Homeಕರ್ನಾಟಕಹಿಜಾಬ್‌‌- ಕೇಸರಿ ಶಾಲು ವಿವಾದ: ಮೂರು ದಿನ ಶಾಲಾ-ಕಾಲೇಜುಗಳಿಗೆ ರಜೆ

ಹಿಜಾಬ್‌‌- ಕೇಸರಿ ಶಾಲು ವಿವಾದ: ಮೂರು ದಿನ ಶಾಲಾ-ಕಾಲೇಜುಗಳಿಗೆ ರಜೆ

- Advertisement -
- Advertisement -

ವಿದ್ಯಾರ್ಥಿಗಳು ಹಿಜಾಬ್ ಧರಿಸುವ ಸಂಬಂಧ ರಾಜ್ಯದಲ್ಲಿ ವಿವಾದ ಭುಗಿಲೆದ್ದಿದೆ. ವಿದ್ಯಾರ್ಥಿಗಳು ಎಲ್ಲೆಡೆ ಕೇಸರಿ ಶಾಲು ಧರಿಸಿ ಬಂದು ದಾಂಧಲೆ ಎಬ್ಬಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಎಲ್ಲಾ ಪ್ರೌಢಶಾಲೆ ಹಾಗೂ ಕಾಲೇಜುಗಳನ್ನು ಮುಂದಿನ ಮೂರು ದಿನಗಳ ಕಾಲ ಮುಚ್ಚಲು ಸರ್ಕಾರ ನಿರ್ಧರಿಸಿದೆ.

ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚುವಂತೆ ಆದೇಶಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಉಡುಪಿಯ ಸರ್ಕಾರಿ ಕಾಲೇಜಿನ ಐವರು ಮಹಿಳೆಯರು ಹಿಜಾಬ್ ನಿರ್ಬಂಧವನ್ನು ಪ್ರಶ್ನಿಸಿ, ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸುತ್ತಿದೆ. ವಿಚಾರಣೆಯನ್ನು ನಾಳೆಗೂ ಮುಂದೂಡಿದೆ.

ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಶಾಂತಿ ಕಾಪಾಡುವಂತೆ ನ್ಯಾಯಾಲಯ ಹೇಳಿದೆ. “ಈ ನ್ಯಾಯಾಲಯವು ಸಾರ್ವಜನಿಕರ ಬುದ್ಧಿವಂತಿಕೆ ಮತ್ತು ಸದ್ಗುಣದಲ್ಲಿ ಸಂಪೂರ್ಣ ನಂಬಿಕೆಯನ್ನು ಇಟ್ಟಿದೆ. ಅದನ್ನು ಆಚರಣೆಗೆ ತರಬೇಕೆಂದು ನ್ಯಾಯಾಲಯ ಆಶಿಸುತ್ತಿದೆ” ಎಂದು ನ್ಯಾಯಮೂರ್ತಿ ದೀಕ್ಷಿತ್ ಕೃಷ್ಣ ಶ್ರೀಪಾದ್ ಹೇಳಿದ್ದಾರೆ.

ಇಂದು ನ್ಯಾಯಾಲಯದ ಕಲಾಪ ಮುಗಿಯುವ ಮುನ್ನವೇ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, “ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ” ಎಂದಿದ್ದಾರೆ.

“ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...