Homeಮುಖಪುಟಹಿಮಾಚಲ ರಾಜಕೀಯ ಬಿಕ್ಕಟ್ಟು: 15 ಬಿಜೆಪಿ ಶಾಸಕರನ್ನು ಉಚ್ಚಾಟಿಸಿದ ವಿಧಾನಸಭೆ ಸ್ಪೀಕರ್

ಹಿಮಾಚಲ ರಾಜಕೀಯ ಬಿಕ್ಕಟ್ಟು: 15 ಬಿಜೆಪಿ ಶಾಸಕರನ್ನು ಉಚ್ಚಾಟಿಸಿದ ವಿಧಾನಸಭೆ ಸ್ಪೀಕರ್

- Advertisement -
- Advertisement -

ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದ ವಿಧಾನಸಭೆಯು 15 ಬಿಜೆಪಿ ಶಾಸಕರನ್ನು ಘೋಷಣೆಗಳನ್ನು ಕೂಗಿದ ಮತ್ತು ದುರ್ವರ್ತನೆ ಆರೋಪದ ಮೇಲೆ ಉಚ್ಚಾಟಿಸಿದೆ. ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಬಿಜೆಪಿ ಪರವಾಗಿ ಅಡ್ಡ ಮತದಾನ ಮಾಡಿದ ಒಂದು ದಿನದ ನಂತರ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಉದ್ವಿಗ್ನತೆಯ ನಡುವೆ ಈ ಬೆಳವಣಿಗೆ ನಡೆದಿದೆ.

ಇಂದು ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ 15 ಬಿಜೆಪಿ ಶಾಸಕರನ್ನು ಉಚ್ಚಾಟಿಸುವ ನಿರ್ಧಾರವನ್ನು ಸ್ಪೀಕರ್ ತೆಗೆದುಕೊಂಡಿದ್ದಾರೆ. ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರ ಕೊಠಡಿಯೊಳಗೆ ಅವರು ಘೋಷಣೆಗಳನ್ನು ಕೂಗಿದ್ದರು.

ಉಚ್ಛಾಟಿತ ಬಿಜೆಪಿ ಶಾಸಕರೆಂದರೆ ಜೈರಾಮ್ ಠಾಕೂರ್, ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ, ಲೋಕೇಂದರ್ ಕುಮಾರ್, ವಿನೋದ್ ಕುಮಾರ್, ಹನ್ಸ್ ರಾಜ್, ಜನಕ್ ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದರ್ ಶೋರಿ, ದೀಪ್ ರಾಜ್, ಪುರಾನ್ ಠಾಕೂರ್, ಇಂದರ್ ಸಿಂಗ್ ಗಾಂಧಿ, ದಿಲೀಪ್ ಠಾಕೂರ್, ಮತ್ತು ಇಂದರ್ ಸಿಂಗ್ ಗಾಂಧಿ.

ಜೈರಾಮ್ ಠಾಕೂರ್ ಅವರು ಇಂದು ಮುಂಜಾನೆ ತಮ್ಮನ್ನು ಹೊರಹಾಕುವ ಆತಂಕವನ್ನು ವ್ಯಕ್ತಪಡಿಸಿದರು. “ವಿಧಾನಸಭೆಯಲ್ಲಿ ಬಜೆಟ್ ಅನ್ನು ಅಂಗೀಕರಿಸಲು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಬಹುದು ಎಂದು ನಾವು ಭಯಪಡುತ್ತೇವೆ” ಎಂದು ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದರು.

ಹಿಮಾಚಲ ಪ್ರದೇಶ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಿಜೆಪಿ ಶಾಸಕರ ನಿಯೋಗ

ಬಿಜೆಪಿ ನಿನ್ನೆ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನವನ್ನು ಗೆದ್ದುಕೊಂಡಿದೆ, ಅದರ ಅಭ್ಯರ್ಥಿ ಹರ್ಷ್ ಮಹಾಜನ್ ಅವರು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವರನ್ನು ಆಡಳಿತಾರೂಢ ಕಾಂಗ್ರೆಸ್‌ನ ಆರು ಶಾಸಕರು ಅಡ್ಡ ಮತದಾನ ಮಾಡಿದ ಕಾರಣ ಸೋಲಿಸಿದರು.

ರಾಜ್ಯಸಭಾ ಚುನಾವಣೆಯಿಂದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಸ್ಪಷ್ಟಪಡಿಸಿದೆ ಎಂದು  ಠಾಕೂರ್ ಹೇಳಿದರು. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ರಾಜೀನಾಮೆಗೆ ಒತ್ತಾಯಿಸಿದರು.

ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ರಾಜೀನಾಮೆ ನಿರ್ಧಾರವು ಪಕ್ಷದಲ್ಲಿ ಬಿರುಕುಗಳನ್ನು ಉಂಡು ಮಾಡಿದೆ. ಅದು ಈಗ ತನ್ನ ಸರ್ಕಾರದ ಪತನವನ್ನು ತಡೆಯಲು ತನ್ನ ಶಾಸಕರನ್ನು ಹಾಗೇ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ. ವಿಕ್ರಮಾದಿತ್ಯ ಸಿಂಗ್ ಅವರು ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ಮತ್ತು ಶಿಮ್ಲಾ ಗ್ರಾಮಾಂತರದ ಶಾಸಕರಾಗಿದ್ದಾರೆ.

ಇದನ್ನೂ ಓದಿ; ಹಿಮಾಚಲ ವಿಧಾನಸಭೆಯಿಂದ ಶಾಸಕರ ‘ಅನರ್ಹತೆ’ ಆತಂಕ; ರಾಜ್ಯಪಾಲರನ್ನು ಸಂಪರ್ಕಿಸಿದ ಬಿಜೆಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆರ್‌ಟಿಐ ಕಾರ್ಯಕರ್ತ ಅಮಿತ್ ಜೇತ್ವಾ ಹತ್ಯೆ ಪ್ರಕರಣ: ಬಿಜೆಪಿಯ ಮಾಜಿ ಸಂಸದ ಸೇರಿ ಎಲ್ಲಾ...

0
ಆರ್‌ಟಿಐ ಕಾರ್ಯಕರ್ತ ಮತ್ತು ಪರಿಸರವಾದಿ ಅಮಿತ್ ಜೇತ್ವಾ ಹತ್ಯೆ ಪ್ರಕರಣದಲ್ಲಿ ಜುನಾಗಡದ ಬಿಜೆಪಿಯ ಮಾಜಿ ಸಂಸದ ದಿನು ಬೋಘಾ ಸೋಲಂಕಿ ಮತ್ತು ಇತರ ಆರು ಜನರನ್ನು ಗುಜರಾತ್ ಹೈಕೋರ್ಟ್‌ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಎಎಸ್ ಸುಪೇಹಿಯಾ...