇರಿಸಿರುವ ‘ಸಮಾನತೆ, ಸಹಬಾಳ್ವೆ, ಮತ್ತು ಸಾಮಾಜಿಕ ಕಾನೂನು ಭಂಗ ಮಾಡುವಂತಹ ವಸ್ತ್ರಗಳನ್ನು ಹಾಕಬಾರದು ಎನ್ನುವ ಸುತ್ತೋಲೆಯು ಈಗಿನ ಪರಿಸ್ಥಿತಿಯಲ್ಲಿ ಅನಗತ್ಯವಾಗಿದೆ. ಅದು ವಿದ್ಯಾರ್ಥಿಗಳ ಹಿತಾಸಕ್ತಿಯ ವಿರುದ್ಧವಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೇ ಅಡ್ಡ ಬರುವಂತಹದ್ದಾಗಿದೆ. ತಕ್ಷಣವೇ ಅದನ್ನು ಹಿಂತೆಗೆದುಕೊಳ್ಳಬೇಕು.

೨. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಮತ್ತು ಸ್ಥಳೀಯ ಮಹಿಳಾಪರ ಚಿಂತಕರನ್ನು ಸೇರಿಸಿಕೊಂಡ ಶಾಂತಿ
ಸಮಿತಿಯ ರಚನೆ ಮಾಡಬೇಕು. ಯಾರದೇ ವೈಯಕ್ತಿಕ ಘನತೆ ಮತ್ತುಶಿಕ್ಷಣಕ್ಕೆ ಕುತ್ತು ಬಾರದ ರೀತಿಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು
ಗೌರವಿಸುವಂತೆ ಪರಸ್ಪರ ಸೌಹಾರ್ದ ಮಾತುಕತೆ ನಡೆಸಿ ಅದನ್ನು ಪಾಲಿಸಬೇಕು.

೩. ಹರಯದ ಹುಡುಗಿಯರಿಗೆ ತಮ್ಮ ಮಧ್ಯೆ ಇರುವ ಸಾಂಸ್ಕೃತಿಕ ಪರಂಪರೆಗಳಲ್ಲಿನ ಪ್ರಸ್ತುತ ಅಥವಾ ಅಪ್ರಸ್ತುತ ಎನಿಸುವ
ವಿಷಯಗಳ ಬಗ್ಗೆ ಆರೋಗ್ಯಕರವಾಗಿ ಚರ್ಚೆಗಳು ಏರ್ಪಡುವಂತಹ ವಾತಾವರಣವು ಇರುವಂತೆ ನೋಡಿಕೊಳ್ಳಬೇಕು.

೪. ಸಂವಿಧಾನದ ಚೌಕಟ್ಟಿನೊಳಗೇ ಇದ್ದು ಮಹಿಳೆಯರ ಶಿಕ್ಷಣದ ಹಕ್ಕು ಮತ್ತು ಅವರ ವಸ್ತ್ರಗಳ ಆಯ್ಕೆ ಸ್ವಾತಂತ್ರ್ಯಗಳನ್ನು
ರಕ್ಷಿಸುವ ನಿಟ್ಟಿನಲ್ಲಿ ಕ್ರಮಗಳಾಗಬೇಕು.

ಮಾಧ್ಯಮಗಳು ಮತ್ತು ಹಿಂದುತ್ವವಾದೀ ಶಕ್ತಿಗಳು ಇದನ್ನು ಹಿಜಾಬ್ ಮತ್ತು ಕೇಸರಿ ಶಾಲಿನ ಮಧ್ಯೆಯ ವಿವಾದವಾಗಿ
ಬಿಂಬಿಸುತ್ತಿವೆ. ಆದರೆ ಇದು ಮಹಿಳೆಯರ ಶಿಕ್ಷಣದ ಹಕ್ಕಿನ ಪ್ರಶ್ನೆಯಾಗಿದ್ದು, ಈ ಸಂದರ್ಭದಲ್ಲಿ ಇದು ಮುಸ್ಲಿಂ ಮಹಿಳೆಯರ ಶಿಕ್ಷಣ ಮತ್ತು
ಸುರಕ್ಷೆಯ ಪ್ರಶ್ನೆಯಾಗಿದ್ದು ಇಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸುವುದಾಗಿ ತಿಳಿಸಿವೆ.

ಜಾಗೃತ ಮಹಿಳಾ ಒಕ್ಕೂಟ, ವಿ ದ ವುಮೆನ್, ಉತ್ತರ ಕರ್ನಾಟಕ ಜೋಗಪ್ಪ ಸಂಘ, ಒಂದೆಡೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟ, ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸ್ತ್ರೀ ಜಾಗೃತಿ ಸಮಿತಿ, ಧ್ವನಿ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸೇರಿ ಹಕ್ಕೊತ್ತಾಯ ಮಾಡಿವೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...