Homeಮುಖಪುಟಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

ಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

- Advertisement -
- Advertisement -

ಕರ್ನಾಟಕದ ಶಾಲೆ ಕಾಲೇಜುಗಳಲ್ಲಿ ಭುಗಿಲೆದ್ದಿರುವ ವಿವಾದ ದುರುದ್ದೇಶಪೂರ್ವಕವಾಗಿದ್ದು, ನಾಡಿನ ಶಾಂತಿ, ಸೌಹಾರ್ದತೆ, ಸಹಬಾಳ್ವೆಗೆ ಧಕ್ಕೆ ತಂದಿದೆ. ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿಸುವ ಈ ಕುಟಿಲ ತಂತ್ರವನ್ನು ರಾಜ್ಯದ ಶಾಂತಿಪ್ರಿಯ ನಾಗರಿಕರು ವಿಫಲಗೊಳಿಸಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರವರು ಮನವಿ ಮಾಡಿದ್ದಾರೆ.

ಉಡುಪಿಯ ಒಂದು ಕಾಲೇಜಿನಲ್ಲಿ ಆರಂಭಗೊಂಡ ಸಮಸ್ಯೆ ಇಡೀ ರಾಜ್ಯಕ್ಕೆ ವ್ಯಾಪಿಸಲು ಕಾರಣವಾದರೂ ಏನು? ಎಲ್ಲೆಡೆ ಶಾಂತಿ ಕದಡಿ ಗಲಭೆಯೆಬ್ಬಿಸಲು ಹಿನ್ನೆಲೆಯಲ್ಲಿ ನಿಂತು ಸಂಚು ರೂಪಿಸಿದ ಸಂಘಟನೆಗಳಾದರೂ ಯಾವುವು? ಈ ಸಂಘಟನೆಗಳಿಗೆ ಸರ್ಕಾರದ ಬೆಂಬಲವಿದೆಯೇ? ವಿವಾದ ಆರಂಭಗೊಂಡಾಗಲೇ ಸರ್ಕಾರ ಮಧ್ಯಪ್ರವೇಶಿಸಿ, ಸೌಹಾರ್ದಯುತವಾಗಿ ಬಗೆಹರಿಸಬಹುದಿತ್ತು. ಆದರೆ ಸರ್ಕಾರದ ಮಂತ್ರಿಗಳು, ಸಂಸದರು, ಶಾಸಕರುಗಳು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಪ್ರತ್ಯಕ್ಷವಾಗಿ ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಇದು ಅಕ್ಷಮ್ಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆ, ಕಾಲೇಜುಗಳಲ್ಲಿ ಶಿರವಸ್ತ್ರ ಧರಿಸಬಹುದೇ ಇಲ್ಲವೇ ಎಂಬುದನ್ನು ಭಾರತ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಲಯಗಳು ತೀರ್ಮಾನಿಸಲಿ.‌‌ ಆದರೆ ನ್ಯಾಯಾಲಯದ ವಿಚಾರಣೆ ನಡೆಯುತ್ತಿರುವಾಗಲೇ ಮಕ್ಕಳನ್ನು ಬಳಸಿಕೊಂಡು ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ಎಷ್ಟು ಸರಿ?ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದರು. ನಮ್ಮದು ಶರಣರು,‌ ಸಂತರ ನಾಡು. ಇಂಥ ನಾಡಿಗೆ ಧರ್ಮಗಳ ಹೆಸರಲ್ಲಿ ಬೆಂಕಿ ಹಚ್ಚುತ್ತಿರುವ ದುಷ್ಟರು ಭವಿಷ್ಯದ ದಿನಗಳನ್ನು ಇನ್ನಷ್ಟು ಅಪಾಯಕಾರಿಯಾಗಿಸುತ್ತಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು-ನಾಲ್ಕು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿ ನಿಜಕ್ಕೂ ನಾಡಿನ ಭವಿಷ್ಯದ ಕುರಿತು ಆತಂಕವಾಗುತ್ತಿದೆ. ನಾವು ಎಂಥ ಸಮಾಜವನ್ನು ಕಟ್ಟುತ್ತಿದ್ದೇವೆ.? ಹದಿನೈದು-ಹದಿನಾರು ವಯಸ್ಸಿನ ಮಕ್ಕಳಲ್ಲಿ ಧರ್ಮದ್ವೇಷದ ವಿಷಬೀಜ‌ ಬಿತ್ತಲಾಗಿದೆ. ಇದರ ಪರಿಣಾಮ ಘೋರವಾಗಲಿದೆ. ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳಿಗೆ ಮೂರು‌ದಿನಗಳ ಕಾಲ ರಜೆ ಘೋಷಿಸಿರುವುದು ಸರಿಯಾದ ಕ್ರಮ. ಇನ್ನಷ್ಟು ಅಪಾಯಗಳು‌ ಆಗದಂತೆ‌ ತಡೆಯುವುದು ಅನಿವಾರ್ಯವಾಗಿತ್ತು. ಪರಿಸ್ಥಿತಿ ತಿಳಿಯಾದ ನಂತರ ಶಾಲೆ-ಕಾಲೇಜುಗಳನ್ನು ಆರಂಭಿಸಬೇಕು. ಪ್ರಚೋದನಾಕಾರಿಯಾಗಿ ಮಾತಾಡುವವರ ಬಾಯಿ ಮುಚ್ಚಿಸಬೇಕು.‌ ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಹೊರಗಡೆ ಧರಿಸುವಾಗ ಸಮಸ್ಯೆ ಆಗಲ್ಲ ಎಂದರೆ, ಕಾಲೇಜಿನ ಒಳಗಡೆ ಅದು ಸಮಸ್ಯೆಯಾಗದು: ನ್ಯಾಯಮೂರ್ತಿ ದೀಕ್ಷಿತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...