Homeಕರ್ನಾಟಕತ್ರಿಸದಸ್ಯರ ಪೂರ್ಣ ಪೀಠದ ಮುಂದೆ ಹಿಜಾಬ್‌ ಅರ್ಜಿ ವಿಚಾರಣೆ

ತ್ರಿಸದಸ್ಯರ ಪೂರ್ಣ ಪೀಠದ ಮುಂದೆ ಹಿಜಾಬ್‌ ಅರ್ಜಿ ವಿಚಾರಣೆ

- Advertisement -
- Advertisement -

ಹಿಜಾಬ್‌ ಧರಿಸಿ ಕಾಲೇಜು ಪ್ರವೇಶ ಕೋರಿ ಸಲ್ಲಿಸಿದ್ದ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿಯರ ಅರ್ಜಿಯನ್ನು ಆಲಿಸುತ್ತಿದ್ದ ಹೈಕೋರ್ಟ್‌ನ ಏಕ ಸದಸ್ಯ ಪೀಠವು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವುದಾಗಿ ಬುಧವಾರ ಹೇಳಿದೆ. ಈ ಹಿನ್ನಲೆಯಲ್ಲಿ ಹೈಕೋರ್ಟ್‌ ಪ್ರಕರಣದ ವಿಚಾರಣೆಗಾಗಿ ಮೂವರು ಸದಸ್ಯರ ಪೀಠವನ್ನ ರಚಿಸಿದ್ದು, ಗುರುವಾರ(ಇಂದು) ಮದ್ಯಾಹ್ನ 02:30 ಕ್ಕೆ ವಿಚಾರಣೆ ಪ್ರಾರಂಭವಾಗಲಿದೆ.

ಅರ್ಜಿ ವಿಚಾರಣೆಯ ಎರಡನೇ ದಿನವಾದ ಬುಧವಾರ, “ವೈಯಕ್ತಿಕ ಕಾನೂನಿನ ಕೆಲವು ಅಂಶಗಳ ಹಿನ್ನಲೆಯಲ್ಲಿ ಮೂಲಭೂತ ಪ್ರಾಮುಖ್ಯತೆಯ ಕೆಲವು ಸಾಂವಿಧಾನಿಕ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ” ಎಂದು ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹೇಳಿ,  ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. ಜೊತೆಗೆ ವಿದ್ಯಾರ್ಥಿನಿಯರು ಮಧ್ಯಂತರ ಆದೇಶದ ಸಮಸ್ಯೆಯನ್ನು ಸಹ ವಿಸ್ತೃತ ಪೀಠವೇ ಪರಿಗಣಿಸುತ್ತದೆ ಎಂದು ಆದೇಶ ನೀಡಿದ್ದರು.

ಇದನ್ನೂ ಓದಿ: ಹಿಜಾಬ್‌‌ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ರಾಜ್ಯ ಹೈಕೋರ್ಟ್‌

ಈ ಹಿನ್ನಲೆಯಲ್ಲಿ ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೂರ್ಣ ಪೀಠವನ್ನು ರಚಿಸಿದೆ. ಈ ಪೀಠವು ಮುಖ್ಯ ನ್ಯಾಯಮೂರ್ತಿಯ ಜೊತೆಗೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿಯುದ್ದೀನ್ ಅವರನ್ನು ಒಳಗೊಂಡಿದೆ.

ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರು ಕಳೆದ ವರ್ಷ ಮಾರ್ಚ್‌ನಲ್ಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಹಿಳಾ ನ್ಯಾಯಾಧೀಶರಾಗಿದ್ದಾರೆ.

ವಿಶೇಷ ಪೀಠವು ಉಡುಪಿ ವಲಯದ ಕಾಲೇಜುಗಳ 18 ಬಾಲಕಿಯರ ಪರವಾಗಿ ಒಟ್ಟು ಐದು ಅರ್ಜಿಗಳನ್ನು ಗುರುವಾರ(ಇಂದು) ಮಧ್ಯಾಹ್ನ 02:30 ವಿಚಾರಣೆ ನಡೆಸಲಿದೆ.

“ಅರ್ಜಿಗಳಲ್ಲಿ ಮನವಿ ಮಾಡಲಾದ ತುರ್ತುಸ್ಥಿತಿಯನ್ನು ಪರಿಗಣಿಸಿ, ತಕ್ಷಣದ ಪರಿಗಣನೆಗೆ ಮುಖ್ಯ ನ್ಯಾಯಾಧೀಶರ ಮುಂದೆ ಪತ್ರಗಳನ್ನು ಇರಿಸಲು ರಿಜಿಸ್ಟ್ರಾರ್‌ಗೆ ಸೂಚಿಸಲಾಗಿದೆ” ನ್ಯಾಯಮೂರ್ತಿ ದೀಕ್ಷಿತ್ ಆದೇಶದಲ್ಲಿ ಟಿಪ್ಪಣಿಯಲ್ಲಿ ನಿನ್ನೆ ಹೇಳಿದ್ದರು. ಜೊತೆಗೆ, ವಿಸ್ತೃತ ಪೀಠಕ್ಕೆ ಸಂಬಂಧಿಸಿದಂತೆ ಮುಖ್ಯನ್ಯಾಯಮೂರ್ತಿ ನಿರ್ಧಾರ ತೆಗೆದುಕೊಂಡ ನಂತರ ಮಧ್ಯಂತರ ಆದೇಶವನ್ನು ಪಡೆಯಲು ಅರ್ಜಿದಾರರು ಮುಕ್ತವಾಗಿದ್ದಾರೆ ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: Hijab Live | ಹಿಜಾಬ್‌‌ ಅರ್ಜಿ ವಿಚಾರಣೆ ಲೈವ್‌‌ | ಪ್ರಕರಣಕ್ಕೆ ದೊಡ್ಡ ಪೀಠದ ಪರಿಗಣನೆಯ ಅಗತ್ಯವಿದೆ: ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...