Homeಕರ್ನಾಟಕಉ.ಕರ್ನಾಟಕದ ಉರ್ದು ಶಾಲೆಗಳಿಗೂ ತಟ್ಟಿದ ಹಿಜಾಬ್ ಸಂಘರ್ಷ: ಶಾಲೆಗೆ ಬರದ 80 ವಿದ್ಯಾರ್ಥಿನಿಯರು

ಉ.ಕರ್ನಾಟಕದ ಉರ್ದು ಶಾಲೆಗಳಿಗೂ ತಟ್ಟಿದ ಹಿಜಾಬ್ ಸಂಘರ್ಷ: ಶಾಲೆಗೆ ಬರದ 80 ವಿದ್ಯಾರ್ಥಿನಿಯರು

- Advertisement -
- Advertisement -

ಹಿಜಾಬ್- ಕೇಸರಿ ಶಾಲು ಸಂಘರ್ಷದಿಂದ ರಜೆ ಘೋಷಿಸಲಾಗಿದ್ದ ಪ್ರೌಢಶಾಲೆಗಳು ನಿನ್ನೆಯಿಂದ ಆರಂಭಗೊಂಡಿವೆ. ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಹಿಜಾಬ್ ಕಳಚಿಟ್ಟು ಬರುವಂತೆ ತಿಳಿಸಿದ್ದರಿಂದ ಹಲವು ಮಕ್ಕಳು ಶಾಲೆಯಿಂದ ವಾಪಸ್ ತೆರಳಿವೆ. ಪರೀಕ್ಷೆ ಬಹಿಷ್ಕರಿಸಿದ್ದಾರೆ. ಇಂದು ಉತ್ತರ ಕರ್ನಾಟಕದ ಉರ್ದು ಶಾಲೆಗಳಿಗೂ ತಟ್ಟಿದ್ದು, ಶಾಲೆಗಳು ಖಾಲಿ ಹೊಡೆಯುತ್ತಿವೆ.

ಕಲಬುರ್ಗಿ ಸರ್ಕಾರಿ ಉರ್ದು ಶಾಲೆಯಲ್ಲಿ 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ನಿನ್ನೆ ಹಲವರು ಹಿಜಾಬ್ ಧರಿಸಿ ಬಂದಿದ್ದರು. ಆದರೆ, ಇದನ್ನು ಮಾಧ್ಯಮಗಳು ಪ್ರಶ್ನಿಸಿ ವರದಿ ಮಾಡಿದ್ದು. ಮಾಧ್ಯಮ ವರದಿಗಳ ನಂತರ ಬಿಇಒ ಅವರು ಹೈಕೋರ್ಟ್ ಆದೇಶವನ್ನು ಅನುಸರಿಸುವಂತೆ ಶಾಲಾ ಆಡಳಿತ ಮಂಡಳಿಯನ್ನು ಕೇಳಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಸುಮಾರು 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿಲ್ಲ. ಇದರಿಂದ ಶಿಕ್ಷಕರು ಆನ್‌ಲೈನ್ ತರಗತಿಯನ್ನು ನಡೆಸಬೇಕಾಯಿತು.

ಇದನ್ನೂ ಓದಿ: ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಪ್ರಶ್ನೆ

ಇನ್ನು ಗದಗದ ಸರ್ಕಾರಿ ಉರ್ದು ಶಾಲೆಯಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಿ ಕುಳಿತಿದ್ದ ವಿದ್ಯಾರ್ಥಿಗಳನ್ನು ಅಪರಿಚಿತ ಮಹಿಳೆಯೊಬ್ಬರು ಹೊರಗೆ ಕರೆತಂದಿದ್ದಾರೆ. ಇದರಿಂದ ಕೆಲಕಾಲ ಶಾಲಾ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ವಿದ್ಯಾರ್ಥಿನಿಯನ್ನು ಹೊರಗೆ ಕರೆತಂದ ಹಿನ್ನೆಲೆ ಪಾಲಕರು ಗೇಟ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಬಳಿಕ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ನಿನ್ನೆ, ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲೆಯ 13 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಪೂರ್ವಸಿದ್ಧತಾ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ತಿಳಿಸಿದ್ದರು. ಇದಕ್ಕೆ ಒಪ್ಪದ ಶಾಲೆಯವರು ಹಿಜಾಬ್ ತೆಗೆಯುವಂತೆ ತಿಳಿಸಿದ್ದಾರೆ. ಹಿಜಾಬ್ ತೆಗೆಯಲು ನಿರಾಕರಿಸಿದ 13 ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ವಾಪಸ್ ತೆರಳಿದ್ದರು.

ಈ ನಡುವೆ ರಾಜ್ಯದ ಅಲ್ಪಸಂಖ್ಯಾತರ ಶಾಸಕರ ನಿಯೋಗವು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ನಿಯೋಗದಲ್ಲಿ ಕಾಂಗ್ರೆಸ್ ಶಾಸಕರಾದ ಯು.ಟಿ ಖಾದರ್‍, ಜಮೀರ್‍ ಅಹ್ಮದ್, ತನ್ವೀರ್‌ ಸೇಠ್, ರಹೀಂ ಖಾನ್, ರಿಜ್ವಾನ್ ಅರ್ಷದ್ ಮತ್ತು ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

0
"ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ" ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ...