Homeಕರ್ನಾಟಕಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್‌‌, ಕೇಸರಿ ವಿಚಾರಣೆ ಮುಂದೂಡಿಕೆ

ಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್‌‌, ಕೇಸರಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಕರ್ನಾಟಕದಲ್ಲಿ ಕಾಲೇಜುಗಳು ಮತ್ತೆ ತೆರೆಯಬಹುದು. ಆದರೆ ವಿಷಯ ಬಾಕಿ ಇರುವವರೆಗೆ ವಿದ್ಯಾರ್ಥಿಗಳು ಧಾರ್ಮಿಕವಾದ ಯಾವುದೇ ವಸ್ತ್ರಗಳನ್ನು ಧರಿಸಲು ಅನುಮತಿಸಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಗುರುವಾರ ಹೇಳಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಗೆ ಮಧ್ಯಂತರ ಆದೇಶ ನೀಡುವುದಾಗಿ ಮುಖ್ಯ ನ್ಯಾಯಮೂರ್ತಿಯವರು ಹೇಳಿದ್ದು, ವಿಚಾರಣೆಯನ್ನು ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿದ್ದಾರೆ.

ಪೀಠದಲ್ಲಿ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿಯುದ್ದೀನ್ ಇಂದು ವಿಚಾರಣೆಯನ್ನು ನಡೆಸಿದರು.

ಅರ್ಜಿದಾರ ವಿದ್ಯಾರ್ಥಿಯರ ಪರವಾಗಿ ವಾದಿಸಿದ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ ಮತ್ತು ದೇವದತ್‌ ಕಾಮತ್‌, “ಮಧ್ಯಂತರ ಆದೇಶ” ನೀಡುವಂತೆ ನ್ಯಾಯಾಲಯವನ್ನು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಮೂರ್ತಿಯವರು ಮಾತನಾಡಿ, ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ನಾವು ಆದೇಶವನ್ನು ನೀಡುತ್ತೇವೆ. ಆದರೆ ವಿಷಯವು ಇಲ್ಲಿ ಬಾಕಿ ಇರುವವರೆಗೆ ಯಾವುದೇ ವಿದ್ಯಾರ್ಥಿಯು ಧಾರ್ಮಿಕ ಉಡುಗೆಯನ್ನು ಧರಿಸಲು ಒತ್ತಾಯಿಸಬಾರದು ಎಂದು ತಿಳಿಸಿದ್ದಾರೆ.

ಸಮಸ್ಯೆಯನ್ನು ಆದಷ್ಟು ಬೇಗ ನಿರ್ಧರಿಸಲು ನಾವು ಸಿದ್ಧರಿದ್ದೇವೆ. ಆದರೆ ಶಾಂತಿ ಮತ್ತು ನೆಮ್ಮದಿಯನ್ನು ಪುನಃಸ್ಥಾಪಿಸಬೇಕು ಎಂದು ನಾವು ಭಾವಿಸುತ್ತೇವೆ. ನಿರ್ಧಾರದ ತನಕ, ಅನುಕೂಲಕರವಲ್ಲದ ಈ ಧಾರ್ಮಿಕ ಬಟ್ಟೆಗಳನ್ನು ಧರಿಸಲು ನೀವು ಒತ್ತಾಯಿಸಬಾರದು ಎಂದು ತಿಳಿಸಿದ್ದಾರೆ.

ನಾವು ವಿಚಾರಣೆ ನಡೆಸುತ್ತಿರುವಾಗ ಪ್ರತಿಯೊಬ್ಬರೂ ಧಾರ್ಮಿಕ ಆಚರಣೆಗಳನ್ನು ಅಳವಡಿಸಿಕೊಳ್ಳುವುದನ್ನು ನಿರ್ಬಂಧಿಸುತ್ತೇವೆ. ಸೋಮವಾರ ಮಧ್ಯಾಹ್ನ 2.30ಕ್ಕೆ ಮತ್ತೆ ಪ್ರಕರಣದ ವಿಚಾರಣೆ ನಡೆಸುತ್ತೇವೆ ಎಂದು ಕೋರ್ಟ್ ಹೇಳಿದೆ.


ವಿಚಾರಣೆಯ ಸಂಕ್ಷಿಪ್ತ ಮಾಹಿತಿಯನ್ನು ಇಲ್ಲಿ ಓದಿರಿ: | ಹಿಜಾಬ್‌ ಲೈವ್‌ | ಮಧ್ಯಂತರ ಆದೇಶ ನೀಡುವಂತೆ ವಿದ್ಯಾರ್ಥಿನಿಯರ ಪರ ವಕೀಲರ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಮನುಷ್ಯ ತ್ವಕ್ಕಿಂತ ದೊಡ್ಡ ಧರ್ಮವಿಲ್ಲ ಎಂದು ತಿಳಿದವರು ನಾವು ಮತ್ತದೇ ತಪ್ಪನ್ನ ಮಾಡಲು ನಾಚಿಕೆ ಆಗಬೇಕು

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...