Homeಕರ್ನಾಟಕಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

- Advertisement -
- Advertisement -

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುವುದರ ಕುರಿತ ಘರ್ಷಣೆ ಉಲ್ಬಣಗೊಂಡಿರುವ ಬೆನ್ನಲ್ಲೇ, ಬೆಂಗಳೂರು ನಗರ ಪೊಲೀಸರು ಬೆಂಗಳೂರಿನ ಎಲ್ಲಾ ಶಿಕ್ಷಣ ಸಂಸ್ಥೆಗಳ ಬಳಿ ಯಾವುದೇ ಸಭೆಗಳು ಮತ್ತು ಪ್ರತಿಭಟನೆಗಳನ್ನು ನಡೆಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಎರಡು ವಾರಗಳವರೆಗೆ ಯಾವುದೇ ಶಾಲೆ, ಕಾಲೇಜು ಮತ್ತು ಇತರ ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಸಭೆ, ಧರಣಿ ಅಥವಾ ಪ್ರತಿಭಟನೆಗಳು ನಡೆಯುವಂತಿಲ್ಲ ಎಂದು ಶಾಲೆ ಕಾಲೇಜು ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಬುಧವಾರ (ಫೆ.9) ಆದೇಶ ನೀಡಿದ್ದಾರೆ.

ಹಿಜಾಬ್ ಕುರಿತ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್‌ನಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರಿಂದ ‘ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು’ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ | ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ ಹೈಕೋರ್ಟ್‌

“ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ. ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ” ಎಂದು ತಿಳಿಸಿದ್ದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಇಂದು (ಫೆ.9) ಬೆಂಗಳೂರು ನಗರ ಪೊಲೀಸರು ಶಿಕ್ಷಣ ಸಂಸ್ಥೆಗಳ ಸುತ್ತ ಮುತ್ತ ಎರಡು ವಾರಗಳ ಕಾಲ ನಿಷೇದಾಜ್ಞೆ ಹೊರಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ, ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ಹಿಂಸಾಚಾರ ನಡೆದಿದ್ದು, ಕ್ಯಾಂಪಸ್‌ನೊಳಗೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರ ವಿರುದ್ಧ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳ ಗುಂಪು ಪ್ರತಿಭಟನೆ ನಡೆಸಿತು. ಕಲ್ಲು ತೂರಾಟ ನಡೆಸಿ ಕೇಸರಿ ಧ್ವಜ ಹಾರಿಸಲಾಯಿತು, ಬಳಿಕ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.


ಇದನ್ನೂ ಓದಿ: ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...