Homeಕರ್ನಾಟಕಹಿಜಾಬ್ - ಕೇಸರಿ ಶಾಲು ವಿವಾದ: ಉಡುಪಿಯ ಪ್ರೌಢಶಾಲಾ ವ್ಯಾಪ್ತಿಯಲ್ಲಿ ಫೆ.14 ರಂದು ನಿಷೇಧಾಜ್ಞೆ...

ಹಿಜಾಬ್ – ಕೇಸರಿ ಶಾಲು ವಿವಾದ: ಉಡುಪಿಯ ಪ್ರೌಢಶಾಲಾ ವ್ಯಾಪ್ತಿಯಲ್ಲಿ ಫೆ.14 ರಂದು ನಿಷೇಧಾಜ್ಞೆ ಜಾರಿ

- Advertisement -
- Advertisement -

ಹಿಜಾಬ್ ಕೇಸರಿ ಶಾಲು ವಿವಾದ ಆರಂಭವಾದ ಉಡುಪಿಯಲ್ಲಿ ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಫೆಬ್ರವರಿ 19 ರ ಸಂಜೆ 6 ರವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

ಹಿಜಾಬ್- ಕೇಸರಿ ಶಾಲು ಘರ್ಷಣೆ ನಂತರ ಜಿಲ್ಲೆಯಲ್ಲಿ  ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್ಪಿಸಿ) ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ರಾಜ್ಯದಲ್ಲಿ ಘರ್ಷಣೆ ಹೆಚ್ಚಾದ ಹಿನ್ನೆಲೆ ಶಾಲಾ- ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿತ್ತು. ಫೆಬ್ರವರಿ 14 ರಿಂದ ಪ್ರೌಢಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಫೆಬ್ರವರಿ 19 ರ ಸಂಜೆ 6 ರವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಉಡುಪಿ ಜಿಲ್ಲೆಯ ಮೂವರು ಉಪವಿಭಾಗಾಧಿಕಾರಿಗಳ ಮನವಿ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಡಿಸಿ ಕೂರ್ಮಾರಾವ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ವಿಷ್ಣುವರ್ಧನ್, ಫೆಬ್ರವರಿ 11 ರಂದು ಡಿಸಿಗೆ ಪತ್ರ ಬರೆದು ಶಾಲಾ ಆವರಣದಲ್ಲಿ ಶಾಂತಿಯುತ ವಾತಾವರಣವನ್ನು ಇರಿಸಲು ನಿಷೇಧಾಜ್ಞೆ ಜಾರಿಗೊಳಿಸಬೇಕು ಎಂದು ತಿಳಿಸಿದ್ದಾರೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆ ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ, ಪರ- ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ, ಜಾತಿ ಧರ್ಮದ ವಿರುದ್ಧ ನಡೆದುಕೊಳ್ಳುವಂತಿಲ್ಲ. ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸುತ್ತದೆ. ಯಾವುದೇ ಪ್ರಚೋದನಕಾರಿ ಘೋಷಣೆಗಳನ್ನು ಕೂಗುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಉಡುಪಿಯಲ್ಲಿ ಹಿಜಾಬ್ ಧರಿಸಿ ಬಮದಿದ್ದ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿನಿಯರು ಎರಡು ವಾರಕ್ಕೂ ಹೆಚ್ಚು ದಿನ ಪ್ರತಿಭಟನೆ ನಡೆಸುತ್ತಿದ್ದರು. ಬಳಿಕ ಇದು ಹಿಜಾಬ್- ಕೇಸರಿ ಶಾಲು ವಿವಾದವಾಗಿ ಕುಂದಾಪುರದ ಕಾಲೇಜಿಗೆ ಹಬ್ಬಿತು. ಅಲ್ಲಿಂದ ರಾಜ್ಯದ ಇತರ ಕಾಲೇಜುಗಳಿಗೆ ಹರಡಿ ದೊಡ್ಡ ವಿವಾದವಾಗಿದೆ.


ಇದನ್ನೂ ಓದಿ: ಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...