Homeಕರ್ನಾಟಕಹಿಜಾಬ್: ಸಮವಸ್ತ್ರದ ಕುರಿತ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳು, ಸರ್ಕಾರದ ಹೇಳಿಕೆಗಳು ತದ್ವಿರುದ್ಧ!

ಹಿಜಾಬ್: ಸಮವಸ್ತ್ರದ ಕುರಿತ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳು, ಸರ್ಕಾರದ ಹೇಳಿಕೆಗಳು ತದ್ವಿರುದ್ಧ!

- Advertisement -
- Advertisement -

ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ, ಬೇರೆ ರಾಜ್ಯಗಳಲ್ಲೂ ವಿವಾದಕ್ಕೆ ಕಾರಣವಾಗಿರುವ ರಾಜ್ಯದ ಹಿಜಾಬ್- ಕೇಸರಿ ಶಾಲು ವಿವಾದದ ಕುರಿತ ರಾಜ್ಯ ಸರ್ಕಾರದ ನಿಯಮಗಳು ಹಲವು ಅನುಮಾನಗಳಿಗೆ ಎಡೆ ಮಾಡುತ್ತಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ 2021-22ರ ಪ್ರವೇಶ ಮಾರ್ಗಸೂಚಿಗಳು ಮತ್ತು ಸರ್ಕಾರದ ಹೇಳಿಕೆಗಳು ತದ್ವಿರುದ್ಧವಾಗಿವೆ.

ಹೌದು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಲ್ಲಿರುವ ಸಮವಸ್ತ್ರದ ಕುರಿತ ನಿಯಮಗಳು ಮತ್ತು ರಾಜ್ಯ ಸರ್ಕಾರ ಸಮವಸ್ತ್ರ ಜಾರಿ ಮಾಡಿ ಆದೇಶಿಸಿರುವುದು ನಿಜಕ್ಕೂ ತದ್ವಿರುದ್ಧ. ಇದು ಇಲಾಖೆಯೇ ಬಿಡುಗಡೆ ಮಾಡಿದ್ದ ಪ್ರವೇಶ ಮಾರ್ಗಸೂಚಿಗಳಲ್ಲಿ ಕಂಡು ಬಂದಿದೆ.

ಈ 2021-22ರ ಪ್ರವೇಶ ಮಾರ್ಗಸೂಚಿಗಳ ಪ್ರಕಾರ ಸಮವಸ್ತ್ರವನ್ನು ಕಡ್ಡಾಯವಲ್ಲ. ಕೆಲವು ಕಾಲೇಜು ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಗಳು ಸಮವಸ್ತ್ರವನ್ನು ಕಡ್ಡಾಯಗೊಳಿಸುವುದು ನಿಯಮ ಬಾಹಿರವಾಗಿರುತ್ತದೆ. ಮೇಲ್ಕಂಡ ಸೂಚನೆಗಳನ್ನು ಉಲ್ಲಂಘಿಸಿದ್ದಲ್ಲಿ ಗಂಭೀರವಾಗಿ ಪರಿಗಣಿಸುವುದಾಗಿಯೂ ತಿಳಿಸಿದೆ. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಸಮವಸ್ತ್ರ ಕಡ್ಡಾಯ ಎಂದು ನೀಡಿರುವ ಹೇಳಿಕೆಗೆ ತದ್ವಿರುದ್ಧವಾಗಿದೆ.

ಇದನ್ನೂ ಓದಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಪಿಯು ಬೋರ್ಡ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. http:// file:///C:/Users/lenovo/Downloads/ADM_GUIDELINES.pdf

ಇದೇ ಮಾರ್ಗಸೂಚಿಯಲ್ಲಿ “ವಿದ್ಯಾರ್ಥಿಗಳೊಡನೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಂಡು, ಅವರಲ್ಲಿ ಇರಬಹುದಾದ ಸಣ್ಣ-ಪುಟ್ಟ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವೈಯಕ್ತಿಕವಾಗಿ ಸಮಾಲೇಚನೆ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ/ಚೈತನ್ಯವನ್ನು ತುಂಬುವುದು ಹಾಗೂ ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಉತ್ತೇಜನ ನೀಡಬೇಕು” ಎಂದು ತಿಳಿಸಲಾಗಿದೆ.

ಆದರೆ ಡಿಸೆಂಬರ್‌ ಕೊನೆಯಲ್ಲಿ ಉಡುಪಿ ಕಾಲೇಜಿನಲ್ಲಿ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದ ಬಳಿಕ ಈ ಮಾರ್ಗಸೂಚಿಯ ನಿಯಮಗಳು ಲೆಕ್ಕಕ್ಕೆ ಇಲ್ಲದಂತಾಗಿವೆ. ಪ್ರವೇಶ ಮಾರ್ಗಸೂಚಿಗಳ ಕುರಿತು ಮೊದಲು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೇಸ್ ವರದಿ ಮಾಡಿದೆ.

Hijab

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಚಿವರು, ಶಾಸಕರು ಸಮವಸ್ತ್ರ ಕಡ್ಡಾಯ ಎಂದಿದ್ದಾರೆ. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಫೆ.5 ರಂದು ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ.

ಪಿಯುಸಿಗೆ ಪ್ರವೇಶ ಪಡೆಯುವಾಗ ಕಾಲೇಜುಗಳು, ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳನ್ನು ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸುತ್ತದೆ. ಆದರೆ, ಸಮಾನತೆ, ಸೌಹಾರ್ದತೆ ಕಾಪಾಡಬೇಕಾದ ಕಾಲೇಜು ಆಡಳಿತ ಮಂಡಳಿಗಳು ಹೀಗೆ ಏಕಾಏಕಿ ಹಿಜಾಬ್ ವಿರೋಧಿಸಿದ್ದು, ಅದಕ್ಕೆ ಬಿಜೆಪಿ ನಾಯಕರು ಒಪ್ಪಿಗೆ ಸೂಚಿಸಿದ್ದು, ಹಿಜಾಬ್ ವಿರೋಧಿ ಧೋರಣೆ ರಾಜ್ಯಾದಂತ ಕಾಲೇಜುಗಳಿಗೆ ಹರಡಿ ಘರ್ಷಣೆಗೆ ಕಾರಣವಾಗಿದ್ದು ಮಾತ್ರ ರಾಜ್ಯ ಸರ್ಕಾರದ ವೈಫಲ್ಯವೇ.


ಇದನ್ನೂ ಓದಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...