Homeಮುಖಪುಟಕೊರೊನಾ ತಡೆಗಟ್ಟಲು ಪ್ಲಾಟ್‌ಫಾರ್ಮ್ ಟಿಕೆಟ್ ದರ 50 ರೂಗೆ ಏರಿಸಿದ್ದೇವೆ: ರೈಲ್ವೆ ಇಲಾಖೆ

ಕೊರೊನಾ ತಡೆಗಟ್ಟಲು ಪ್ಲಾಟ್‌ಫಾರ್ಮ್ ಟಿಕೆಟ್ ದರ 50 ರೂಗೆ ಏರಿಸಿದ್ದೇವೆ: ರೈಲ್ವೆ ಇಲಾಖೆ

ಈ ನಿಯಮಗಳು ಹೊಸದಲ್ಲ. ಈ ಮೊದಲು, ಹಬ್ಬಗಳ ಸಮಯದಲ್ಲಿ ಇದನ್ನು ಜಾರಿ ಮಾಡಲಾಗುತ್ತಿತ್ತು. ನಂತರ ಹಿಂದಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ

- Advertisement -
- Advertisement -

ಇತ್ತೀಚೆಗೆ ದೇಶದ ಕೆಲವು ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ಮೊತ್ತ 50 ರೂಪಾಯಿಗೆ ಏರಿಸಿದ್ದು, ತಾತ್ಕಾಲಿಕ ಕ್ರಮವಾಗಿದೆ. ಈ ನಿರ್ಧಾರ ಕೊರೊನಾವೈರಸ್ ಸಾಂಕ್ರಾಮಿಕದ ಸಮಯದಲ್ಲಿ ಜನಸಂದಣಿಯನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಶುಕ್ರವಾರ ಸ್ಪಷ್ಟಪಡಿಸಿದೆ.

ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ದರವನ್ನು ಇತ್ತೀಚೆಗೆ ಕೆಲವು ರೈಲು ನಿಲ್ದಾಣಗಳಲ್ಲಿ 50 ರೂಪಾಯಿಗಳವರೆಗೂ ಹೆಚ್ಚಿಸಲಾಗಿದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ನಿರುತ್ಸಾಹಗೊಳಿಸುವ, ತಡೆಯುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ಜೊತೆಗೆ ಅಲ್ಪ-ದೂರ ಪ್ರಯಾಣದ ಟಿಕೆಟ್ ದರವನ್ನೂ ಹೆಚ್ಚು ಮಾಡುವ ಯೋಜನೆಯಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

“ಕೆಲವು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರದಲ್ಲಿ ಪ್ರಸ್ತುತ ಹೆಚ್ಚಳವು ಜನಸಂದಣಿಯ ಮೂಲಕ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಒಂದು” ತಾತ್ಕಾಲಿಕ “ಕ್ರಮವಾಗಿದೆ. ಲಾಕ್‌ಡೌನ್ ನಂತರ ಮಾರ್ಚ್‌ನಲ್ಲಿ ಈ ನಿಯಮ ಜಾರಿಗೆ ತರಲಾಗಿದೆ. ಭಾರೀ ಜನಸಂದಣಿ ಕಾಣಿಸಿಕೊಳ್ಳುವ ಸೀಮಿತ ಸಂಖ್ಯೆಯ ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ” ಎಂದು ರೈಲ್ವೆ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೇರಿದರೆ ಮಹಿಳೆಯರಿಗೆ 50% ಮೀಸಲಾತಿ

ರೈಲು ನಿಲ್ದಾಣಗಳಲ್ಲಿ ಜನಸಂದಣಿಯನ್ನು ತಡೆಗಟ್ಟಲು ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ಹೆಚ್ಚಿಸುವ ಅಧಿಕಾರವನ್ನು 2015 ರಿಂದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ (ಡಿಆರ್‌ಎಂ) ವಹಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಈ ರೀತಿಯ ನಿಯಮಗಳು ಅನೇಕ ವರ್ಷಗಳಿಂದ ಆಚರಣೆಯಲ್ಲಿದೆ. ಸಾಂದರ್ಭಿಕವಾಗಿ ಇದನ್ನು “ಅಲ್ಪಾವಧಿಯ ಜನಸಮೂಹ ನಿಯಂತ್ರಣ ಮಾಪಕವಾಗಿ” ಬಳಸಲಾಗುತ್ತದೆ ಎಂದು ಹೇಳಲಾಗಿದೆ. ಮುಂಬೈ ವಿಭಾಗದ ಒಟ್ಟು 78 ನಿಲ್ದಾಣಗಳಲ್ಲಿ ಕೇವಲ ಏಳು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರ ಹೆಚ್ಚಳವನ್ನು ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.

ಈ ನಿಯಮಗಳು ಹೊಸದಲ್ಲ. ಈ ಮೊದಲು, ಹಬ್ಬಗಳ ಸಮಯದಲ್ಲಿ ಇದನ್ನು ಜಾರಿ ಮಾಡಲಾಗುತ್ತಿತ್ತು. ನಂತರ ಹಿಂದಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ: ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ

ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸೇರಿದಂತೆ ಐವರನ್ನು ಖುಲಾಸೆಗೊಳಿಸಿ ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯ ಬುಧವಾರ (ನವೆಂಬರ್ 26) ತೀರ್ಪು ನೀಡಿದೆ ಎಂದು ಬಾರ್ & ಬೆಂಚ್ ವರದಿ...

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ -...