Homeಕರ್ನಾಟಕತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

- Advertisement -
- Advertisement -

ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ -ಕೇಸರಿ ಶಾಲು ವಿವಾದ ತಾರಕಕ್ಕೆ ಏರಿದೆ. ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ನಡೆದಿದೆ.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ರಾಷ್ಟ್ರಧ್ವಜವನ್ನು ಹಾರಿಸುವ ಧ್ವಜಕಂಬಕ್ಕೆ ಹತ್ತಿದ ಓರ್ವ ವಿದ್ಯಾರ್ಥಿ ಕೇಸರಿ ಧ್ವಜವನ್ನು ಹಾರಿಸಿದ್ದಾನೆ.

ಇದಕ್ಕೆ ಉಳಿದ ವಿದ್ಯಾರ್ಥಿಗಳು ಘೋಷಣೆ ಕೂಗಿ ಉತ್ತೇಜಿಸಿದ್ದಾರೆ. ಕೈಗಳಲ್ಲಿ ಕೇಸರಿ ಶಾಲುಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಮತ್ತಷ್ಟು ಉನ್ಮಾದದಿಂದ ಕಿರುಚಾಡಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ಈ ವೇಳೆ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಕಲ್ಲು ತೂರುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಶಿವಮೊಗ್ಗ SP ಲಕ್ಷ್ಮಿ ಪ್ರಸಾದ್ ಮತ್ತು ಡಿಸಿ ಸೆಲ್ವಮಣಿ ಭೇಟಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅನಿರ್ಧಿಷ್ಟವಾಧಿವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಸುದ್ದಿ ಅಪ್‌ಡೇಟ್ ಆಗುತ್ತಿದೆ…..


ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...